ಎನ್ ಚಂದ್ರಶೇಖರನ್  
ವಾಣಿಜ್ಯ

ನೋಯೆಲ್ ಟಾಟಾ ವಿರೋಧದ ನಡುವೆ ಟಾಟಾ ಸನ್ಸ್ ಅಧ್ಯಕ್ಷರಾಗಿ ಚಂದ್ರಶೇಖರನ್ ಮರುನೇಮಕ!

ಇಂದು ಮುಂಬೈನಲ್ಲಿ ನಡೆದ ಟಾಟಾ ಸನ್ಸ್ ಮಂಡಳಿಯ ಸಭೆಯಲ್ಲಿ ಚಂದ್ರಶೇಖರನ್ ಅವರನ್ನು ಮರುನೇಮಕ ಮಾಡಲು ಅನುಮೋದನೆ ನೀಡಲಾಯಿತು.

ಮುಂಬೈ: ಟಾಟಾ ಟ್ರಸ್ಟ್ಸ್ ಅಧ್ಯಕ್ಷ ನೋಯೆಲ್ ಟಾಟಾ ಅವರ ವಿರೋಧದ ನಡುವೆಯೇ ಟಾಟಾ ಗ್ರೂಪ್‌ನ ಅಧ್ಯಕ್ಷರಾಗಿ ಎನ್ ಚಂದ್ರಶೇಖರನ್ ಅವರನ್ನು ಮತ್ತೊಂದು ಐದು ವರ್ಷಗಳ ಅವಧಿಗೆ ಮರು ನೇಮಕ ಮಾಡಲು ಟಾಟಾ ಸನ್ಸ್ ಮಂಡಳಿ ಗುರುವಾರ ಅನುಮೋದನೆ ನೀಡಿದೆ ಎಂದು ಮೂಲಗಳು ಎಎನ್‌ಐಗೆ ತಿಳಿಸಿವೆ.

ಇಂದು ಮುಂಬೈನಲ್ಲಿ ನಡೆದ ಟಾಟಾ ಸನ್ಸ್ ಮಂಡಳಿಯ ಸಭೆಯಲ್ಲಿ ಚಂದ್ರಶೇಖರನ್ ಅವರನ್ನು ಮರುನೇಮಕ ಮಾಡಲು ಅನುಮೋದನೆ ನೀಡಲಾಯಿತು.

ತಾವು ಮೂರನೇ ಅವಧಿಗೆ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಯುವುದಿಲ್ಲ ಎಂದು ಎನ್. ಚಂದ್ರಶೇಖರನ್ ಅವರು ಕಳೆದ ಆಗಸ್ಟ್‌ನಲ್ಲಿ ಘೋಷಿಸಿದ ಒಂದು ತಿಂಗಳಲ್ಲೇ ಈ ಬೆಳವಣಿಗೆ ನಡೆದಿರುವುದು ಬಾರೀ ಕುತೂಹಲಕ್ಕೆ ಕಾರಣವಾಗಿದೆ.

ಐಪಿಒ ಪಟ್ಟಿ ಮಾಡುವ ವಿಚಾರದಲ್ಲಿ ಆಂತರಿಕ ಭಿನ್ನಾಭಿಪ್ರಾಯಗಳ ನಡುವೆಯೂ ಹೂಡಿಕೆದಾರರ ನಂಬಿಕೆ ಉಳಿಸಿಕೊಳ್ಳಲು ಈ ನಿರ್ಧಾರ ಕೈಗೊಳ್ಳಲಾಗಿದೆ. ಟಾಟಾ ಟ್ರಸ್ಟ್ಸ್ ಅಧ್ಯಕ್ಷ ನೋಯೆಲ್ ಟಾಟಾ ಈ ನಿರ್ಧಾರದ ವೇಳೆ ಮತ ಚಲಾಯಿಸದೆ ಹೊರಗುಳಿದಿದ್ದಾರೆ.

ಚಂದ್ರಶೇಖರನ್ ವಿರುದ್ಧ ಮತ ಚಲಾಯಿಸಿದ ನೋಯೆಲ್ ಟಾಟಾ

ಟಾಟಾ ಸನ್ಸ್‌ನ ಸುಮಾರು ಶೇಕಡಾ 66 ರಷ್ಟು ಪಾಲನ್ನು ನಿಯಂತ್ರಿಸುವ ಟಾಟಾ ಟ್ರಸ್ಟ್ಸ್‌ನ ಅಧ್ಯಕ್ಷರಾದ ನೋಯೆಲ್ ಟಾಟಾ ಅವರು ಚಂದ್ರಶೇಖರನ್ ಅವರ ಮರುನೇಮಕದ ವಿರುದ್ಧ ಮತ ಚಲಾಯಿಸಿದರು, ಆದರೆ ಬಹುಮತದೊಂದಿಗೆ ನಿರ್ಣಯವು ಅಂಗೀಕರಿಸಲ್ಪಟ್ಟಿತು ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Ration Card e-KYC ಮಾಡಿಸಲು ಮುಗಿಬಿದ್ದ ಜನರಿಗೆ ಕೊನೆಗೂ ಸಿಕ್ತು ಬಿಗ್ ರಿಲೀಫ್! ಇ-ಕೆವೈಸಿ ಗಡುವು ವಿಸ್ತರಿಸಿದ ಸರ್ಕಾರ; ಹಾಗಾದ್ರೆ, ಕೊನೆಯ ದಿನಾಂಕ ಯಾವಾಗ?

ಭಾರತ ವಿಶ್ವಾಸಾರ್ಹ ಸೆಮಿಕಂಡಕ್ಟರ್ ಉತ್ಪಾದನಾ ತಾಣ, ಉದ್ಯಮಕ್ಕೆ ಅನುಕೂಲ ವಾತಾವರಣ ನಿರ್ಮಿಸಲು ಸರ್ಕಾರ ಸಿದ್ಧ: ಪ್ರಧಾನಿ ಮೋದಿ

ನಾನು ಇನ್ನೆಲ್ಲಿಗೆ ಹೋಗೋಕಾಗುತ್ತೆ, ಇಲ್ಲಿನ ಜನರನ್ನೆ ನಂಬಿಕೊಂಡಿದ್ದೀನಿ: ರಾಮನಗರದಿಂದಲೇ ಸ್ಪರ್ಧೆ ಖಚಿತ; ನಿಖಿಲ್ ಕುಮಾರಸ್ವಾಮಿ

ಉಮರ್ ಖಾಲಿದ್​​ರನ್ನು ದೇಶದ್ರೋಹಿ ಎನ್ನುವವರೇ ನಿಜವಾದ ರಾಷ್ಟ್ರದ್ರೋಹಿಗಳು: ಬಿ ಕೆ ಹರಿಪ್ರಸಾದ್

ಅತಿದೊಡ್ಡ ಲೋಕಾಯುಕ್ತ ದಾಳಿ: ಭೂ ದಾಖಲೆ ತಿದ್ದುಪಡಿಗೆ ಬರೋಬ್ಬರಿ 50 ಲಕ್ಷ ರೂ.ಲಂಚ; ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರ್!