ಸಂಗ್ರಹ ಚಿತ್ರ 
ವಾಣಿಜ್ಯ

ಆಟೋ-ಟ್ಯಾಕ್ಸಿ ಚಾಲಕರಿಗೆ ಮತ್ತೆ ಕೇಂದ್ರ ಸರ್ಕಾರ ಶಾಕ್: 48 ಗಂಟೆಯಲ್ಲಿ 2ನೇ ಬಾರಿ CNG ದರ ಏರಿಕೆ; ಕೆಜಿಗೆ 1 ರೂ ಹೆಚ್ಚಳ..!

ಕೇವಲ 48 ಗಂಟೆಗಳ ಅವಧಿಯಲ್ಲಿ ಇದು ಎರಡನೇ ಬಾರಿಯ ಬೆಲೆ ಏರಿಕೆಯಾಗಿದ್ದು, ಗ್ರಾಹಕರು ಹಾಗೂ ಆಟೋ-ಟ್ಯಾಕ್ಸಿ ಚಾಲಕರು ಕಂಗಾಲಾಗಿದ್ದಾರೆ.

ನವದೆಹಲಿ: ದೇಶದಲ್ಲಿ ಜನಸಾಮಾನ್ಯರ ಜೇಬಿಗೆ ಇಂಧನ ಬೆಲೆ ಏರಿಕೆಯ ಬಿಸಿ ತಟ್ಟುತ್ತಲೇ ಇದೆ. ಮುಂಬೈ, ದೆಹಲಿ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಸಿಎನ್‌ಜಿ (CNG) ದರವನ್ನು ಪ್ರತಿ ಕೆಜಿಗೆ 1 ರೂಪಾಯಿ ಹೆಚ್ಚಳ ಮಾಡಲಾಗಿದೆ.

ಕೇವಲ 48 ಗಂಟೆಗಳ ಅವಧಿಯಲ್ಲಿ ಇದು ಎರಡನೇ ಬಾರಿಯ ಬೆಲೆ ಏರಿಕೆಯಾಗಿದ್ದು, ಗ್ರಾಹಕರು ಹಾಗೂ ಆಟೋ-ಟ್ಯಾಕ್ಸಿ ಚಾಲಕರು ಕಂಗಾಲಾಗಿದ್ದಾರೆ.

ಮೇ 15 ರಂದು ತೈಲ ಕಂಪನಿಗಳು ಸಿಎನ್‌ಜಿ ಬೆಲೆಯನ್ನು 2 ರೂಪಾಯಿ ಹೆಚ್ಚಿಸಿದ್ದವು. ಇದೀಗ ಮತ್ತೆ ಬೆಲೆ ಹೆಚ್ಚಳ ಮಾಡಲಾಗಿದ್ದು, ಇದರೊಂದಿಗೆ ಎರಡು ದಿನಗಳಲ್ಲಿ ಒಟ್ಟು 3 ರೂಪಾಯಿ ಏರಿಕೆ ಕಂಡಂತಾಗಿದೆ.

ಪ್ರಮುಖ ನಗರಗಳ ಇಂದಿನ ಪರಿಷ್ಕೃತ ದರ ಪಟ್ಟಿ (ಪ್ರತಿ ಕೆಜಿಗೆ) ಇಂತಿದೆ...

  • ದೆಹಲಿ: ರೂ.80.09

  • ನೋಯ್ಡಾ ಮತ್ತು ಗಾಜಿಯಾಬಾದ್: ರೂ.88.70

  • ಗುರುಗ್ರಾಮ್: ರೂ.85.12

  • ಮುಂಬೈ (MMR): ರೂ.84.00

  • ಬೆಂಗಳೂರು: ರೂ.93.00 (ಸ್ಥಳೀಯ ತೆರಿಗೆಗೆ ಅನುಗುಣವಾಗಿ ವ್ಯತ್ಯಾಸವಿರುತ್ತದೆ)

ಈ ದರ ಏರಿಕೆಯ ಪರಿಣಾಮವಾಗಿ ಸಿಎನ್‌ಜಿ ಆಧಾರಿತ ಆಟೋ ರಿಕ್ಷಾ, ಟ್ಯಾಕ್ಸಿ ಮತ್ತು ಖಾಸಗಿ ವಾಹನ ಬಳಕೆದಾರರ ದಿನನಿತ್ಯದ ವೆಚ್ಚ ಹೆಚ್ಚಾಗಲಿದೆ. ಸಾರಿಗೆ ಸಂಸ್ಥೆಗಳ ಕಾರ್ಯಾಚರಣಾ ವೆಚ್ಚವೂ ಏರಿಕೆಯಾಗುವ ಸಾಧ್ಯತೆ ಇದ್ದು, ಇದರ ಪರಿಣಾಮವಾಗಿ ಸಾರ್ವಜನಿಕ ಸಾರಿಗೆ ದರಗಳ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ.

