ಎಐ ಸೃಷ್ಟಿತ ಚಿತ್ರ 
ವಾಣಿಜ್ಯ

West Asia Conflict: Diesel-ATF ರಫ್ತಿನ ಮೇಲಿನ Windfall ತೆರಿಗೆ ಹೆಚ್ಚಿಸಿದ ಕೇಂದ್ರ ಸರ್ಕಾರ, ಪೆಟ್ರೋಲ್‌ಗೆ ಶೂನ್ಯ ಸುಂಕ ಮುಂದುವರಿಕೆ..!

ಪೆಟ್ರೋಲ್ ರಫ್ತಿನ ಮೇಲಿನ ತೆರಿಗೆಯಲ್ಲಿ ಯಾವುದೇ ಬದಲಾವಣೆ ಮಾಡದೆ, ಶೂನ್ಯ ದರವನ್ನೇ ಉಳಿಸಿಕೊಳ್ಳಲಾಗಿದೆ. ನವೆಂಬರ್ 16ರ ತಡರಾತ್ರಿ ಹೊರಡಿಸಿದ ಅಧಿಸೂಚನೆಯಲ್ಲಿ ಹಣಕಾಸು ಸಚಿವಾಲಯ ಈ ಬದಲಾವಣೆಗಳು ತಕ್ಷಣದಿಂದಲೇ ಜಾರಿಗೆ ಬರಲಿವೆ ಎಂದು ತಿಳಿಸಿದೆ.

ನವದೆಹಲಿ: ಜಾಗತಿಕ ತೈಲ ಮಾರುಕಟ್ಟೆಯಲ್ಲಿನ ಏರಿಳಿತಗಳ ನಡುವೆ ದೇಶೀಯ ಮಾರುಕಟ್ಟೆಯಲ್ಲಿ ಇಂಧನ ಪೂರೈಕೆಯನ್ನು ಸ್ಥಿರವಾಗಿಡುವ ಉದ್ದೇಶದಿಂದ ಕೇಂದ್ರ ಸರ್ಕಾರವು ಡೀಸೆಲ್ ಮತ್ತು ವಿಮಾನ ಇಂಧನದ (ATF) ರಫ್ತಿನ ಮೇಲಿನ 'ವಿಂಡ್‌ಫಾಲ್ ಗೇನ್ಸ್ ತೆರಿಗೆ'ಯನ್ನು (Windfall Gains Tax) ಮತ್ತೊಮ್ಮೆ ಹೆಚ್ಚಿಸಿದೆ. ಆದರೆ, ಪೆಟ್ರೋಲ್ ರಫ್ತಿನ ಮೇಲಿನ ಸುಂಕವನ್ನು ಶೂನ್ಯದಲ್ಲೇ ಉಳಿಸಿಕೊಂಡಿದೆ.

ಎಟಿಎಫ್ ರಫ್ತಿನ ಮೇಲಿನ ತೆರಿಗೆಯನ್ನು ಪ್ರತಿ ಲೀಟರ್‌ಗೆ 11 ರೂ.ನಿಂದ 12.5 ರೂ.ಗೆ ಹೆಚ್ಚಿಸಲಾಗಿದೆ. ಅದೇ ರೀತಿ, ಡೀಸೆಲ್ ರಫ್ತಿನ ಮೇಲಿನ ವಿಶೇಷ ಹೆಚ್ಚುವರಿ ಅಬಕಾರಿ ಸುಂಕ (SAED) ಮತ್ತು ರಸ್ತೆ ಹಾಗೂ ಮೂಲಸೌಕರ್ಯ ಸೆಸ್‌ಗಳ ಒಟ್ಟು ದರವನ್ನು ಪ್ರತಿ ಲೀಟರ್‌ಗೆ 11.5 ರೂ.ನಿಂದ 14 ರೂ.ಗೆ ಏರಿಸಲಾಗಿದೆ.

ಪೆಟ್ರೋಲ್ ರಫ್ತಿನ ಮೇಲಿನ ತೆರಿಗೆಯಲ್ಲಿ ಯಾವುದೇ ಬದಲಾವಣೆ ಮಾಡದೆ, ಶೂನ್ಯ ದರವನ್ನೇ ಉಳಿಸಿಕೊಳ್ಳಲಾಗಿದೆ. ನವೆಂಬರ್ 16ರ ತಡರಾತ್ರಿ ಹೊರಡಿಸಿದ ಅಧಿಸೂಚನೆಯಲ್ಲಿ ಹಣಕಾಸು ಸಚಿವಾಲಯ ಈ ಬದಲಾವಣೆಗಳು ತಕ್ಷಣದಿಂದಲೇ ಜಾರಿಗೆ ಬರಲಿವೆ ಎಂದು ತಿಳಿಸಿದೆ.

