Karwar District Court Recruitment 2026: ಸರ್ಕಾರಿ ಹುದ್ದೆಯ ಕನಸು ಕಾಣುತ್ತಿರುವ ಯುವಜನತೆಗೆ ಇಲ್ಲಿದೆ ಒಂದು ಭರ್ಜರಿ ಸಿಹಿ ಸುದ್ದಿ. ನೀವು ಕೇವಲ SSLC ಪಾಸಾಗಿದ್ದೀರಾ? ಹಾಗಿದ್ದರೆ ನ್ಯಾಯಾಲಯದಲ್ಲಿ ಕಾಯಂ ಉದ್ಯೋಗ ಪಡೆಯಲು ಸುವರ್ಣಾವಕಾಶ ಒಲಿದು ಬಂದಿದೆ. ಅದರಂತೆ, ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿರುವ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಒಟ್ಟು 18 ವಿವಿಧ ಹುದ್ದೆಗಳ ಭರ್ಜಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆ ಕುರಿತ ವರದಿ ಇಲ್ಲಿದೆ:
ಹುದ್ದೆಗಳ ವಿವರ:
ನ್ಯಾಯಾಲಯದಲ್ಲಿ ಖಾಲಿ ಇರುವ ಒಟ್ಟು 78 ಹುದ್ದೆಗಳನ್ನು ಈ ಕೆಳಗಿನಂತೆ ವಿಂಗಡಿಸಲಾಗಿದೆ:
ಆದೇಶ ಜಾರಿಕಾರರು: 18 ಹುದ್ದೆಗಳು
ಜವಾನರು: 43 ಹುದ್ದೆಗಳು
ಶೀಘ್ರಲಿಪಿಗಾರರು ಗ್ರೇಡ್-3: 04 ಹುದ್ದೆಗಳು
ಬೆರಳಚ್ಚುಗಾರರು: 11 ಹುದ್ದೆಗಳು
ಬೆರಳಚ್ಚು-ನಕಲುಗಾರರು: 02 ಹುದ್ದೆಗಳು
ಅರ್ಹತೆ:
ವಿದ್ಯಾರ್ಹತೆ:
ಜವಾನ ಮತ್ತು ಆದೇಶ ಜಾರಿಕಾರ ಹುದ್ದೆಗಳಿಗೆ: ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ ಕಡ್ಡಾಯವಾಗಿ ಎಸ್‌ಎಸ್‌ಎಲ್‌ಸಿ (SSLC / 10th Standard) ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು. ಕನ್ನಡ ಮಾತನಾಡಲು ಮತ್ತು ಬರೆಯಲು ಕಡ್ಡಾಯವಾಗಿ ಬರಬೇಕು. ಅದೇ ರೀತಿ ಆದೇಶ ಜಾರಿಕಾರ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಲ್ಲಿ ಭಾರಿ ಅಥವಾ ಹಗುರ ವಾಹನ ಚಾಲನಾ ಪರವಾನಗಿ ಹೊಂದಿರುವವರಿಗೆ ಆಯ್ಕೆ ಪ್ರಕ್ರಿಯೆಯಲ್ಲಿ ಮೊದಲ ಆದ್ಯತೆ ನೀಡಲಾಗುತ್ತದೆ.
ಶೀಘ್ರಲಿಪಿಗಾರರು ಮತ್ತು ಬೆರಳಚ್ಚುಗಾರ ಹುದ್ದೆಗಳಿಗೆ: SSLC ಪಾಸ್ ಆಗಿರಬೇಕು. ಇದರ ಜೊತೆಗೆ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳ ಸೀನಿಯರ್/ಜೂನಿಯರ್ ಗ್ರೇಡ್‌ಗಳ ಬೆರಳಚ್ಚು (Typing) ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು.
ವಯೋಮಿತಿ:
ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ತುಂಬಿರಬೇಕು. ಗರಿಷ್ಠ ವಯೋಮಿತಿ 35 ವರ್ಷ (ಪ್ರವರ್ಗ 2A, 2B, 3A, 3B ಅಭ್ಯರ್ಥಿಗಳಿಗೆ 3 ವರ್ಷ ಹಾಗೂ (SC/ST/Cat-1) 5 ವರ್ಷ ಸಡಿಲಿಕೆ ಇರಲಿದೆ).
