ಭಾರತೀಯ ಷೇರು ಮಾರುಕಟ್ಟೆ 
ವಾಣಿಜ್ಯ

Indian Stock Market ಭರ್ಜರಿ ವಹಿವಾಟು; Sensex 964 ಅಂಕ ಏರಿಕೆ

ಭಾರತೀಯ ಷೇರುಮಾರುಕಟ್ಟೆ ಭಾರಿ ಏರಿಕೆ ಕಂಡಿದ್ದು, ಷೇರುಮಾರುಕಟ್ಟೆ ಎರಡೂ ಸೂಚ್ಯಂಕಗಳು ಗ್ರೀನ್ ನಲ್ಲಿ ದಿನದ ಮತ್ತು ವಾರದ ವಹಿವಾಟು ಅಂತ್ಯಗೊಳಿಸಿದೆ.

ಮುಂಬೈ: ವಾರಾಂತ್ಯದ ಹೊತ್ತಿಗೆ ಭಾರತೀಯ ಷೇರುಮಾರುಕಟ್ಟೆ ಭರ್ಜರಿ ವಹಿವಾಟು ನಡೆಸಿದ್ದು ಶುಕ್ರವಾರ ಒಂದೇ ದಿನ ಸೆನ್ಸೆಕ್ಸ್ ಬರೊಬ್ಬರಿ 964 ಅಂಕಗಳ ಏರಿಕೆ ಕಂಡಿದೆ.

ಶುಕ್ರವಾರ ಭಾರತೀಯ ಷೇರುಮಾರುಕಟ್ಟೆ ಭಾರಿ ಏರಿಕೆ ಕಂಡಿದ್ದು, ಷೇರುಮಾರುಕಟ್ಟೆ ಎರಡೂ ಸೂಚ್ಯಂಕಗಳು ಗ್ರೀನ್ ನಲ್ಲಿ ದಿನದ ಮತ್ತು ವಾರದ ವಹಿವಾಟು ಅಂತ್ಯಗೊಳಿಸಿದೆ.

ಇಂದಿನ ವಹಿವಾಟಿನಲ್ಲಿ ಸೆನ್ಸೆಕ್ಸ್ ಶೇ.1.25ರಷ್ಟು ಏರಿಕೆ ಕಂಡಿದ್ದರೆ, ನಿಫ್ಟಿ ಕೂಡ ಶೇ.1.09ರಷ್ಟು ಏರಿಕೆ ದಾಖಲಿಸಿದೆ. ಸೆನ್ಸೆಕ್ಸ್ ಇಂದು ಬರೊಬ್ಬರಿ 964.59ಅಂಕಗಳ ಏರಿಕೆಯೊಂದಿಗೆ 78,151.45 ಅಂಕಗಳಿಗೆ ಏರಿಕೆಯಾಗಿದ್ದರೆ, ನಿಫ್ಟಿ 261.55 ಅಂಕಗಳ ಏರಿಕೆಯೊಂದಿಗೆ 24,334.30 ಅಂಕಗಳಿಗೆ ಏರಿಕೆಯಾಗಿ ದಿನದ ಮತ್ತು ವಾರದ ವಹಿವಾಟು ಅಂತ್ಯಗೊಳಿಸಿದೆ.

ಇಂದಿನ ವಹಿವಾಟಿನಲ್ಲಿ ಬ್ಯಾಂಕ್ ಮತ್ತು ಐಟಿ ವಲಯಗಳ ಷೇರುಗಳು ಉತ್ತಮ ವಹಿವಾಟು ನಡೆಸಿ ಲಾಭಾಂಶ ಗಳಿಸಿವೆ.

ಯಾರಿಗೆ ಲಾಭ? ಯಾರಿಗೆ ನಷ್ಟ?

ಇಂದಿನ ವಹಿವಾಟಿನಲ್ಲಿ ಸೆನ್ಸೆಕ್ಸ್ ನಲ್ಲಿ ಪಟ್ಟಿ ಮಾಡಲಾದ ಸಂಸ್ಥೆಗಳ ಪೈಕಿ ಕೋಟಕ್ ಮಹೀಂದ್ರಾ ಬ್ಯಾಂಕ್, ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್, ರಿಲಯನ್ಸ್ ಇಂಡಸ್ಟ್ರೀಸ್, ಹಿಂದೂಸ್ತಾನ್ ಯೂನಿಲಿವರ್, ಮಹೀಂದ್ರಾ & ಮಹೀಂದ್ರಾ, ಆಕ್ಸಿಸ್ ಬ್ಯಾಂಕ್, ಐಸಿಐಸಿಐ ಬ್ಯಾಂಕ್ ಮತ್ತು ಬಜಾಜ್ ಫೈನಾನ್ಸ್ ಸಂಸ್ಥೆಯ ಷೇರುಗಳು ಲಾಭಾಂಶ ಕಂಡಿದೆ.

