ಸಂಗ್ರಹ ಚಿತ್ರ 
ವಾಣಿಜ್ಯ

ಗ್ರಾಹಕರ ಜೇಬಿಗೆ ಮತ್ತೆ ಕತ್ತರಿ: ಗೃಹಬಳಕೆ ಸಿಲಿಂಡರ್‌ ದರ ಮತ್ತೆ ಏರಿಕೆ, ಬರೋಬ್ಬರಿ 29 ರೂ. ಹೆಚ್ಚಳ..!

14.2 ಕೆಜಿ ಸಿಲಿಂಡರ್‌ಗೆ 29 ರೂ. ಹೆಚ್ಚಳ ಮಾಡಲಾಗಿದ್ದು, ಹೊಸ ದರ ಇಂದಿನಿಂದಲೇ ಅನ್ವಯವಾಗಲಿದೆ. ಕಳೆದ ಮೂರು ತಿಂಗಳಲ್ಲಿ ಎರಡನೇ ಬಾರಿಗೆ LPG ದರ ಏರಿಕೆಯಾಗಿದ್ದು, ಸಾಮಾನ್ಯ ಜನರ ಖರ್ಚು ಮತ್ತಷ್ಟು ಹೆಚ್ಚಾಗುವ ಸಾಧ್ಯತೆಗಳಿವೆ.

ನವದೆಹಲಿ: ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಈಗಾಗಲೇ ಸಂಕಷ್ಟ ಅನುಭವಿಸುತ್ತಿರುವ ಜನರಿಗೆ ಇದೀಗ ಮತ್ತೊಂದು ಶಾಕ್ ಎದುರಾಗಿದೆ. ಗೃಹ ಬಳಕೆಯ LPG ಸಿಲಿಂಡರ್ ದರವನ್ನು ಕೇಂದ್ರ ಸರ್ಕಾರ ಮತ್ತೊಮ್ಮೆ ಹೆಚ್ಚಳ ಮಾಡಿದೆ.

14.2 ಕೆಜಿ ಸಿಲಿಂಡರ್‌ಗೆ 29 ರೂ. ಹೆಚ್ಚಳ ಮಾಡಲಾಗಿದ್ದು, ಹೊಸ ದರ ಇಂದಿನಿಂದಲೇ ಅನ್ವಯವಾಗಲಿದೆ. ಕಳೆದ ಮೂರು ತಿಂಗಳಲ್ಲಿ ಎರಡನೇ ಬಾರಿಗೆ LPG ದರ ಏರಿಕೆಯಾಗಿದ್ದು, ಸಾಮಾನ್ಯ ಜನರ ಖರ್ಚು ಮತ್ತಷ್ಟು ಹೆಚ್ಚಾಗುವ ಸಾಧ್ಯತೆಗಳಿವೆ.

ಹೊಸ ದರ ಜಾರಿಯಾದ ಬಳಿಕ ದೆಹಲಿಯಲ್ಲಿ ಗೃಹ ಬಳಕೆಯ LPG ಸಿಲಿಂಡರ್ ಬೆಲೆ ರೂ.913ರಿಂದ ರೂ.942ಕ್ಕೆ ಏರಿಕೆಯಾಗಿದೆ. ರಾಜ್ಯಾವಾರು ತೆರಿಗೆ ಮತ್ತು ಸಾಗಾಟ ವೆಚ್ಚದ ಆಧಾರದಲ್ಲಿ ಇತರ ನಗರಗಳಲ್ಲಿಯೂ ದರದಲ್ಲಿ ವ್ಯತ್ಯಾಸ ಕಂಡುಬರುವ ಸಾಧ್ಯತೆಯಿದೆ.

ಮಧ್ಯಪ್ರಾಚ್ಯದಲ್ಲಿ ಮುಂದುವರಿದಿರುವ ಉದ್ವಿಗ್ನ ಪರಿಸ್ಥಿತಿ ಹಾಗೂ ಜಾಗತಿಕ ಮಾರುಕಟ್ಟೆಯಲ್ಲಿ ಏರಿಕೆಯಾಗಿರುವ ಕಚ್ಚಾ ತೈಲ ಮತ್ತು ಇಂಧನ ಬೆಲೆಗಳು ಈ ದರ ಏರಿಕೆಗೆ ಪ್ರಮುಖ ಕಾರಣವೆಂದು ಹೇಳಲಾಗಿದೆ.

ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳ ಮೇಲೆ ಹೆಚ್ಚುತ್ತಿರುವ ಆರ್ಥಿಕ ಒತ್ತಡದಿಂದಾಗಿ LPG ದರವನ್ನು ಪರಿಷ್ಕರಿಸುವ ಅನಿವಾರ್ಯತೆ ಉಂಟಾಗಿದೆ ಎಂದು ಉದ್ಯಮ ಮೂಲಗಳು ತಿಳಿಸಿವೆ.

