ಕಾರುಗಳ ಸಾಂದರ್ಭಿಕ ಚಿತ್ರ 
ವಾಣಿಜ್ಯ

Maruti Suzuki: ಮುಂದಿನ ತಿಂಗಳಿನಿಂದ ಮಾರುತಿ ಸುಜುಕಿ ಕಾರುಗಳು ದುಬಾರಿ! ಯಾವುದಕ್ಕೆ ಎಷ್ಟು ಗೊತ್ತಾ?

ಕಳೆದ ಕೆಲವು ತಿಂಗಳುಗಳಿಂದ ಕಂಪನಿಯು ವೆಚ್ಚ ಕಡಿತ ಕ್ರಮಗಳ ಮೂಲಕ ಸಾಧ್ಯವಾದಷ್ಟು ವೆಚ್ಚದ ಪರಿಣಾಮವನ್ನು ತಗ್ಗಿಸಲು ನಿರಂತರ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಕಂಪನಿ ಹೇಳಿದೆ.

ನವದೆಹಲಿ: ಮುಂದಿನ ತಿಂಗಳಿನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿಯಾಗಲಿದೆ. ಹಣದುಬ್ಬರ ಒತ್ತಡ ಮತ್ತು ಹೆಚ್ಚಿದ ನಿರ್ವಹಣಾ ವೆಚ್ಚದ ಕಾರಣಗಳನ್ನು ಉಲ್ಲೇಖಿಸಿ, ಜೂನ್ 2026 ರಿಂದ ತನ್ನ ಎಲ್ಲಾ ಮಾದರಿಗಳ ವಾಹನಗಳ ಬೆಲೆಯನ್ನು ರೂ 30,000 ವರೆಗೆ ಹೆಚ್ಚಿಸುವುದಾಗಿ ಕಾರು ಮಾರುಕಟ್ಟೆಯಲ್ಲಿ ಮುಂಚೂಣಿಯಲ್ಲಿರುವ ಮಾರುತಿ ಸುಜುಕಿ ಇಂಡಿಯಾ ಗುರುವಾರ ತಿಳಿಸಿದೆ.

ಜೂನ್ 2026 ರಿಂದ ಜಾರಿಗೆ ಬರುವಂತೆ ಕಂಪನಿಯು ತನ್ನ ಎಲ್ಲಾ ಮಾದರಿಗಳ ಬೆಲೆಯನ್ನು ರೂ 30,000 ವರೆಗೆ ಹೆಚ್ಚಿಸಲು ನಿರ್ಧರಿಸಿದೆ. ಬೆಲೆ ಏರಿಕೆಯು ಮಾದರಿಯಿಂದ ಮಾದರಿಗೆ ಬದಲಾಗುತ್ತದೆ ಎಂದು ಮಾರುತಿ ಸುಜುಕಿ ಇಂಡಿಯಾ ತಿಳಿಸಿದೆ.

ಕಳೆದ ಕೆಲವು ತಿಂಗಳುಗಳಿಂದ ಕಂಪನಿಯು ವೆಚ್ಚ ಕಡಿತ ಕ್ರಮಗಳ ಮೂಲಕ ಸಾಧ್ಯವಾದಷ್ಟು ವೆಚ್ಚದ ಪರಿಣಾಮವನ್ನು ತಗ್ಗಿಸಲು ನಿರಂತರ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಕಂಪನಿ ಹೇಳಿದೆ.

ಆದಾಗ್ಯೂ ಈಗ ಹಣದುಬ್ಬರ ಒತ್ತಡಗಳು ಹೆಚ್ಚಿನ ಮಟ್ಟದಲ್ಲಿರುವುದರಿಂದ ಮತ್ತು ಪ್ರತಿಕೂಲ ವೆಚ್ಚದ ವಾತಾವರಣ ಮುಂದುವರಿದಿರುವುದರಿಂದ ಕಂಪನಿಯು ಹೆಚ್ಚಿದ ವೆಚ್ಚಗಳ ಒಂದು ಭಾಗವನ್ನು ಮಾರುಕಟ್ಟೆಗೆ ವರ್ಗಾಯಿಸಬೇಕಾಗುತ್ತದೆ, ಆದರೆ ಗ್ರಾಹಕರ ಮೇಲಿನ ಪರಿಣಾಮವನ್ನು ಸಾಧ್ಯವಾದಷ್ಟು ಕಡಿಮೆ ಮಟ್ಟದಲ್ಲಿ ಇರಿಸಲಾಗಿದೆ ಎಂದು ಕಂಪನಿ ಹೇಳಿಕೆಯಲ್ಲಿ ತಿಳಿಸಿದೆ.

