ಸಾಂದರ್ಭಿಕ ಚಿತ್ರ 
ವಾಣಿಜ್ಯ

ಅಮೆರಿಕ-ಇರಾನ್ ಶಾಂತಿ ಒಪ್ಪಂದ: ಕಚ್ಚಾ ತೈಲ ಬೆಲೆ ಭಾರೀ ಇಳಿಕೆ; ಪೆಟ್ರೋಲ್, ಡೀಸೆಲ್ ದರ ಕಮ್ಮಿ ಮಾಡ್ತಾರಾ ಮೋದಿ?

ಅಮೆರಿಕ - ಇರಾನ್ ಸಂಸಂಘರ್ಷವನ್ನು ಕೊನೆಗೊಳಿಸಲು ಮತ್ತು ಹಾರ್ಮುಜ್ ಜಲಸಂಧಿಯ ಮೂಲಕ ಸಾಗಣೆಯನ್ನು ಪುನಃಸ್ಥಾಪಿಸಲು ಪ್ರಾಥಮಿಕ ಒಪ್ಪಂದಕ್ಕೆ ಬಂದಿರುವುದಾಗಿ ಡೊನಾಲ್ಡ್ ಟ್ರಂಪ್ ಹಾಗೂ ಇರಾನ್‌ ಉಪ ವಿದೇಶಾಂಗ ಸಚಿವರು ಹೇಳಿದ ಬೆನ್ನಲ್ಲೇ ಕಚ್ಚಾ ತೈಲ ಬೆಲೆಯಲ್ಲಿ ಭಾರೀ ಇಳಿಕೆಯಾಗಿದೆ.

ಅಮೆರಿಕ-ಇರಾನ್ ನಡುವಣ 107 ದಿನಗಳ ಯುದ್ಧ ಕೊನೆಗೂ ಅಂತ್ಯವಾಗುವ ಕಾಲ ಸನ್ನಿಹಿತವಾಗಿದ್ದು, ಉಭಯ ದೇಶಗಳು ಶಾಂತಿ ಒಪ್ಪಂದವನ್ನು ಅಂತಿಮಗೊಳಿಸಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ.

ಅಮೆರಿಕ - ಇರಾನ್ ಸಂಸಂಘರ್ಷವನ್ನು ಕೊನೆಗೊಳಿಸಲು ಮತ್ತು ಹಾರ್ಮುಜ್ ಜಲಸಂಧಿಯ ಮೂಲಕ ಸಾಗಣೆಯನ್ನು ಪುನಃಸ್ಥಾಪಿಸಲು ಪ್ರಾಥಮಿಕ ಒಪ್ಪಂದಕ್ಕೆ ಬಂದಿರುವುದಾಗಿ ಡೊನಾಲ್ಡ್ ಟ್ರಂಪ್ ಹಾಗೂ ಇರಾನ್‌ ಉಪ ವಿದೇಶಾಂಗ ಸಚಿವರು ಹೇಳಿದ ಬೆನ್ನಲ್ಲೇ ಕಚ್ಚಾ ತೈಲ ಬೆಲೆಯಲ್ಲಿ ಭಾರೀ ಇಳಿಕೆಯಾಗಿದೆ.

ಕಚ್ಚಾ ತೈಲ ಬೆಲೆಯಲ್ಲಿ ಶೇ.4ರಷ್ಟು ಕುಸಿತವಾಗಿದೆ. ಅಂದರೆ ಪ್ರತಿ ಬ್ಯಾರಲ್ ಗೆ 80 ಡಾಲರ್‌ಗೆ ಕಚ್ಚಾ ತೈಲ ಬೆಲೆ ಇಳಿಕೆಯಾಗಿದೆ.

ಬ್ರೆಂಟ್ ಕಚ್ಚಾ ತೈಲದ ಫ್ಯೂಚರ್ಸ್ ಪ್ರತಿ ಬ್ಯಾರೆಲ್‌ಗೆ 3.58 ಡಾಲರ್ ಅಥವಾ 4.1% ರಷ್ಟು ಇಳಿಯುವ ಮೂಲಕ ಪ್ರತಿ ಬ್ಯಾರಲ್ ಗೆ 83.75 ಕ್ಕೆ ಇಳಿದಿದೆ. ಆದರೆ ಯುಎಸ್ ವೆಸ್ಟ್ ಟೆಕ್ಸಾಸ್ ಇಂಟರ್ಮೀಡಿಯೇಟ್ (WTI) ಕಚ್ಚಾ ತೈಲವು ಪ್ರತಿ ಬ್ಯಾರೆಲ್‌ಗೆ 4.01 ಡಾಲರ್ ಅಥವಾ ಶೇ. 4.72 ರಷ್ಟು ಇಳಿದು 80.87 ಡಾಲರ್ ಗೆ ಕುಸಿದಿದೆ.