ಈ ಹಿಂದೆ ಮಾರ್ಚ್ 7ರಂದು ಕೂಡ LPG ಸಿಲಿಂಡರ್ ದರವನ್ನು ರೂ.60 ಹೆಚ್ಚಿಸಲಾಗಿತ್ತು. ಆದರೂ ತೈಲ ಕಂಪನಿಗಳು ಪ್ರತಿ ಸಿಲಿಂಡರ್ ಮಾರಾಟದ ಮೇಲೆ ಭಾರೀ ನಷ್ಟ ಅನುಭವಿಸುತ್ತಿವೆ ಎಂದು ವರದಿಯಾಗಿದೆ. ಇತ್ತೀಚಿನ ದರ ಏರಿಕೆಗೆ ಮುನ್ನ ಪ್ರತಿ LPG ಸಿಲಿಂಡರ್ ಮೇಲೆ ಸುಮಾರು ರೂ.703 ನಷ್ಟವಾಗುತ್ತಿತ್ತು ಎಂದು ಮೂಲಗಳು ಹೇಳಿವೆ.

LPG ಮಾತ್ರವಲ್ಲದೆ ಇತ್ತೀಚಿನ ದಿನಗಳಲ್ಲಿ ಪೆಟ್ರೋಲ್, ಡೀಸೆಲ್ ಹಾಗೂ CNG ದರಗಳಲ್ಲಿಯೂ ಏರಿಕೆ ಕಂಡುಬಂದಿದೆ. ಮೇ ಮಧ್ಯಭಾಗದಿಂದ ಪೆಟ್ರೋಲ್ ಮತ್ತು ಡೀಸೆಲ್ ದರಗಳು ಒಟ್ಟಾರೆ ರೂ.7.50 ಪ್ರತಿ ಲೀಟರ್ ಹೆಚ್ಚಳವಾಗಿದ್ದರೆ, CNG ದರವೂ ಪ್ರತಿ ಕೆಜಿಗೆ ಸುಮಾರು ರೂ.6 ಏರಿಕೆಯಾಗಿದೆ.

ಇದಾದರೂ ಕೂಡ ತೈಲ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಅನ್ನು ಇನ್ನೂ ನಷ್ಟದಲ್ಲೇ ಮಾರಾಟ ಮಾಡುತ್ತಿವೆ ಎಂದು ತಿಳಿದುಬಂದಿದೆ.

ಪ್ರತಿ ಲೀಟರ್ ಪೆಟ್ರೋಲ್ ಮೇಲೆ ಸುಮಾರು ರೂ.11 ಹಾಗೂ ಡೀಸೆಲ್ ಮೇಲೆ ರೂ.33.6 ನಷ್ಟವಾಗುತ್ತಿದೆ ಎಂದು ಅಂದಾಜಿಸಲಾಗಿದೆ.

ಸರ್ಕಾರ ಜಾಗತಿಕ ಇಂಧನ ದರ ಏರಿಕೆಯ ಸಂಪೂರ್ಣ ಹೊರೆ ಜನರ ಮೇಲೆ ಹಾಕದೇ ಕೆಲವು ಭಾಗವನ್ನು ತೈಲ ಕಂಪನಿಗಳೇ ಹೊರುವಂತೆ ಮಾಡುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಆದರೆ, ನಿರಂತರ ದರ ಏರಿಕೆಯಿಂದ ಮಧ್ಯಮ ವರ್ಗ ಮತ್ತು ಬಡ ಕುಟುಂಬಗಳ ಮಾಸಿಕ ವೆಚ್ಚ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ. ಈಗಾಗಲೇ ದಿನನಿತ್ಯದ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಸಂಕಷ್ಟ ಅನುಭವಿಸುತ್ತಿರುವ ಜನರಿಗೆ LPG ದರ ಹೆಚ್ಚಳ ಮತ್ತೊಂದು ಆರ್ಥಿಕ ಹೊರೆ ತಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

NEET-UG 2026: ಮರು ಪರೀಕ್ಷೆಯ ಪ್ರಶ್ನೆ ಪತ್ರಿಕೆ 'ಸೋರಿಕೆ' ಆರೋಪ ತಳ್ಳಿಹಾಕಿದ NTA; ಸುಳ್ಳು ಸುದ್ದಿ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ

ಅಲ್ಪ ಜ್ಞಾನ ಅಪಾಯಕಾರಿ: NFHS-6 ಸಂಶೋಧನೆಗಳ ಕುರಿತು ಖರ್ಗೆ ವಿರುದ್ಧ ನಡ್ಡಾ ವಾಗ್ದಾಳಿ

ಈ ಬೆದರಿಕೆಗಳನ್ನು ನಿಲ್ಲಿಸಿ, ನಾಗಾ ಬಾಬು: DCM ಪವನ್ ಕಲ್ಯಾಣ್ ಸಹೋದರನಿಗೆ ಪ್ರಕಾಶ್ ರಾಜ್ ಎಚ್ಚರಿಕೆ!

ಕಾಂಗ್ರೆಸ್ ಸಚಿವ ಸಂಪುಟ ಭಿನ್ನಮತ ಶಮನ: ರಾಜೀನಾಮೆ ವಾಪಸ್ ಪಡೆದ ರಾಮಲಿಂಗಾ ರೆಡ್ಡಿ!

'ಇದು ಕೇವಲ ಟ್ರೇಲರ್ ಅಷ್ಟೇ.. CJP ಪ್ರತಿಭಟನೆ ಬಳಿಕ ಅಭಿಜೀತ್ ದಿಪ್ಕೆ ಮೊದಲ ಪ್ರತಿಕ್ರಿಯೆ..

SCROLL FOR NEXT