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚಾದ ಹಿನ್ನೆಲೆಯಲ್ಲಿ, ಮಾರ್ಚ್ 27ರಂದು ಡೀಸೆಲ್ ಮತ್ತು ಎಟಿಎಫ್ ರಫ್ತಿನ ಮೇಲೆ ಕೇಂದ್ರ ಸರ್ಕಾರ ತೆರಿಗೆ ವಿಧಿಸಿತ್ತು. ಬಳಿಕ ಪ್ರತಿ ಹದಿನೈದು ದಿನಗಳಿಗೊಮ್ಮೆ ತೆರಿಗೆ ದರವನ್ನು ಪರಿಷ್ಕರಿಸುತ್ತಾ ಬಂದಿದೆ. ಮೇ 16ರಿಂದ ಪೆಟ್ರೋಲ್ ರಫ್ತಿಗೂ ಈ ತೆರಿಗೆಯನ್ನು ವಿಧಿಸಲಾಗಿತ್ತು.

ದೇಶೀಯ ಬಳಕೆಗಾಗಿ ಮಾರಾಟ ಮಾಡುವ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಸ್ತಿತ್ವದಲ್ಲಿರುವ ತೆರಿಗೆ ದರಗಳಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸಚಿವಾಲಯ ಸ್ಪಷ್ಟಪಡಿಸಿದೆ.

ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಸ್ಥಿತಿ ಉಂಟಾದ ಹಿನ್ನೆಲೆಯಲ್ಲಿ ದೇಶೀಯ ಮಾರುಕಟ್ಟೆಯಲ್ಲಿ ಇಂಧನ ಲಭ್ಯತೆಯನ್ನು ಹೆಚ್ಚಿಸುವ ಉದ್ದೇಶದಿಂದ ವಿಂಡ್‌ಫಾಲ್ ತೆರಿಗೆ ವಿಧಿಸಲಾಗಿತ್ತು.

ಯುದ್ಧ ಆರಂಭವಾದ ಬಳಿಕ ಜಾಗತಿಕ ಕಚ್ಚಾ ತೈಲ ಬೆಲೆಗಳು ಏರಿಕೆಯಾಗಿದ್ದರಿಂದ, ವಿದೇಶಿ ಮಾರುಕಟ್ಟೆಗಳಲ್ಲಿ ದೊರೆಯುವ ಹೆಚ್ಚಿನ ಬೆಲೆಯ ಲಾಭವನ್ನು ರಫ್ತುದಾರರು ಅತಿಯಾಗಿ ಪಡೆಯುವುದನ್ನು ತಡೆಯುವುದು ಕೂಡ ಈ ತೆರಿಗೆಯ ಉದ್ದೇಶವಾಗಿತ್ತು.

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಸಂದರ್ಭದಲ್ಲಿ ಇಂಧನ ರಫ್ತನ್ನು ನಿರುತ್ಸಾಹಗೊಳಿಸುವ ಮೂಲಕ ದೇಶೀಯ ಮಾರುಕಟ್ಟೆಯಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ಲಭ್ಯತೆಯನ್ನು ಖಚಿತಪಡಿಸುವುದು ಈ ಕ್ರಮದ ಪ್ರಮುಖ ಉದ್ದೇಶವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮನಿಲಾದಲ್ಲಿ ಕ್ವಾಡ್ ಶೃಂಗಸಭೆ 2026: ಪ್ರಧಾನಿ ಮೋದಿ ಗ್ರೇಟ್ ಲೀಡರ್, 'ವೆರಿ ಟಫ್ ಮ್ಯಾನ್' ಎಂದ ಡೊನಾಲ್ಡ್ ಟ್ರಂಪ್!

'ಚಿಕ್ಕ ವಯಸ್ಸಿನಲ್ಲಿ ದೊಡ್ಡ ತಪ್ಪು ಮಾಡಿದೆ': ಕಿಸ್ ಬೆಡಗಿ ಶ್ರೀಲೀಲಾ ಶಾಕಿಂಗ್ ತಪ್ಪೊಪ್ಪಿಗೆ!

'ಅಪ್ಪನ ತೊಡೆಯ ಮೇಲೆ ಅಮ್ಮ' ಹೇಳಿಕೆ: BJP, RSS ಮನಸ್ಸಿನಲ್ಲಿ ದ್ವೇಷ ತುಂಬಿಕೊಂಡಿವೆ - ರಾಹುಲ್ ಗಾಂಧಿ ಕಿಡಿ!

ಬೆಂಗಳೂರು: ಬಾಗಲೂರು ಬಳಿ ಕಾರಿನಲ್ಲಿ ವ್ಯಕ್ತಿಯ ಶವ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಗುಂಡಿಕ್ಕಿ ಹತ್ಯೆ ಶಂಕೆ!

ಸೂರಸಂಹಾರ ಉತ್ಸವದಲ್ಲಿ ಸಿಎಂ ವಿಜಯ್ ಗೆ 'ಅರೋಗರ" ಘೋಷಣೆ: ತಮಿಳುನಾಡಿನಲ್ಲಿ ರಾಜಕೀಯ ವಿವಾದ ಭುಗಿಲು! Video