ಮುಂಬೈ ಸ್ಟಾಕ್ ಮಾರ್ಕೆಟ್ 
ವಾಣಿಜ್ಯ

West Asia war ಎಫೆಕ್ಟ್: ಭಾರತೀಯ ಷೇರು ಮಾರುಕಟ್ಟೆಯಲ್ಲಿ ರಕ್ತಪಾತ; ಸೆನ್ಸೆಕ್ಸ್ 1,000 ಅಂಕ ಕುಸಿತ, ಹೂಡಿಕೆದಾರರಲ್ಲಿ ಆತಂಕ

30 ಷೇರುಗಳ ಬಿಎಸ್‌ಇ ಸೆನ್ಸೆಕ್ಸ್ ಆರಂಭಿಕ ವಹಿವಾಟಿನಲ್ಲಿ 845.68 ಅಂಕ ಇಳಿದು 76,482.51ಕ್ಕೆ ತಲುಪಿದರೆ, ಎನ್‌ಎಸ್‌ಇ ನಿಫ್ಟಿ 237.90 ಅಂಕ ಕುಸಿದು 23,936.85ರಲ್ಲಿ ವಹಿವಾಟು ನಡೆಸಿತು.

ಮುಂಬೈ: ಅಮೆರಿಕಾ ಮತ್ತು ಇರಾನ್ ನಡುವೆ ಶಾಂತಿ ಒಪ್ಪಂದ ಸಾಧ್ಯವಾಗದ ಕಾರಣ ಕಚ್ಚಾ ತೈಲದ ಬೆಲೆ ಏರಿಕೆಯಾಗಿದ್ದು, ಇದರ ಪರಿಣಾಮವಾಗಿ ಸೋಮವಾರ ಭಾರತೀಯ ಷೇರು ಮಾರುಕಟ್ಟೆ ಭಾರೀ ಕುಸಿತ ಕಂಡಿದೆ.

ಆರಂಭಿಕ ವಹಿವಾಟಿನಲ್ಲೇ ಬಿಎಸ್‌ಇ ಸೆನ್ಸೆಕ್ಸ್ ಸುಮಾರು 1,000 ಅಂಕಗಳಷ್ಟು ಕುಸಿದಿದ್ದು, ಹೂಡಿಕೆದಾರರಲ್ಲಿ ಆತಂಕ ಹೆಚ್ಚಿಸಿದೆ.

30 ಷೇರುಗಳ ಬಿಎಸ್‌ಇ ಸೆನ್ಸೆಕ್ಸ್ ಆರಂಭಿಕ ವಹಿವಾಟಿನಲ್ಲಿ 845.68 ಅಂಕ ಇಳಿದು 76,482.51ಕ್ಕೆ ತಲುಪಿದರೆ, ಎನ್‌ಎಸ್‌ಇ ನಿಫ್ಟಿ 237.90 ಅಂಕ ಕುಸಿದು 23,936.85ರಲ್ಲಿ ವಹಿವಾಟು ನಡೆಸಿತು.

ಸೆನ್ಸೆಕ್ಸ್‌ನ ಪ್ರಮುಖ ಷೇರುಗಳಾದ ಟೈಟನ್, ಇಂಟರ್‌ಗ್ಲೋಬ್ ಏವಿಯೇಷನ್‌, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಭಾರ್ತಿ ಏರ್‌ಟೆಲ್‌, ಮಹೀಂದ್ರಾ & ಮಹೀಂದ್ರಾ ಸೇರಿದಂತೆ ಹಲವು ಕಂಪನಿಗಳ ಷೇರುಗಳು ತೀವ್ರ ನಷ್ಟ ಅನುಭವಿಸಿವೆ. ಎನ್‌ಟಿಪಿಸಿ ಹಾಗೂ ಎಚ್‌ಸಿಎಲ್ ಟೆಕ್ ಮಾತ್ರ ಏರಿಕೆ ಕಂಡಿವೆ.

ಈ ನಡುವೆ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಬ್ರೆಂಟ್ ಕಚ್ಚಾ ತೈಲವು ಪ್ರತಿ ಬ್ಯಾರೆಲ್‌ಗೆ 432 ಪ್ರತಿಶತದಷ್ಟು ಹೆಚ್ಚಾಗಿ 105.7 ಡಾಲರ್‌ಗೆ ವಹಿವಾಟು ನಡೆಸಿದೆ.

ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್ ನೀಡಿದ ಶಾಂತಿ ಪ್ರಸ್ತಾವವನ್ನು “ಸಂಪೂರ್ಣ ಸ್ವೀಕಾರಾರ್ಹವಲ್ಲ” ಎಂದು ತಿರಸ್ಕರಿಸಿರುವುದು ಮಾರುಕಟ್ಟೆಯಲ್ಲಿ ಮತ್ತಷ್ಟು ಆತಂಕ ಹುಟ್ಟಿಸಿದೆ.