ಮಾರುತಿ ಸುಜುಕಿ ಇಂಡಿಯಾ ಪ್ರಸ್ತುತ ಆರಂಭಿಕ ಹಂತದ S-Presso ದಿಂದ ಪ್ರೀಮಿಯಂ ಯುಟಿಲಿಟಿ ಕಾರು Invicto ವರೆಗೆ ವಿವಿಧ ರೀತಿಯ ಕಾರುಗಳನ್ನು ಮಾರಾಟ ಮಾಡುತ್ತಿದೆ. ಇವುಗಳ ಬೆಲೆ ರೂ. 3.49 ಲಕ್ಷದಿಂದ ರೂ. 28.7 ಲಕ್ಷ (ಎಕ್ಸ್ ಶೋ ರೂಂ) ವರೆಗೆ ಇದೆ. ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ವೆಚ್ಚಗಳು, ವಿಶೇಷವಾಗಿ ಸರಕುಗಳಿಂದಾಗಿ ಬೆಲೆ ಏರಿಕೆಯ ಸಾಧ್ಯತೆಯ ಬಗ್ಗೆ ಕಂಪನಿಯ ಅಧಿಕಾರಿಗಳು ಈ ಹಿಂದೆಯೇ ಸುಳಿವು ನೀಡಿದ್ದರು

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಭೀಕರ ಅಪಘಾತ: ನಿಯಂತ್ರಣ ತಪ್ಪಿ ಡಿವೈಡರ್‌ ದಾಟಿ SUVಗೆ ಕಾರು ಡಿಕ್ಕಿ, ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸೇರಿ 6 ಮಂದಿಗೆ ಗಾಯ..!

ಇರಾನ್ ಉಸಿರುಗಟ್ಟಿಸಲು ಟ್ರಂಪ್ ಮಾಸ್ಟರ್ ಪ್ಲ್ಯಾನ್: ಆರ್ಥಿಕ 'ಡಿ-ಡೇ’ ಘೋಷಣೆ, ಅಮೆರಿಕ ಹೊಸ ನಿರ್ಬಂಧದಿಂದ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಹೆಚ್ಚಿದ ಆತಂಕ..!

ರಾಹುಲ್ ಗಾಂಧಿ ನಿಲುವಿಗೆ ಉಲ್ಟಾ ಹೊಡೆದರೇ ಡಿಕೆಶಿ? CM ನಿವಾಸಕ್ಕೆ ಅದಾನಿ ಭೇಟಿ; ಕೈ ಪಾಳಯದಲ್ಲಿ ಭುಗಿಲೆದ್ದ ಅಸಮಾಧಾನ..!

KPSC ಹಗರಣ: IAS ಅಧಿಕಾರಿ ಗಂಗ್ವಾರ್ ಮನೆ ಮೇಲೆ ED ದಾಳಿ; ಗೇಟ್ ಲಾಕ್ ಮಾಡಿ ಸೆಕ್ಯೂರಿಟಿ ಹೈಡ್ರಾಮಾ, ಕೀ ಮೇಕರ್ ಕರೆಯಿಸಿ ಬಾಗಿಲು ಮುರಿದ ಅಧಿಕಾರಿಗಳು..!

Operation Sindoorನಲ್ಲಿ ಧ್ವಂಸವಾಗಿದ್ದ ಜೈಶ್ ನೆಲೆ ಮರುನಿರ್ಮಾಣ! ಪಾಕ್‌ ಸರ್ಕಾರದಿಂದ 25 ಕೋಟಿ ನೆರವು!