ಅಂತೆಯೇ ಸನ್ ಫಾರ್ಮಾ, ಭಾರ್ತಿ ಏರ್‌ಟೆಲ್, ಅಲ್ಟ್ರಾಟೆಕ್, ಇಂಡಿಗೋ ಮತ್ತು ಟ್ರೆಂಟ್ ಸಂಸ್ಥೆಯ ಷೇರುಗಳು ನಷ್ಟ ಕಂಡಿವೆ.

ಇತ್ತ ಜೂನ್ ತ್ರೈಮಾಸಿಕದಲ್ಲಿ ಕ್ರೋಢೀಕೃತ ನಿವ್ವಳ ಲಾಭವು ಶೇ. 28.4 ರಷ್ಟು ಏರಿಕೆಯಾಗಿ 1,465 ಕೋಟಿ ರೂ.ಗಳಿಗೆ ತಲುಪಿದೆ ಎಂದು ವರದಿ ಮಾಡಿದ ನಂತರ ಟೆಕ್ ಮಹೀಂದ್ರಾ ಶೇ. 3.91 ರಷ್ಟು ಜಿಗಿದು ಬೇಡಿಕೆಯ ವಾತಾವರಣದ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದೆ. ಅಂತೆಯೇ ರಿಲಯನ್ಸ್ ಇಂಡಸ್ಟ್ರೀಸ್ ತನ್ನ ಜೂನ್ ತ್ರೈಮಾಸಿಕ ಗಳಿಕೆಯನ್ನು ದಿನದ ನಂತರ ಪ್ರಕಟಿಸಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

"ನಾವು ಕೈ ಜೋಡಿಸೋಣ": ಗಲ್ವಾನ್ ಸಂಘರ್ಷದ ಬಳಿಕ ಮೊದಲ ಮಾತುಕತೆ ವೇಳೆ Narendra Modi ಗೆ Xi Jinping ಸಂದೇಶ; ಭಾರತದೆದುರು ಮಂಡಿಯೂರಿದ ಚೀನಾ?

ಪ್ರಶ್ನೆ ಪತ್ರಿಕೆ ಸೋರಿಕೆ ಸಹಿಸಲ್ಲ: KPSC ವಿರುದ್ಧ ಹೋರಾಟಕ್ಕೆ CJP ಎಂಟ್ರಿ: ನೊಂದ ಅಭ್ಯರ್ಥಿಗಳಿಗೆ ನ್ಯಾಯದ ಭರವಸೆ

ಮೈಸೂರಿನ 'ಪೇಟೆ ರೌಡಿ' ಪೊಲೀಸ್ ಠಾಣೆಗೆ ನುಗ್ಗಿದ್ರೆ ನಾನು ಸೀದಾ ಪರಪ್ಪನ ಅಗ್ರಹಾರಕ್ಕೆ ನುಗ್ಗಿಸುತ್ತೇನೆ: ಪ್ರತಾಪ್ ಸಿಂಹಗೆ ಪ್ರಿಯಾಂಕ್ ಖರ್ಗೆ ಖಡಕ್ ವಾರ್ನ್

ಚೀನಾ ಇದ್ದರೂ ಬ್ರಿಕ್ಸ್‌ ಸದಸ್ಯತ್ವಕ್ಕಾಗಿ 3 ವರ್ಷಗಳ ಹಿಂದೆಯೇ ಅರ್ಜಿ ಸಲ್ಲಿಸಿದ್ರೂ ಅವಕಾಶ ಸಿಕ್ಕಿಲ್ಲ: ಪಾಕ್ ಗೋಳಾಟ!

ಬಳ್ಳಾರಿ ನಂತರ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಮತ್ತೊಂದು ಪಾದಯಾತ್ರೆ; ಸೆಪ್ಟೆಂಬರ್ 15 ರಿಂದ ರಾಜ್ಯಾದ್ಯಂತ ಹೋರಾಟ