ಜಿಯೋ ಐಪಿಒ ಘೋಷಣೆ  online desk
ವಾಣಿಜ್ಯ

ಜಿಯೋ ಐಪಿಒ: 27 ಕೋಟಿ ಷೇರುಗಳಿಗೆ ಅನುಮೋದನೆ; ಪ್ರತಿ ಷೇರಿನ ಬೆಲೆ ಬಗ್ಗೆ ಇಲ್ಲಿದೆ ಮಾಹಿತಿ...

ಜಿಯೋ ಪ್ಲಾಟ್‌ಫಾರ್ಮ್‌ಗಳ ಮಂಡಳಿಯು ದಿನದ ಆರಂಭದಲ್ಲಿ DRHP ನ್ನು ಅನುಮೋದಿಸಿದೆ ಮತ್ತು ಶುಕ್ರವಾರವೇ ಅದನ್ನು ಸೆಕ್ಯುರಿಟೀಸ್ ಮತ್ತು ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾ (SEBI) ಗೆ ಸಲ್ಲಿಸಲಾಗುತ್ತದೆ.

ಮುಂಬೈ: ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ (RIL) ಶುಕ್ರವಾರ ಜಿಯೋ ಪ್ಲಾಟ್‌ಫಾರ್ಮ್ಸ್ ಲಿಮಿಟೆಡ್ ತನ್ನ ಡ್ರಾಫ್ಟ್ ರೆಡ್ ಹೆರಿಂಗ್ ಪ್ರಾಸ್ಪೆಕ್ಟಸ್ (DRHP) ಅನ್ನು ಆರಂಭಿಕ ಸಾರ್ವಜನಿಕ ಕೊಡುಗೆ (IPO) ಗಾಗಿ ಅನುಮೋದಿಸಿದೆ ಮತ್ತು ಬಿಡುಗಡೆ ಮಾಡಿದೆ ಎಂದು ಘೋಷಿಸಿದೆ.

ಇದು ಡಿಜಿಟಲ್ ಸೇವೆಗಳ ಕಂಪನಿಯ ಬೆಳವಣಿಗೆಯ ಪ್ರಯಾಣದಲ್ಲಿ ಪ್ರಮುಖ ಮೈಲಿಗಲ್ಲಾಗಿದೆ. ರಿಲಯನ್ಸ್ ಇಂಡಸ್ಟ್ರೀಸ್‌ನ 49 ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ (AGM) ಷೇರುದಾರರನ್ನು ಉದ್ದೇಶಿಸಿ ಮಾತನಾಡಿದ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಮುಖೇಶ್ ಅಂಬಾನಿ, ಜಿಯೋ ಪ್ಲಾಟ್‌ಫಾರ್ಮ್‌ಗಳ ಮಂಡಳಿಯು ದಿನದ ಆರಂಭದಲ್ಲಿ DRHP ನ್ನು ಅನುಮೋದಿಸಿದೆ ಮತ್ತು ಶುಕ್ರವಾರವೇ ಅದನ್ನು ಸೆಕ್ಯುರಿಟೀಸ್ ಮತ್ತು ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾ (SEBI) ಗೆ ಸಲ್ಲಿಸಲಾಗುವುದು ಎಂದು ಹೇಳಿದರು.

"ಜಿಯೋ ಪ್ಲಾಟ್‌ಫಾರ್ಮ್‌ಗಳ ಮಂಡಳಿಯು ಇಂದು ಡ್ರಾಫ್ಟ್ ರೆಡ್ ಹೆರಿಂಗ್ ಪ್ರಾಸ್ಪೆಕ್ಟಸ್ ನ್ನು ಅನುಮೋದಿಸಿದೆ ಮತ್ತು ಅದನ್ನು ಇಂದು SEBI ಗೆ ಸಲ್ಲಿಸಲಾಗುವುದು ಎಂದು ಬಹಳ ಸಂತೋಷದಿಂದ ನಾನು ನಿಮಗೆ ಹೇಳುತ್ತಿದ್ದೇನೆ ಎಂದು ಅಂಬಾನಿ ಹೇಳಿದರು.

ರಿಲಯನ್ಸ್ ಇಂಡಸ್ಟ್ರೀಸ್‌ನ ನಿಯಂತ್ರಕ ಫೈಲಿಂಗ್ ಪ್ರಕಾರ, ಪ್ರಸ್ತಾವಿತ IPO ತಲಾ 10 ರೂ. ಮುಖಬೆಲೆಯ 27 ಕೋಟಿ ಈಕ್ವಿಟಿ ಷೇರುಗಳ ಹೊಸ ವಿತರಣೆಯನ್ನು ಒಳಗೊಂಡಿರುತ್ತದೆ. ಇಶ್ಯೂ ಬೆಲೆಯನ್ನು ಬುಕ್-ಬಿಲ್ಡಿಂಗ್ ಪ್ರಕ್ರಿಯೆಯ ಮೂಲಕ ನಿರ್ಧರಿಸಲಾಗುತ್ತದೆ ಮತ್ತು ಅಗತ್ಯ ನಿಯಂತ್ರಕ ಅನುಮೋದನೆಗಳ ಸ್ವೀಕೃತಿಗೆ ಒಳಪಟ್ಟಿರುತ್ತದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!