ಭಾರತೀಯ ಷೇರು ಮಾರುಕಟ್ಟೆ 
ವಾಣಿಜ್ಯ

Indian Stock Market: ಕಚ್ಚಾ ತೈಲ ದರ ಏರಿಕೆ; ರೂಪಾಯಿ ಮೌಲ್ಯ, Sensex ಇಳಿಕೆ

ಮಂಗಳವಾರ ಭಾರತೀಯ ಷೇರುಮಾರುಕಟ್ಟೆಯ ಇಂದಿನ ವಹಿವಾಟಿನಲ್ಲಿ ಸೆನ್ಸೆಕ್ಸ್ ಶೇ.0.63ರಷ್ಟು ಇಳಿಕೆ ಕಂಡಿದ್ದರೆ, ನಿಫ್ಟಿ ಕೂಡ ಶೇ.0.49ರಷ್ಟು ಇಳಿಕೆ ದಾಖಲಿಸಿದೆ.

ಮುಂಬೈ: ಭಾರತೀಯ ಷೇರುಮಾರುಕಟ್ಟೆ ಮಂಗಳವಾರ ಕುಸಿತದೊಂದಿಗೆ ದಿನದ ವಹಿವಾಟು ಅಂತ್ಯಗೊಳಿಸಿದ್ದು, ಷೇರುಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಎರಡೂ ರೆಡ್ ನಲ್ಲಿ ವಹಿವಾಟು ಅಂತ್ಯಗೊಳಿಸಿದೆ.

ಮಂಗಳವಾರ ಭಾರತೀಯ ಷೇರುಮಾರುಕಟ್ಟೆಯ ಇಂದಿನ ವಹಿವಾಟಿನಲ್ಲಿ ಸೆನ್ಸೆಕ್ಸ್ ಶೇ.0.63ರಷ್ಟು ಇಳಿಕೆ ಕಂಡಿದ್ದರೆ, ನಿಫ್ಟಿ ಕೂಡ ಶೇ.0.49ರಷ್ಟು ಇಳಿಕೆ ದಾಖಲಿಸಿದೆ.

ಸೆನ್ಸೆಕ್ಸ್ ಇಂದು 479.26 ಅಂಕಗಳ ಇಳಿರಿಕೆಯೊಂದಿಗೆ 76,009.70 ಅಂಕಗಳಿಗೆ ಇಳಿಕೆಯಾಗಿದ್ದರೆ, ನಿಫ್ಟಿ 118 ಅಂಕಗಳ ಇಳಿಕೆಯೊಂದಿಗೆ 23,913.70 ಅಂಕಗಳಿಗೆ ಇಳಿಕೆಯಾಗಿ ದಿನದ ವಹಿವಾಟು ಅಂತ್ಯಗೊಳಿಸಿದೆ.

ಇಂದಿನ ವಹಿವಾಟಿನಲ್ಲಿ ಗ್ರಾಹಕ ಬಾಳಿಕೆ ವಸ್ತುಗಳು, ಪಿಎಸ್ ಯು ಬ್ಯಾಂಕ್, ರಿಯಾಲಿಟಿ ಮತ್ತು ಆಸ್ಪತ್ರೆ ವಲಯದ ಷೇರುಗಳು ಷೇರುಗಳು ಹೆಚ್ಚಿನ ನಷ್ಟ ಕಂಡಿವೆ.

ಯಾರಿಗೆ ಲಾಭ? ಯಾರಿಗೆ ನಷ್ಟ?

ಇಂದಿನ ವಹಿವಾಟಿನಲ್ಲಿ ಸೆನ್ಸೆಕ್ಸ್ ನಲ್ಲಿ ಪಟ್ಟಿ ಮಾಡಲಾದ ಸಂಸ್ಥೆಗಳ ಪೈಕಿ ಭಾರ್ತಿ ಏರ್‌ಟೆಲ್, ಟ್ರೆಂಟ್, ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್, ಬಜಾಜ್ ಫೈನಾನ್ಸ್, ಟೈಟಾನ್ ಮತ್ತು ಎಚ್‌ಡಿಎಫ್‌ಸಿ ಬ್ಯಾಂಕ್ ಸಂಸ್ಥೆಯ ಷೇರುಗಳು ನಷ್ಟ ಕಂಡಿದೆ. ಅಂತೆಯೇ ಟೆಕ್ ಮಹೀಂದ್ರಾ, ಎಟರ್ನಲ್, ಮಾರುತಿ ಮತ್ತು ಅದಾನಿ ಪೋರ್ಟ್ಸ್ ಸಂಸ್ಥೆಯ ಷೇರುಗಳು ಲಾಭಾಂಶ ಕಂಡಿವೆ.

