ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆಯನ್ನು ಹೆಚ್ಚಿಸಿದ್ದು, ಪರಿಷ್ಕೃತ ದರಗಳು ಇಂದು ಫೆಬ್ರವರಿ 1 ರಿಂದಲೇ ಜಾರಿಗೆ ಬರಲಿವೆ.
19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯನ್ನು 49 ರೂಪಾಯಿ ಹೆಚ್ಚಿಸಲಾಗಿದ್ದು, ದೆಹಲಿಯಲ್ಲಿ ಗ್ಯಾಸ್ ಸಿಲಿಂಡರ್ ಚಿಲ್ಲರೆ ಬೆಲೆ 1,740.50 ರೂಪಾಯಿಗೆ ತಲುಪಿದೆ. ಈ ಹೆಚ್ಚಳವು ರೆಸ್ಟೋರೆಂಟ್‌ಗಳು, ಹೋಟೆಲ್‌ಗಳು ಮತ್ತು ದೈನಂದಿನ ಕಾರ್ಯಾಚರಣೆಗಳಿಗೆ ಎಲ್‌ಪಿಜಿಯನ್ನು ಅವಲಂಬಿಸಿರುವ ಇತರ ವಾಣಿಜ್ಯ ಸಂಸ್ಥೆಗಳ ಮೇಲೆ ಪರಿಣಾಮ ಬೀರುವ ನಿರೀಕ್ಷೆಯಿದೆ.
14.2 ಕೆಜಿ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.