ಮಧ್ಯಪ್ರಾಚ್ಯದಲ್ಲಿ ಮುಂದುವರಿದಿರುವ ಯುದ್ಧ ಪರಿಸ್ಥಿತಿ ಮತ್ತು ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆ ಹಿನ್ನೆಲೆಯಲ್ಲಿ ಇಂಧನ ದರ ಪರಿಷ್ಕರಣೆ ಅನಿವಾರ್ಯವಾಗಿದೆ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.

ಆದರೆ, ನಿರಂತರ ದರ ಏರಿಕೆಯಿಂದ ಸಾಮಾನ್ಯ ಜನರು ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ ಎಂದು ಪ್ರತಿಪಕ್ಷಗಳು ಆರೋಪಿಸಿವೆ.

ದಿನನಿತ್ಯದ ಪ್ರಯಾಣ ವೆಚ್ಚ ಹೆಚ್ಚಾಗುವುದರ ಜೊತೆಗೆ ಸರಕು ಸಾಗಣೆ ವೆಚ್ಚವೂ ಏರಿಕೆಯಾಗಲಿದ್ದು, ಅದರ ಪರಿಣಾಮವಾಗಿ ಅಗತ್ಯ ವಸ್ತುಗಳ ಬೆಲೆಗಳ ಮೇಲೂ ಪರಿಣಾಮ ಬೀರುವ ಆತಂಕ ವ್ಯಕ್ತವಾಗಿದೆ.

ಸಿಎನ್‌ಜಿ ದರ ಹೆಚ್ಚಳದಿಂದ ವಿಶೇಷವಾಗಿ ಆಟೋ ಚಾಲಕರು ಮತ್ತು ಕ್ಯಾಬ್ ಸೇವೆ ನೀಡುವ ಚಾಲಕರ ಆದಾಯದ ಮೇಲೆ ಹೊಡೆತ ಬೀಳುವ ಸಾಧ್ಯತೆ ಇದೆ. ಇಂಧನ ವೆಚ್ಚ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರಿಗೆ ದರ ಏರಿಕೆ ಅನಿವಾರ್ಯವಾಗಬಹುದು ಎಂಬ ಮಾತುಗಳೂ ಕೇಳಿ ಬರುತ್ತಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅನ್ಯ ಉದ್ದೇಶಕ್ಕೆ ಕುಡಿಯುವ ನೀರು ಬಳಕೆ ನಿಷೇಧ; ಬೇಸಿಗೆಯಲ್ಲಿ ತೆಗೆದುಕೊಳ್ಳುವ ಕ್ರಮಗಳನ್ನು ಮಳೆಗಾಲದಲ್ಲೇ ಜಾರಿಗೊಳಿಸಿದ BWSSB!

1 ಓವರ್‌ನಲ್ಲಿ 29 ರನ್ ಹೊಡೆಸಿಕೊಂಡ ಬಿಷ್ಣೋಯ್: ಇಂಗ್ಲೆಂಡ್ ವಿರುದ್ಧದ 2ನೇ ಟಿ20 ಪಂದ್ಯ ಕೈಚೆಲ್ಲಿದ ಭಾರತ

ನಾನು ಸೋತಿದ್ದೇನೆ, ಸತ್ತಿಲ್ಲ: TMC ಕೇಂದ್ರ ಕಚೇರಿಗೆ ಬಿಗ... ಬಂಡಾಯ ನಾಯಕರ ವಿರುದ್ಧ ಮಮತಾ ಬ್ಯಾನರ್ಜಿ ಗರಂ

E20 Petrol: ವೈಜ್ಞಾನಿಕ ಪರೀಕ್ಷೆಗಳಲ್ಲಿ ಸುರಕ್ಷಿತ, ವಾಹನಗಳಿಗೆ ಅತ್ಯುತ್ತಮ; ತಜ್ಞರ ಸಮರ್ಥನೆ

ಮೆಲ್ಬೋರ್ನ್ ಭೇಟಿಗೂ ಮುನ್ನ ಪ್ರಧಾನಿ ಮೋದಿಗೆ ಕೊಲೆ ಬೆದರಿಕೆ; ಆಸ್ಟ್ರೇಲಿಯಾದಿಂದ ತನಿಖೆ