ಸಾಂದರ್ಭಿಕ ಚಿತ್ರ 
ವಾಣಿಜ್ಯ

ಇರಾನ್ ವಾರ್ನಿಂಗ್ ಬೆನ್ನಲ್ಲೇ 'ಕಚ್ಚಾ ತೈಲ' ಮತ್ತಷ್ಟು ದುಬಾರಿ! ಪ್ರತಿ ಬ್ಯಾರೆಲ್ ಗೆ 103 ಡಾಲರ್ ಏರಿಕೆ!

ಹಾರ್ಮುಜ್ ಜಲಸಂಧಿಯಲ್ಲಿನ ಪರಿಸ್ಥಿತಿಯು ಸಹಜ ಸ್ಥಿತಿಗೆ ಮರಳಲ್ಲ ಎಂದು ಇರಾನ್ ಸಂಸದೀಯ ಸ್ಪೀಕರ್ ಮೊಹಮ್ಮದ್ ಬಾಕರ್ ಖಲಿಬಾಫ್ ಹೇಳಿಕೆ ಬೆನ್ನಲ್ಲೇ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪ್ರತಿ ಬ್ಯಾರೆಲ್‌ ಕಚ್ಚಾ ತೈಲ ಬೆಲೆಯು ಬುಧವಾರ 103 ಡಾಲರ್ ಗೆ ಏರಿದೆ.

ಟೆಹರಾನ್: ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷ 19ನೇ ದಿನಕ್ಕೆ ಕಾಲಿಟ್ಟಿದ್ದು, ಪರಿಸ್ಥಿತಿ ಶಾಂತಗೊಳ್ಳುವ ಯಾವುದೇ ಲಕ್ಷಣ ತೋರುತ್ತಿಲ್ಲ.

ಹಾರ್ಮುಜ್ ಜಲಸಂಧಿಯಲ್ಲಿನ ಪರಿಸ್ಥಿತಿಯು ಸಹಜ ಸ್ಥಿತಿಗೆ ಮರಳಲ್ಲ ಎಂದು ಇರಾನ್ ಸಂಸದೀಯ ಸ್ಪೀಕರ್ ಮೊಹಮ್ಮದ್ ಬಾಕರ್ ಖಲಿಬಾಫ್ ಹೇಳಿಕೆ ಬೆನ್ನಲ್ಲೇ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪ್ರತಿ ಬ್ಯಾರೆಲ್‌ ಕಚ್ಚಾ ತೈಲ ಬೆಲೆಯು ಬುಧವಾರ 103 ಡಾಲರ್ ಗೆ ಏರಿದೆ.

ಖಲಿಬಾಫ್ ಹೇಳಿಕೆ ಹಾರ್ಮುಜ್ ಜಲಸಂಧಿ ಮೂಲಕ ತೈಲ ಹಡಗುಗಳ ಸುರಕ್ಷಿತೆ ಮೂಲಕ ಅನಿಶ್ಚಿತತೆಯನ್ನು ಹೆಚ್ಚಿಸಿದೆ. ಹಾರ್ಮುಜ್ ಜಲಸಂಧಿ ಪರಿಸ್ಥಿತಿಯು ಅದರ ಯುದ್ಧ-ಪೂರ್ವ ಸ್ಥಿತಿಗೆ ಮರಳುವುದಿಲ್ಲ ಎಂದು ಖಿಲಿಬಾಫ್ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ತಿಳಿಸಿದ್ದಾರೆ.

ಇರಾನ್ ವಿರುದ್ಧ ಅಮೆರಿಕ ಮತ್ತು ಇಸ್ರೇಲ್ ನಡೆಸುತ್ತಿರುವ ಜಂಟಿ ವೈಮಾನಿಕ ದಾಳಿಯಿಂದ ಈ ಪ್ರದೇಶದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ನಡುವೆ ಖಲಿಬಾಫ್ ನೀಡಿರುವ ಹೇಳಿಕೆ ಇಂಧನ ಪೂರೈಕೆ ಸ್ಥಿರತೆ ಬಗ್ಗೆ ಮತ್ತಷ್ಟು ಕಳವಳವನ್ನುಂಟು ಮಾಡಿದೆ.

