ಭಾರತೀಯ ಷೇರು ಮಾರುಕಟ್ಟೆ 
ವಾಣಿಜ್ಯ

ಕುಸಿತದ ಬಳಿಕ ಪುಟಿದೆದ್ದ Indian Stock Market: ಸೆನ್ಸೆಕ್ಸ್ 790 ಅಂಕ ಏರಿಕೆ, 24 ಸಾವಿರ ಗಡಿ ದಾಟಿದ Nifty!

ಸೆನ್ಸೆಕ್ಸ್ ಇಂದು ಬರೊಬ್ಬರಿ 790.54 ಅಂಕಗಳ ಏರಿಕೆಯೊಂದಿಗೆ 76,991.22 ಅಂಕಗಳಿಗೆ ಏರಿಕೆಯಾಗಿದ್ದರೆ, ನಿಫ್ಟಿ 197.55 ಅಂಕಗಳ ಏರಿಕೆಯೊಂದಿಗೆ 24,021.65 ಅಂಕಗಳಿಗೆ ಏರಿಕೆಯಾಗಿ ದಿನದ ವಹಿವಾಟು ಅಂತ್ಯಗೊಳಿಸಿದೆ.

ಮುಂಬೈ: ಮಂಗಳವಾರ ಭಾರಿ ಕುಸಿತಕಂಡಿದ್ದ ಭಾರತೀಯ ಷೇರುಮಾರುಕಟ್ಟೆ ಬುಧವಾರ ಚೇತರಿಕೆ ಕಂಡಿದ್ದು, ಷೇರುಮಾರುಕಟ್ಟೆಯ ಉಭಯ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಎರಡೂ ಗ್ರೀನ್ ನಲ್ಲಿ ವಹಿವಾಟು ಅಂತ್ಯಗೊಳಿಸಿದೆ.

ಇಂದಿನ ವಹಿವಾಟಿನಲ್ಲಿ ಸೆನ್ಸೆಕ್ಸ್ ಶೇ.1.04ರಷ್ಟು ಏರಿಕೆ ಕಂಡಿದ್ದರೆ, ನಿಫ್ಟಿ ಕೂಡ ಶೇ.0.83ರಷ್ಟು ಏರಿಕೆ ದಾಖಲಿಸಿದೆ.

ಸೆನ್ಸೆಕ್ಸ್ ಇಂದು ಬರೊಬ್ಬರಿ 790.54 ಅಂಕಗಳ ಏರಿಕೆಯೊಂದಿಗೆ 76,991.22 ಅಂಕಗಳಿಗೆ ಏರಿಕೆಯಾಗಿದ್ದರೆ, ನಿಫ್ಟಿ 197.55 ಅಂಕಗಳ ಏರಿಕೆಯೊಂದಿಗೆ 24,021.65 ಅಂಕಗಳಿಗೆ ಏರಿಕೆಯಾಗಿ ದಿನದ ವಹಿವಾಟು ಅಂತ್ಯಗೊಳಿಸಿದೆ.

ಇಂದಿನ ವಹಿವಾಟಿನಲ್ಲಿ ಐಟಿ, ರಿಯಾಲಿಟಿ, ಖಾಸಗಿ ಬ್ಯಾಂಕ್, ಫೈನಾನ್ಷಿಯಲ್ ಸರ್ವಿಸ್, ಸಿಮೆಂಟ್ ಮತ್ತು ರೀಟ್ಸ್ (REITS) ವಲಯಗಳ ಷೇರುಗಳು ಉತ್ತಮ ವಹಿವಾಟು ನಡೆಸಿ ಲಾಭಾಂಶ ಗಳಿಸಿವೆ.

ಯಾರಿಗೆ ಲಾಭ? ಯಾರಿಗೆ ನಷ್ಟ?

ಇಂದಿನ ವಹಿವಾಟಿನಲ್ಲಿ ಸೆನ್ಸೆಕ್ಸ್ ನಲ್ಲಿ ಪಟ್ಟಿ ಮಾಡಲಾದ ಸಂಸ್ಥೆಗಳ ಪೈಕಿ ಟ್ರೆಂಟ್, ಇಂಡಿಗೋ, ಬಜಾಜ್ ಫೈನಾನ್ಸ್, ಇನ್ಫೋಸಿಸ್, ಐಸಿಐಸಿಐ ಬ್ಯಾಂಕ್, ಟಿಸಿಎಸ್, ಎಚ್‌ಡಿಎಫ್‌ಸಿ ಬ್ಯಾಂಕ್, ಅದಾನಿ ಪೋರ್ಟ್ಸ್, ಕೋಟಕ್ ಬ್ಯಾಂಕ್, ಎಸ್‌ಬಿಐ ಸಂಸ್ಥೆಯ ಷೇರುಗಳು ಲಾಭಾಂಶ ಕಂಡಿದೆ.

ಅಂತೆಯೇ ಐಟಿಸಿ ಹೋಟೆಲ್‌ಗಳು, ಎನ್‌ಟಿಪಿಸಿ, ಟಾಟಾ ಸ್ಟೀಲ್, ಎಟರ್ನಲ್, ಭಾರ್ತಿ ಏರ್ಟೆಲ್ ಮತ್ತು ಮಾರುತಿ ಸಂಸ್ಥೆಯ ಷೇರುಗಳು ನಷ್ಟ ಕಂಡಿವೆ.

ಇಂದಿನ ಷೇರುಪೇಟೆ ಏರಿಕೆಗೆ ಕಾರಣ?