ರೂಪಾಯಿ ಮೌಲ್ಯ ಕುಸಿತ

ಅತ್ತ ಷೇರುಮಾರುಕಟ್ಟೆ ಕುಸಿತದ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ರೂಪಾಯಿ ಮೌಲ್ಯ ಕೂಡ ಕುಸಿತ ಮುಂದುವರೆಸಿದೆ. ಇಂದೂ ಕೂಡ ರೂಪಾಯಿ ಮೌಲ್ಯದಲ್ಲಿ 47 ಪೈಸೆಯಷ್ಟು ಕುಸಿತವಾಗಿದ್ದು, ಡಾಲರ್ ಎದುರು 95.73ರೂಗೆ ಕುಸಿತವಾಗಿದೆ. ಪಶ್ಚಿಮ ಏಷ್ಯಾದಲ್ಲಿ ಹೊಸ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಮತ್ತು ಕಚ್ಚಾ ತೈಲ ಬೆಲೆಗಳ ಏರಿಕೆ ಹಿನ್ನಲೆಯಲ್ಲಿ ಜಾಗತಿಕವಾಗಿ ರೂಪಾಯಿ ಮೌಲ್ಯ ಕುಸಿತವಾಗಿದೆ ಎನ್ನಲಾಗಿದೆ.

ಕಚ್ಚಾ ತೈಲ ದರ ಏರಿಕೆ

ಇನ್ನು ಕಚ್ಚಾ ತೈಲ ಬೆಲೆಯಲ್ಲೂ ಗಣನೀಯ ಏರಿಕೆಯಾಗಿದ್ದು, ಸೋಮವಾರಕ್ಕೆ ಹೋಲಿಕೆ ಮಾಡಿದರೆ ಇಂದು ಕಚ್ಚಾತೈಲಗಳ ದರ ಶೇ.3ರಷ್ಟು ಏರಿಕೆಯಾಗಿದೆ. ಆ ಮೂಲಕ ಪ್ರತೀ ಬ್ಯಾರೆಲ್ ಕಚ್ಚಾ ತೈಲದರ 99.10 ಡಾಲರ್ ಗೆ ಏರಿಕೆಯಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಖ್ಯಮಂತ್ರಿ ಬದಲಾವಣೆ: ದೆಹಲಿಯಲ್ಲಿ ಕಾಂಗ್ರೆಸ್‌ ಮ್ಯಾರಥಾನ್‌ ಮೀಟಿಂಗ್ ಬಳಿಕ ಕೆಸಿ ವೇಣುಗೋಪಾಲ್ ಹೇಳಿದ್ದೇನು?

ಫೈನಲ್ ಫೈಟ್: ಸಿದ್ದರಾಮಯ್ಯ ಮನವೊಲಿಕೆಗೆ ರಾಹುಲ್ ಗಾಂಧಿ ಯತ್ನ; ಯತೀಂದ್ರಗೆ DCM ಸ್ಥಾನ, ರಾಜ್ಯಸಭೆ ಆಫರ್?

ಪಟ್ಟಕ್ಕಾಗಿ ಫೈನಲ್ ಫೈಟ್: ಮೂರು ಷರತ್ತುಗಳನ್ನು ಹೈಕಮಾಂಡ್ ಮುಂದಿಟ್ಟ ಡಿಕೆಶಿ; CM ಹುದ್ದೆಗಾಗಿ ಬಿಗಿಪಟ್ಟು!

ರಾಜ್ಯ ಸರ್ಕಾರದ 'ದ್ವೇಷ ಭಾಷಣ' ಮಸೂದೆಗೆ ಅಮಿತ್ ಶಾ ಅಡ್ಡಗಾಲು; ಅಸ್ತಿತ್ವದಲ್ಲಿರುವ ಕಾನೂನೇ ಸಾಕು: ಕೇಂದ್ರ

Mekedatu row: ಕರ್ನಾಟಕದ DPR ತಿರಸ್ಕರಿಸಿ; ಪ್ರಧಾನಿ ಮೋದಿಗೆ ತಮಿಳುನಾಡು ಸಿಎಂ ವಿಜಯ್ ಮನವಿ

SCROLL FOR NEXT