ಎನ್‌ರಿಚ್ ಮನಿ ಸಂಸ್ಥೆಯ ಸಿಇಒ ಪೊನ್‌ಮುದಿ ಆರ್ ಅವರ ಪ್ರಕಾರ, ಹಾರ್ಮುಜ್ ಜಲಸಂಧಿಯಲ್ಲಿನ ಉದ್ವಿಗ್ನತೆ ಹಾಗೂ ಜಾಗತಿಕ ಇಂಧನ ಸರಬರಾಜಿನ ಅಸ್ಥಿರತೆ ಹೂಡಿಕೆದಾರರ ವಿಶ್ವಾಸಕ್ಕೆ ಹೊಡೆತ ನೀಡಿದೆ ಎಂದು ಹೇಳಿದ್ದಾರೆ.

ಜಿಯೋಜಿತ್ ಇನ್ವೆಸ್ಟ್‌ಮೆಂಟ್ಸ್‌ನ ಮುಖ್ಯ ಹೂಡಿಕೆ ತಜ್ಞ ವಿ.ಕೆ. ವಿಜಯಕುಮಾರ್ ಅವರು ಮಾತನಾಡಿ, “ಮಧ್ಯಾಪ್ರಾಚ್ಯ ಬಿಕ್ಕಟ್ಟಿಗೆ ಪರಿಹಾರ ಸಿಗುವ ನಿರೀಕ್ಷೆ ಮತ್ತೆ ದೂರವಾಗಿದೆ. ಇದರಿಂದ ಕಚ್ಚಾ ತೈಲದ ಬೆಲೆ ಏರಿಕೆ ಕಂಡು ದೇಶದ ಚಾಲ್ತಿ ಖಾತೆ ಕೊರತೆ ಹೆಚ್ಚುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕೂಡ ಭಾನುವಾರ ದೇಶದ ಜನತೆಗೆ ಇಂಧನ ಬಳಕೆ ಕಡಿಮೆ ಮಾಡಲು, ಚಿನ್ನ ಖರೀದಿಯನ್ನು ಮುಂದೂಡಲು ಹಾಗೂ ಅನಗತ್ಯ ವಿದೇಶ ಪ್ರವಾಸವನ್ನು ತಾತ್ಕಾಲಿಕವಾಗಿ ತಡೆಹಿಡಿಯಲು ಕರೆ ನೀಡಿದ್ದಾರೆ. ಮಧ್ಯಪ್ರಾಚ್ಯ ಸಂಘರ್ಷದಿಂದ ವಿದೇಶಿ ವಿನಿಮಯದ ಮೇಲೆ ಒತ್ತಡ ಹೆಚ್ಚಿರುವುದಾಗಿ ಅವರು ಎಚ್ಚರಿಸಿದರು.

ಶುಕ್ರವಾರ ವಿದೇಶಿ ಸಂಸ್ಥಾ ಹೂಡಿಕೆದಾರರು (FIIs) ರೂ.4,110.60 ಕೋಟಿ ಮೌಲ್ಯದ ಷೇರುಗಳನ್ನು ಮಾರಾಟ ಮಾಡಿದ್ದರು. ಕಳೆದ ಶುಕ್ರವಾರವೂ ಸೆನ್ಸೆಕ್ಸ್ 516.33 ಅಂಕ ಹಾಗೂ ನಿಫ್ಟಿ 150.50 ಅಂಕ ಕುಸಿತ ಕಂಡಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪಶ್ಚಿಮ ಕೊಲಂಬಿಯಾದಲ್ಲಿ 7.4 ತೀವ್ರತೆಯ ಭೂಕಂಪ; ಮೃತರ ಸಂಖ್ಯೆ 100ಕ್ಕೆ ಏರಿಕೆ, ಹಲವರಿಗೆ ಗಾಯ

9 ದಿನಗಳಿಂದ ಉಪವಾಸ: ದೇವೇಂದ್ರ ಮಹ್ತೊ ಆಸ್ಪತ್ರೆಗೆ ದಾಖಲು; ಪೊಲೀಸರ ಲಾಠಿಚಾರ್ಚ್ ಖಂಡಿಸಿ ನಾಳೆ ಬಂದ್ ಗೆ BJP ಕರೆ!

ಶಾರುಖ್ ನಟನೆಯ 'ಕಭಿ ಅಲ್ವಿದಾ ನಾ ಕೆಹನಾ' ಚಿತ್ರ ಅಕ್ರಮ ಸಂಬಂಧ ಬೆಂಬಲಿಸಿಲ್ಲ: ಕರಣ್ ಜೋಹರ್ ಪೋಸ್ಟ್ ವೈರಲ್!

ಖಾತೆ ಹಂಚಿಕೆ ಕಸರತ್ತು: ವರಿಷ್ಠರಿಗೆ ಪಟ್ಟಿ ನೀಡಿ ಬೆಂಗಳೂರಿಗೆ CM ಡಿ.ಕೆ ಶಿವಕುಮಾರ್ ವಾಪಸ್; ಹೇಳಿದ್ದೇನು?

ನಾವು ಹಿಂಸಾಚಾರನ ಬೆಂಬಲಿಸಲ್ಲ; ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್‌ ಸರಿಯಲ್ಲ: ಜಾರ್ಖಂಡ್ ನಡೆ ಖಂಡಿಸಿದ ರಾಹುಲ್!