ಇಂದು ಭಾರತೀಯ ಷೇರುಪೇಟೆಗಳು ಭರ್ಜರಿ ಏರಿಕೆ ದಾಖಲಿಸಿವೆ. ದೇಶೀಯ ಹಾಗೂ ಜಾಗತಿಕ ಅಂಶಗಳ ಸಂಯೋಜನೆಯೇ ಈ ಏರಿಕೆಗೆ ಪ್ರಮುಖ ಕಾರಣವಾಗಿದೆ. ಬ್ಯಾಂಕಿಂಗ್ ವಲಯದ ಬಲಿಷ್ಠ ಪ್ರದರ್ಶನ, ಕಚ್ಚಾ ತೈಲ ಬೆಲೆ ಇಳಿಕೆ ಮತ್ತು ಆರ್‌ಬಿಐನ ಸಕಾರಾತ್ಮಕ ನಿಲುವು ಕೂಡ ಮಾರುಕಟ್ಟೆ ಏರಿಕೆಯಲ್ಲಿ ಗಣನೀಯ ಪಾತ್ರವಹಿಸಿವೆ.

ಇದಲ್ಲದೆ ಕಚ್ಚಾ ತೈಲ ಬೆಲೆ ಪ್ರತಿ ಬ್ಯಾರೆಲ್‌ಗೆ 80 ಡಾಲರ್‌ಗಿಂತ ಕೆಳಗಿಳಿದಿದೆ. ಬಡ್ಡಿದರ ಏರಿಕೆ ಕುರಿತಂತೆ ಇದ್ದ ಆತಂಕವನ್ನು ಆರ್ ಬಿಐ ಮುಖ್ಯಸ್ಥ ದೂರ ಮಾಡಿದ್ದು, ಹಣದುಬ್ಬರ ವ್ಯಾಪಕವಾಗಿಲ್ಲದ ಕಾರಣ ಸಮೀಪ ಭವಿಷ್ಯದಲ್ಲಿ ಬಡ್ಡಿದರ ಏರಿಕೆ ಸಾಧ್ಯತೆ ಕಡಿಮೆ ಎನ್ನುವ ನಿರೀಕ್ಷೆ ಮೂಡಿದೆ.

ಇದರ ಪರಿಣಾಮ ಬ್ಯಾಂಕಿಂಗ್ ವಲಯದ ಷೇರುಗಳಲ್ಲಿ ಖರೀದಿ ಹೆಚ್ಚಾಗಿದೆ. ಇದೂ ಕೂಡ ಮಾರುಕಟ್ಟೆಯ ಸಕಾರಾತ್ಮಕ ವಹಿವಾಟಿಗೆ ಕಾರಣ ಎನ್ನಲಾಗಿದೆ.

ಅಂತೆಯೇ ಐಟಿ ಷೇರುಗಳಿಗೆ ಹೆಚ್ಚಿದ ಬೇಡಿಕೆ, ಭಾರತ–ಅಮೆರಿಕ ವ್ಯಾಪಾರ ಒಪ್ಪಂದದ ನಿರೀಕ್ಷೆ, ರೂಪಾಯಿ ಬಲವರ್ಧನೆ ಕೂಡ ಮಾರುಕಟ್ಟೆಯಲ್ಲಿ ಸಕಾರಾತ್ಮಕ ಅಂಶಗಳಾಗಿವೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಹೈಡ್ರಾಮಾ: EC ಕಚೇರಿ ಮುತ್ತಿಗೆಗೆ ಯತ್ನಿಸಿದ ರಾಹುಲ್, ಪ್ರಿಯಾಂಕಾ ಗಾಂಧಿ ಸೇರಿ INDIA ಒಕ್ಕೂಟದ ಹಲವು ಸಂಸದರು ಪೊಲೀಸ್ ವಶಕ್ಕೆ..!

ಏಷ್ಯನ್‌ ಗೇಮ್ಸ್‌ ವಿಜೇತರಿಗೆ ಸಿಎಂ ಅಭಿನಂದನೆ; ಚಿನ್ನದ ಪದಕ ವಿಜೇತರಿಗೆ 1 ಕೋಟಿ ನಗದು,ಗ್ರೂಪ್-ಬಿ ಹುದ್ದೆಗಳಿಗೆ ನೇರ ನೇಮಕಾತಿ!

'ಮತದಾರರ ಪಟ್ಟಿ ಪರಿಷ್ಕರಣೆ'ಯಲ್ಲಿ ಅಕ್ರಮ ಆರೋಪ; CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ, INDIA ಒಕ್ಕೂಟದಿಂದ ‘ಪ್ರಜಾಪ್ರಭುತ್ವ ಉಳಿಸಿ’ ಪಾದಯಾತ್ರೆ ಆರಂಭ..!

ಶಾಲೆಗಳಲ್ಲಿ ಸಂವಿಧಾನದ ಪ್ರಸ್ತಾವನೆ ಪಠಣೆ: ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್!

9/11 ಮಾದರಿಯಲ್ಲೇ ಇಸ್ರೇಲ್ ಧ್ವಂಸಕ್ಕೆ ಸಂಚು..! ಫ್ಲೈದುಬೈ ಏರ್‌ಲೈನ್ಸ್ ಸೇರಿದ್ದೇ ಆ ಕ್ರೂರ ಉದ್ದೇಶಕ್ಕಾಗಿ; ಸತ್ಯ ಬಾಯಿಬಿಟ್ಟ ಕಿಲ್ಲರ್ ಪೈಲಟ್ ಹಮಾಮ್..!