ಸಾಂದರ್ಭಿಕ ಚಿತ್ರ 
ವಾಣಿಜ್ಯ

ಡಾಲರ್ ಎದುರು ರೂಪಾಯಿ ಮೌಲ್ಯ ಸಾರ್ವಕಾಲಿಕ ಪತನ; 92.36ಕ್ಕೆ ಕುಸಿತ

ಜಾಗತಿಕ ಕಚ್ಚಾ ತೈಲ ಬೆಲೆಗಳು ರಾತ್ರಿಯಿಡೀ ಏರುತ್ತಲೇ ಇದ್ದುದರಿಂದ ಡಾಲರ್ ಎದುರು ರೂಪಾಯಿ ಮೌಲ್ಯ 35 ಪೈಸೆ ಕುಸಿದು ದಿನದ ಕನಿಷ್ಠ ಮಟ್ಟ 92.36 ಕ್ಕೆ ತಲುಪಿತು.

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಸಂಘರ್ಷ ಮುಂದುವರೆದ ಪರಿಣಾಮ ಕಚ್ಚಾ ತೈಲ ಬೆಲೆಯಲ್ಲಿ ತೀವ್ರ ಏರಿಕೆ ಮತ್ತು ಡಾಲರ್‌ಗೆ ಬೇಡಿಕೆ ಹೆಚ್ಚಳದಿಂದಾಗಿ ಗುರುವಾರ ಅಮೆರಿಕದ ಡಾಲರ್ ಎದುರು ಭಾರತದ ರೂಪಾಯಿ ಸಾರ್ವಕಾಲಿಕ ಕನಿಷ್ಠ ಮಟ್ಟಕ್ಕೆ ಕುಸಿತ ಕಂಡಿದೆ.

ಜಾಗತಿಕ ಕಚ್ಚಾ ತೈಲ ಬೆಲೆಗಳು ರಾತ್ರಿಯಿಡೀ ಏರುತ್ತಲೇ ಇದ್ದುದರಿಂದ ಡಾಲರ್ ಎದುರು ರೂಪಾಯಿ ಮೌಲ್ಯ 35 ಪೈಸೆ ಕುಸಿದು ದಿನದ ಕನಿಷ್ಠ ಮಟ್ಟ 92.36 ಕ್ಕೆ ತಲುಪಿತು.

ದೇಶೀಯ ಷೇರು ಮಾರುಕಟ್ಟೆಯ ಕುಸಿತದಿಂದ ಡಾಲರ್ ಮತ್ತಷ್ಟು ಪ್ರಬಲವಾಗುತ್ತಿದ್ದು, ಈಕ್ವಿಟಿ ಮಾರುಕಟ್ಟೆಗಳಲ್ಲಿ ವಿದೇಶಿ ಬಂಡವಾಳ ಹೂಡಿಕೆ ಹಿಂತೆಗೆತ ಹೆಚ್ಚುತ್ತಿರುವುದು ವಹಿವಾಟು ದುರ್ಬಲಗೊಳ್ಳಲು ಕಾರಣವಾಗಿದೆ ಎಂದು ಫಾರೆಕ್ಸ್ ವ್ಯಾಪಾರಿಗಳು ತಿಳಿಸಿದ್ದಾರೆ.

ಅಂತರಬ್ಯಾಂಕ್ ವಿದೇಶಿ ವಿನಿಮಯದಲ್ಲಿ ರೂಪಾಯಿ ಮೌಲ್ಯವು 92.25ರಿಂದ ಆರಂಭವಾಯಿತು. ಬಳಿಕ ಕುಸಿತ ಕಂಡು, ಯುಎಸ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠವಾದ 92.36ಕ್ಕೆ ಇಳಿಯಿತು. ಈ ಹಿಂದಿನ, ಅಂದರೆ ಮಾರ್ಚ್​ 9ರಂದು ಸಾರ್ವಕಾಲಿಕ ಕನಿಷ್ಠವಾಗಿದ್ದ 92.35 ದರವನ್ನು ಮೀರಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪಾಕಿಸ್ತಾನದ ಉನ್ನತ ರಾಜತಾಂತ್ರಿಕರಿಗೆ ಭಾರತದ ಸಮನ್ಸ್; ಗಡಿಯಾಚೆಗಿನ ಒಳನುಸುಳುವಿಕೆಯ ವಿರುದ್ಧ ಪ್ರತಿಭಟನೆ

ಶಿಕ್ಷಕರ ಕೊರತೆ ಎಂದು ದೂರಿದ್ದೇ ತಪ್ಪಾಯ್ತು ಪಂಜಾಬ್ ಆಮ್ ಆದ್ಮಿ ಪಕ್ಷದ ಶಾಸಕ ಅಮಾನತು!

ಸ್ಟೈಲಿಶ್ ಕಪ್ಪು ಉಡುಪಿನಲ್ಲಿ ಮಿಂಚಿದ ಪಾರ್ವತಿ ತಿರುವೋತ್; ದಂಗಾದ ಅಭಿಮಾನಿಗಳು, Video!

Asian Games 2026: ಮಲೇಷ್ಯಾ ಸೋಲಿಸಿ ಚಿನ್ನ ಗೆದ್ದ ಭಾರತದ ಪುರುಷರ ಹಾಕಿ ತಂಡ; ಒಲಿಂಪಿಕ್ಸ್‌ಗೆ ಅರ್ಹತೆ

ಬಿಜೆಪಿ ಜಿಲ್ಲಾಧ್ಯಕ್ಷರಿಂದ ನನ್ನ ಮೇಲೆ ಪದೇ ಪದೇ ಅತ್ಯಾಚಾರ: ಉತ್ತರ ಪ್ರದೇಶ ಪಕ್ಷದ ನಾಯಕಿಯ ಗಂಭೀರ ಆರೋಪ