Online Desk
ವಾಣಿಜ್ಯ

ರೈತರಿಗೆ ಭರ್ಜರಿ ಗುಡ್ ನ್ಯೂಸ್; ಮುಂದಿನ 5 ವರ್ಷಗಳಿಗೆ PM-KISAN ಯೋಜನೆ ಮುಂದುವರೆಸಿದ ಮೋದಿ ಸರ್ಕಾರ

ಕೇಂದ್ರ ಸರ್ಕಾರ ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟಿದೆ. ಅರ್ಹ ರೈತ ಕುಟುಂಬಗಳಿಗೆ ವರ್ಷಕ್ಕೆ 6,000 ಆರ್ಥಿಕ ಸಹಾಯ ನೀಡುವ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ಮುಂದಿನ 5 ವರ್ಷಗಳವರೆಗೆ, ಅಂದರೆ 2030-31ರ ಆರ್ಥಿಕ ವರ್ಷದವರೆಗೆ ವಿಸ್ತರಿಸಲು ಕೇಂದ್ರ ಸರ್ಕಾರ ಸರ್ಕಾರ ಮುಂದಾಗಿದೆ.

ನವದೆಹಲಿ: ಕೇಂದ್ರ ಸರ್ಕಾರ ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟಿದೆ. ಹೌದು, ಅರ್ಹ ರೈತ ಕುಟುಂಬಗಳಿಗೆ ವರ್ಷಕ್ಕೆ ₹6,000 ಆರ್ಥಿಕ ಸಹಾಯ ನೀಡುವ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISAN) ಯೋಜನೆಯನ್ನು ಮುಂದಿನ 5 ವರ್ಷಗಳವರೆಗೆ, ಅಂದರೆ 2030-31ರ ಆರ್ಥಿಕ ವರ್ಷದವರೆಗೆ ವಿಸ್ತರಿಸಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

ಏನಿದು PM-KISAN ಯೋಜನೆ?

ಫೆಬ್ರವರಿ 24, 2019 ರಂದು ಪ್ರಾರಂಭವಾದ PM-KISAN ಯೋಜನೆ ಅಂದ್ರೆ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಅರ್ಹ ರೈತ ಕುಟುಂಬಗಳಿಗೆ ವರ್ಷಕ್ಕೆ ₹6,000 ಆದಾಯ ಅಂದ್ರೆ ತಲಾ ₹ 2,000 ರಂತೆ ಮೂರು ಸಮಾನ ಕಂತುಗಳಲ್ಲಿ ಪ್ರತಿ 4 ತಿಂಗಳಿಗೊಮ್ಮೆ ನೀಡಲಾಗುತ್ತದೆ.

ಮುಂದುವರೆದು, ಮೋದಿ ನೇತೃತ್ವದ ಕೇಂದ್ರ ಸರಕಾರವು ಮುಂದಿನ 5 ವರ್ಷಗಳ ಅವಧಿಗೆ (2026-27 ರಿಂದ 2030-31) ಈ ಯೋಜನೆಗಾಗಿ ₹3,15,614 ಕೋಟಿ ಭಾರಿ ಮೊತ್ತವನ್ನು ಮೀಸಲಿಟ್ಟಿದೆ. ಅದರಂತೆ, ಯೋಜನೆ ಆರಂಭವಾದಾಗಿನಿಂದ ಇದುವರೆಗೆ 23 ಕಂತುಗಳ ಮೂಲಕ ರೈತರ ಖಾತೆಗಳಿಗೆ ₹4.47 ಲಕ್ಷ ಕೋಟಿಗಿಂತಲೂ ಹೆಚ್ಚು ಹಣವನ್ನು ಯಶಸ್ವಿಯಾಗಿ ವರ್ಗಾಯಿಸಲಾಗಿದೆ. ಅದರಲ್ಲೂ, ಒಟ್ಟು ಫಲಾನುಭವಿಗಳಲ್ಲಿ ನಾಲ್ಕನೇ ಒಂದು ಭಾಗದಷ್ಟು ಮಹಿಳಾ ರೈತರಿದ್ದು, ಅವರಿಗೆ ಇದುವರೆಗೆ ₹1.06 ಲಕ್ಷ ಕೋಟಿಗೂ ಅಧಿಕ ಹಣ ತಲುಪಿದೆ ಎಂದು ನೀತಿ ಆಯೋಗ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMC ಹೆಸರು, ಚಿಹ್ನೆ ಮುಟ್ಟುಗೋಲು: ಚುನಾವಣಾ ಆಯೋಗ ಆದೇಶಕ್ಕೆ ತೀವ್ರ ಆಕ್ರೋಶ; 'ಪ್ರತಿಭಟನೆಯೊಂದಿಗೆ' ಹೊಸ ಹೆಸರು, ಚಿಹ್ನೆ ಆಯ್ಕೆ ಸಲ್ಲಿಸಿದ ಮಮತಾ ಬ್ಯಾನರ್ಜಿ!

TMC ಹೆಸರು, ಚಿಹ್ನೆ ಮುಟ್ಟುಗೋಲು: 'Vote chori, govt chori ಆಯ್ತು, ಈಗ ಪಾರ್ಟಿ ಚೋರಿ': ಚುನಾವಣಾ ಆಯೋಗದ ವಿರುದ್ಧ ರಾಹುಲ್ ಗಾಂಧಿ ಕಿಡಿ

ದಿಗ್ಬಂಧನ ಉಲ್ಲಂಘಿಸಿದ ಟ್ಯಾಂಕರ್‌ ಮೇಲೆ Iran ಭೀಕರ ದಾಳಿ: ಸಮುದ್ರ ಮಧ್ಯದಲ್ಲೇ ಹೊತ್ತಿ ಉರಿದ ಹಡಗು, Hormuz ಜಲಸಂಧಿಯಲ್ಲಿ ಹೆಚ್ಚಿದ ಉದ್ವಿಗ್ನತೆ..!

TMC ಪಕ್ಷದ ಹೆಸರು, ಚಿಹ್ನೆ ಫ್ರೀಜ್ ಮಾಡಿದ ಚುನಾವಣಾ ಆಯೋಗ: ಉಪಚುನಾವಣೆ ಹೊತ್ತಲ್ಲೇ ದೀದಿಗೆ ಶಾಕ್‌, ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಭಾರಿ ಸಂಚಲನ..!

ಸ್ಥಳೀಯ ಚುನಾವಣೆಗಳಿಗೆ ಕಾಂಗ್ರೆಸ್‌ ರಣತಂತ್ರ: ಜಿಲ್ಲಾಧ್ಯಕ್ಷರ ಕಾರ್ಯಕ್ಷಮತೆ ಮೇಲೆ ಹೈಕಮಾಂಡ್‌ ಕಣ್ಣು, ಬೂತ್‌ನಿಂದ ಜಿಲ್ಲಾ ಮಟ್ಟದವರೆಗೆ ಸಂಘಟನೆಗೆ ಸೂಚನೆ..!