ಸಂಬಳ:
ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಕರ್ನಾಟಕ ಸರ್ಕಾರದ 7ನೇ ವೇತನ ಆಯೋಗದ ಅನ್ವಯ ಆಕರ್ಷಕ ಮಾಸಿಕ ವೇತನ ಸಿಗಲಿದೆ:
ಜವಾನ ಹುದ್ದೆಗಳಿಗೆ: ₹17,000 ರಿಂದ ₹28,950
ಆದೇಶ ಜಾರಿಕಾರ ಹುದ್ದೆಗಳಿಗೆ: ₹19,950 ರಿಂದ ₹37,900
ಬೆರಳಚ್ಚುಗಾರ ಮತ್ತು ಇತರ ಹುದ್ದೆಗಳಿಗೆ: ₹21,400 ರಿಂದ ₹42,000 ವರೆಗೆ (ಹುದ್ದೆಯ ಆಧಾರದ ಮೇಲೆ)
ಆಯ್ಕೆ ಪ್ರಕ್ರಿಯೆ ಹೇಗೆ ನಡೆಯುತ್ತದೆ?
ಜವಾನ ಮತ್ತು ಆದೇಶ ಜಾರಿಕಾರ: ಅಭ್ಯರ್ಥಿಗಳು SSLC ಪರೀಕ್ಷೆಯಲ್ಲಿ ಗಳಿಸಿದ ಒಟ್ಟು ಅಂಕಗಳ ಮೆರಿಟ್ ಆಧಾರದ ಮೇಲೆ (1:10 ಅನುಪಾತದಲ್ಲಿ) ಅಭ್ಯರ್ಥಿಗಳನ್ನು ನೇರ ಸಂದರ್ಶನಕ್ಕೆ ಕರೆಯಲಾಗುತ್ತದೆ. ಸಂದರ್ಶನದಲ್ಲಿ ಪಡೆಯುವ ಅಂಕಗಳ ಆಧಾರದ ಮೇಲೆ ಅಂತಿಮ ಆಯ್ಕೆ ಪಟ್ಟಿ ಸಿದ್ಧಪಡಿಸಲಾಗುತ್ತದೆ.
ಬೆರಳಚ್ಚುಗಾರರು: ಇವರಿಗೆ ಮೆರಿಟ್ ಜೊತೆಗೆ ಕಡ್ಡಾಯವಾಗಿ ಬೆರಳಚ್ಚು ವೇಗದ ಪರೀಕ್ಷೆ ನಡೆಸಿ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಉತ್ತರ ಕನ್ನಡ ಜಿಲ್ಲಾ ನ್ಯಾಯಾಲಯದ ಅಧಿಕೃತ ವೆಬ್‌ಸೈಟ್ uttarakannada.dcourts.gov.in ಗೆ ಭೇಟಿ ನೀಡಬೇಕು.
ವೆಬ್‌ಸೈಟ್‌ನಲ್ಲಿ ನೀಡಲಾಗಿರುವ 'Online Recruitment' ಲಿಂಕ್ ಕ್ಲಿಕ್ ಮಾಡಿ ಆನ್‌ಲೈನ್ ಅರ್ಜಿಯನ್ನು ಭರ್ತಿ ಮಾಡಬೇಕು.
ನಿಮ್ಮ ಫೋಟೋ, ಸಹಿ ಮತ್ತು ಅಗತ್ಯ ಶೈಕ್ಷಣಿಕ ದಾಖಲೆಗಳನ್ನು ಅಪ್‌ಲೋಡ್ ಮಾಡಿ, ನಿಗದಿತ ಅರ್ಜಿ ಶುಲ್ಕವನ್ನು ಆನ್‌ಲೈನ್ ಅಥವಾ ಎಸ್‌ಬಿಐ ಚಲನ್ ಮೂಲಕ ಪಾವತಿಸಬೇಕು.
ಅರ್ಜಿ ಶುಲ್ಕ:
ಸಾಮಾನ್ಯ ವರ್ಗದವರಿಗೆ 300 ರೂಪಾಯಿ ಹಾಗೂ ಪ್ರವರ್ಗ 2ಎ, 2ಬಿ, 3ಎ, 3ಬಿ ವರ್ಗದವರಿಗೆ 150 ರೂಪಾಯಿ ಅರ್ಜಿ ಶುಲ್ಕವಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ 1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಸಂಪೂರ್ಣ ಶುಲ್ಕ ವಿನಾಯಿತಿ ನೀಡಲಾಗಿದೆ.
ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಆಗಸ್ಟ್ 17
ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 16
ಶುಲ್ಕ ಪಾವತಿಗೆ ಸೆಪ್ಟೆಂಬರ್ 17
ನೇಮಕಾತಿ ಅಧಿಸೂಚನೆ ಲಿಂಕ್:
https://cdnbbsr.s3waas.gov.in/s3ec01e5522f7ac7cd76f19b396595c9c2/uploads/2024/06/2024061836.pdf