ಮುಂಬೈ: ಸತತ 3ನೇ ದಿನವೂ ಭಾರತೀಯ ಷೇರುಮಾರುಕಟ್ಟೆ ಭಾರಿ ಏರಿಕೆ ಕಂಡಿದ್ದು, ಬುಧವಾರವೂ ಷೇರುಮಾರುಕಟ್ಟೆ ಸೂಚ್ಯಂಕಗಳು ಗ್ರೀನ್ ನಲ್ಲಿ ವಹಿವಾಟು ಅಂತ್ಯಗೊಳಿಸಿದೆ.
ಬುಧವಾರ ಭಾರತೀಯ ಷೇರುಮಾರುಕಟ್ಟೆ ಉತ್ತಮ ಪ್ರಮಾಣದ ಚೇತರಿಕೆ ಕಂಡಿದ್ದು, ಷೇರುಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಎರಡೂ ಗ್ರೀನ್ ನಲ್ಲಿ ವಹಿವಾಟು ಅಂತ್ಯಗೊಳಿಸಿದೆ.
ಇಂದಿನ ವಹಿವಾಟಿನಲ್ಲಿ ಸೆನ್ಸೆಕ್ಸ್ ಶೇ.0.71ರಷ್ಟು ಏರಿಕೆ ಕಂಡಿದ್ದರೆ, ನಿಫ್ಟಿ ಕೂಡ ಶೇ.0.70ರಷ್ಟು ಏರಿಕೆ ದಾಖಲಿಸಿದೆ. ಸೆನ್ಸೆಕ್ಸ್ ಇಂದು ಬರೊಬ್ಬರಿ 595.19ಅಂಕಗಳ ಏರಿಕೆಯೊಂದಿಗೆ 84,466.51 ಅಂಕಗಳಿಗೆ ಏರಿಕೆಯಾಗಿದ್ದರೆ, ನಿಫ್ಟಿ 180.85 ಅಂಕಗಳ ಏರಿಕೆಯೊಂದಿಗೆ 25,875.80 ಅಂಕಗಳಿಗೆ ಏರಿಕೆಯಾಗಿ ದಿನದ ವಹಿವಾಟು ಅಂತ್ಯಗೊಳಿಸಿದೆ.
ಇಂದಿನ ವಹಿವಾಟಿನಲ್ಲಿ ರಿಯಾಲಿಟಿ ವಿಭಾಗದ ಷೇರುಗಳು ಹೊರತು ಪಡಿಸಿ ಉಳಿದೆಲ್ಲಾ ವಿಭಾಗದ ಷೇರುಗಳ ಮೌಲ್ಯ ಏರಿಕೆ ಕಂಡಿದೆ.
ಯಾರಿಗೆ ಲಾಭ? ಯಾರಿಗೆ ನಷ್ಟ?
ಇಂದಿನ ವಹಿವಾಟಿನಲ್ಲಿ ನಿಫ್ಟಿಯಲ್ಲಿ ಪಟ್ಟಿ ಮಾಡಲಾದ ಸಂಸ್ಥೆಗಳ ಪೈಕಿ ಏಷ್ಯನ್ ಪೇಂಟ್ಸ್, ಅದಾನಿ ಎಂಟರ್‌ಪ್ರೈಸಸ್, ಟೆಕ್ ಮಹೀಂದ್ರಾ, ಟಿಸಿಎಸ್, ಎಚ್‌ಡಿಎಫ್‌ಸಿ ಲೈಫ್, ಸಂಸ್ಥೆಯ ಷೇರುಗಳು ಲಾಭಾಂಶ ಕಂಡಿದೆ. ಅಂತೆಯೇ ಟಾಟಾ ಸ್ಟೀಲ್, ಟಿಎಂಪಿವಿ, ಭಾರತ್ ಎಲೆಕ್ಟ್ರಾನಿಕ್ಸ್, ಶ್ರೀರಾಮ್ ಫೈನಾನ್ಸ್, ಗ್ರಾಸಿಮ್ ಇಂಡಸ್ಟ್ರೀಸ್ ಸಂಸ್ಥೆಯ ಷೇರುಗಳು ನಷ್ಟ ಕಂಡಿವೆ.
ಭಾರತ ಮತ್ತು ಅಮೆರಿಕ ನಡುವಿನ ವ್ಯಾಪಾರ ಸಂವಾದದ ನಿರೀಕ್ಷೆಗಳನ್ನು ಸುಧಾರಿಸುವ ಬಗ್ಗೆ ಆಶಾವಾದ ಮತ್ತು ಪ್ರಮುಖ ಕಾರ್ಪೊರೇಟ್‌ಗಳಿಂದ ಬಂದ ಎರಡನೇ ತ್ರೈಮಾಸಿಕದ ಗಳಿಕೆಗಳು ಹೂಡಿಕೆದಾರರ ಭಾವನೆಯನ್ನು ಮತ್ತಷ್ಟು ಹೆಚ್ಚಿಸಿದ್ದರಿಂದ ಇಂದು ಮಾರುಕಟ್ಟೆ ಚೇತೋಹಾರಿ ವಹಿವಾಟು ನಡೆಸಿದೆ.