ಬುಧವಾರದ ವಹಿವಾಟಿನ ವೇಳೆ ಕಚ್ಚಾ ತೈಲ ಬೆಲೆಯು ಪ್ರತಿ ಬ್ಯಾರೆಲ್‌ಗೆ 103. 45 ಡಾಲರ್ ತಲುಪಿಸಿದೆ. ಇದು ಜಾಗತಿಕ ಮಾರುಕಟ್ಟೆಗಳಲ್ಲಿ ನಿರಂತರ ಒತ್ತಡವನ್ನು ಪ್ರತಿಬಿಂಬಿಸುತ್ತದೆ. ಸದ್ಯ ನಡೆಯುತ್ತಿರುವ ಸಂಘರ್ಷದಿಂದಾಗಿ ಕೇವಲ 18 ದಿನಗಳಲ್ಲಿ ತೈಲ ಬೆಲೆಗಳು ಶೇ. 40 ಕ್ಕಿಂತ ಹೆಚ್ಚು ಏರಿಕೆಯಾಗಿದ್ದು, ಇದು ಹಾರ್ಮುಜ್ ಜಲಸಂಧಿಯ ಮೂಲಕ ಇಂಧನ ಪೂರೈಕೆಗೆ ಅಡ್ಡಿಪಡಿಸಿದೆ. ಜಾಗತಿಕ ಇಂಧನ ಮಾರುಕಟ್ಟೆಗಳ ಮೇಲೆ ವಿಶೇಷವಾಗಿ ಏಷ್ಯಾದಲ್ಲಿ ಗಮನಾರ್ಹವಾಗಿ ಪ್ರಭಾವ ಬೀರಿದೆ.

ಯುದ್ಧದ ಆರಂಭದ ಮೊದಲು ಫೆಬ್ರವರಿ 27 ರಂದು ಅಂತರರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಕಚ್ಚಾ ತೈಲ ಬೆಲೆಗಳು ಪ್ರತಿ ಬ್ಯಾರೆಲ್‌ಗೆ USD 73 ರಷ್ಟಿತ್ತು. ಈಗ ಅದು ಪ್ರತಿ ಬ್ಯಾರೆಲ್‌ಗೆ 103 ಡಾಲರ್ ಗೆ ಏರಿಕೆ ಆಗಿದೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Parliament Monsoon Session: ರಾಹುಲ್ ವಿರುದ್ಧ ಆಕ್ರೋಶ; ಸಂಸತ್ ಆವರಣದಲ್ಲಿ NDA ಸಂಸದರ ಬೃಹತ್ ಪ್ರತಿಭಟನಾ ಮೆರವಣಿಗೆ, ಲೋಕಸಭೆ ಕಲಾಪ ಮಧ್ಯಾಹ್ನ 2ಕ್ಕೆ ಮುಂದೂಡಿಕೆ..!

ಪಶ್ಚಿಮ ಕೊಲಂಬಿಯಾದಲ್ಲಿ 7.4 ತೀವ್ರತೆಯ ಭೂಕಂಪ; ಮೃತರ ಸಂಖ್ಯೆ 111ಕ್ಕೆ ಏರಿಕೆ, ಹಲವರಿಗೆ ಗಾಯ

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಬಾರ್ ಕ್ಯಾಷಿಯರ್‌ಗೆ ಬೆದರಿಕೆ; ಇಬ್ಬರು ಉದ್ಯಮಿಗಳು, ಪ್ರಭಾವಿ ಮಹಿಳೆ ಮೇಲೆ ಕಣ್ಣಿಟ್ಟ ಪೊಲೀಸರು!

ಬಿಲಿಯನೇರ್ Gautam Adaniಗೆ ಬಿಗ್ ರಿಲೀಫ್: ಎಲ್ಲಾ ಕ್ರಿಮಿನಲ್ ಪ್ರಕರಣಗಳ ವಜಾಗೊಳಿಸಿದ ಅಮೆರಿಕಾ ನ್ಯಾಯಾಲಯ..!

ಬಿಡದಿ ಹೋರಾಟ ಅರ್ಧಕ್ಕೆ ಸ್ಥಗಿತ; ‘ರೈತರ ನ್ಯಾಯಕ್ಕಾಗಿ ತಾರ್ಕಿಕ ಅಂತ್ಯದವರೆಗೆ ಹೋರಾಟ’ ಎಂದ ದೇವೇಗೌಡ, ಆ.18ಕ್ಕೆ ವಿಧಾನಸೌಧ ಮುತ್ತಿಗೆ..!