ಮುಂಬೈ: ಚೀನಾ ಮೇಲೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಸುಂಕ ಪ್ರಹಾರ ಮುಂದುವರೆದಂತೆ ಇತ್ತ ಅದರ ಪರಿಣಾಮ ಭಾರತೀಯ ಷೇರುಮಾರುಕಟ್ಟೆ ಮೇಲೂ ಆಗಿದ್ದು, ಸೆನ್ಸೆಕ್ಸ್ ಅಲ್ಪ ಪ್ರಮಾಣದ ಕುಸಿದಿದೆ.
ಸೋಮವಾರ ಭಾರತೀಯ ಷೇರುಮಾರುಕಟ್ಟೆ ಅಲ್ಪ ಪ್ರಮಾಣದ ಚೇತರಿಕೆ ಕಂಡಿದ್ದು, ಷೇರುಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಎರಡೂ ರೆಡ್ ನಲ್ಲಿ ವಹಿವಾಟು ಅಂತ್ಯಗೊಳಿಸಿದೆ.
ಇಂದಿನ ವಹಿವಾಟಿನಲ್ಲಿ ಸೆನ್ಸೆಕ್ಸ್ ಶೇ.0.21ರಷ್ಟು ಇಳಿಕೆ ಕಂಡಿದ್ದರೆ, ನಿಫ್ಟಿ ಕೂಡ ಶೇ.0.23ರಷ್ಟು ಕುಸಿತ ದಾಖಲಿಸಿದೆ. ಸೆನ್ಸೆಕ್ಸ್ ಇಂದು 173.77 ಅಂಕಗಳ ಇಳಿಕೆಯೊಂದಿಗೆ 82,327.05 ಅಂಕಗಳಿಗೆ ಏರಿಕೆಯಾಗಿದ್ದರೆ, ನಿಫ್ಟಿ 58.00 ಅಂಕಗಳ ಇಳಿಕೆಯೊಂದಿಗೆ 25,227.35 ಅಂಕಗಳಿಗೆ ಏರಿಕೆಯಾಗಿ ದಿನದ ವಹಿವಾಟು ಅಂತ್ಯಗೊಳಿಸಿದೆ.
ಇಂದಿನ ವಹಿವಾಟಿನಲ್ಲಿ ಐಟಿ, ಬಂಡವಾಳ ಸರಕುಗಳ ವಿಭಾಗದ ಷೇರುಗಳ ಅತಿಯಾದ ಮಾರಾಟ ಪ್ರವೃತ್ತಿ ಮಾರುಕಟ್ಟೆ ಕುಸಿತಕ್ಕೆ ಕಾರಣವಾಯಿತು. ಅಲ್ಲದೆ ಇದೇ ನವೆಂಬರ್ 1 ರಿಂದ ಜಾರಿಗೆ ಬರುವಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಚೀನಾ ಮೇಲೆ ಹೆಚ್ಚುವರಿ ಶೇ.100ರಷ್ಟು ಸುಂಕ ಹೇರಿರುವುದೂ ಕೂಡ ಮಾರುಕಟ್ಟೆ ಮೇಲೆ ಪರಿಣಾಮ ಬೀರಿದೆ.
ಯಾರಿಗೆ ಲಾಭ? ಯಾರಿಗೆ ನಷ್ಟ?
ಇಂದಿನ ವಹಿವಾಟಿನಲ್ಲಿ ಸೆನ್ಸೆಕ್ಸ್ ನಲ್ಲಿ ಪಟ್ಟಿ ಮಾಡಲಾದ ಸಂಸ್ಥೆಗಳ ಪೈಕಿ ಅದಾನಿ ಪೋರ್ಟ್ಸ್, ಬಜಾಜ್ ಫೈನಾನ್ಸ್, ಬಜಾಜ್ ಫಿನ್‌ಸರ್ವ್ ಮತ್ತು ಆಕ್ಸಿಸ್ ಬ್ಯಾಂಕ್ ಸಂಸ್ಥೆಯ ಷೇರುಗಳು ಲಾಭಾಂಶ ಕಂಡಿದೆ. ಅಂತೆಯೇ ಟಾಟಾ ಮೋಟಾರ್ಸ್, ಇನ್ಫೋಸಿಸ್, ಹಿಂದೂಸ್ತಾನ್ ಯೂನಿಲಿವರ್, ಪವರ್ ಗ್ರಿಡ್, ಭಾರತ್ ಎಲೆಕ್ಟ್ರಾನಿಕ್ಸ್, ಐಟಿಸಿ, ಅಲ್ಟ್ರಾಟೆಕ್ ಸಿಮೆಂಟ್ ಮತ್ತು ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ ಸಂಸ್ಥೆಯ ಷೇರುಗಳು ನಷ್ಟ ಕಂಡಿವೆ.