ಯುದ್ಧದ ಪರಿಣಾಮದಿಂದ ಬ್ರೆಂಟ್ ಕಚ್ಚಾ ತೈಲ ಬ್ಯಾರೆಲ್‌ 120 ಡಾಲರ್‌ ವರೆಗೆ ತಲುಪಿ ದಾಖಲೆಯನ್ನು ಬರೆದಿತ್ತು. ಯುದ್ಧಕ್ಕೂ ಮುನ್ನ ತೈಲ ದರ 70 ಡಾಲರ್‌ನ ಆಸುಪಾಸಿನಲ್ಲಿತ್ತು.

ವಿಶ್ವದ ಶೇ.20ರಷ್ಟು ಕಚ್ಚಾತೈಲವು ಹರ್ಮುಜ್ ಜಲಸಂಧಿ ಮೂಲಕ ಸಾಗುತ್ತದೆ. ಇರಾನ್ ಹಾರ್ಮುಜ್ ಜಲಸಂಧಿ ಮೇಲೆ ನಿರ್ಬಂಧ ವಿಧಿಸಿದ್ದರಿಂದ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿ ಬೆಲೆಗಳಲ್ಲಿ ಬಾರಿ ಏರಿಕೆಯಾಗಿತ್ತು. ಹಾಗೆಯೇ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿಯೂ ದರ ಏರಿಕೆಯಾಗಿತ್ತು.

ಕಚ್ಚಾ ತೈಲ ಬೆಲೆ ಏರಿಕೆ ಹಿನ್ನೆಲೆಯಲ್ಲಿ ಇತ್ತೀಚಿಗೆ ಪೆಟ್ರೋಲ್, ಡೀಸೆಲ್ ಬೆಲೆಯನ್ನು ದೊಡ್ಡ ಪ್ರಮಾಣದಲ್ಲಿಚಿಸಿದ್ದ ಮೋದಿ ಸರ್ಕಾರ ಈಗ ಕಚ್ಚಾ ತೈಲ ಬೆಲೆ ಇಳಿಕೆಯ ಲಾಭವನ್ನು ಗ್ರಾಹಕರಿಗೆ ವರ್ಗಾಯಿಸುತ್ತದೆಯೇ ಅಥವಾ ಇಲವೇ ಎಂಬುದು ಕಾದು ನೋಡಬೇಕಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇತರರ ಪ್ರಭಾವಕ್ಕೆ ಒಳಗಾಗಿ ಹಾಗೆ ಮಾತನಾಡಿದೆ, ಕ್ಷಮಿಸಿ': ದೆಹಲಿ ಪ್ರತಿಭಟನೆಯಲ್ಲಿ PM ಮೋದಿ ವಿರುದ್ಧ ಅವಾಚ್ಯ ಪದ ಬಳಕೆ ಮಾಡಿದ ಬಾಲಕಿ-Video

'ನನ್ನ ಜೊತೆಗೆ ತಾಯಿಯನ್ನೂ ನಿಂದಿಸಿದರು, ಆದರೂ 'ನಮ್ಮ ದಾರಿತಪ್ಪಿದ ಮಕ್ಕಳನ್ನು' ಕ್ಷಮಿಸಬೇಕು: ಮತ್ತೊಂದು ವಿಡಿಯೊ ಹಂಚಿಕೊಂಡ PM ಮೋದಿ'-Video

'ದೇಶವನ್ನೇ ಕ್ಷಮಿಸಿದ ನರೇಂದ್ರ ಮೋದಿ: ಪ್ರಧಾನಿಯ ಹೊಸ ವಿಡಿಯೋ ಬಗ್ಗೆ ಕಾಂಗ್ರೆಸ್ ಪ್ರತಿಕ್ರಿಯೆ!

ಕೇರಳದಲ್ಲಿ ಭಾರಿ ಮಳೆಯಿಂದ ಭೂಕುಸಿತ; ಮೂವರು ಸಾವು! ಹಲವು ಜಿಲ್ಲೆಗಳಿಗೆ IMD 'ರೆಡ್ ಅಲರ್ಟ್' ಘೋಷಣೆ

ಮಂಡ್ಯ: ಕಾವೇರಿ ಹೋರಾಟಕ್ಕೆ ಸ್ಪಂದಿಸದೆ ರೈತರ ಕೆಂಗಣ್ಣಿಗೆ ಗುರಿಯಾದ ನಟಿ ರಾಗಿಣಿ ದ್ವಿವೇದಿ!