ವೈದ್ಯ 
ವೃತ್ತಿ & ಉದ್ಯೋಗ ಅವಕಾಶಗಳು

BAMS ಪದವೀಧರರಿಗೆ ಗುಡ್ ನ್ಯೂಸ್; ಕರ್ನಾಟಕ ಸರ್ಕಾರಿ ಉದ್ಯೋಗಾವಕಾಶ; ಅರ್ಜಿ ಸಲ್ಲಿಸುವುದು ಹೇಗೆ?

ವೈದ್ಯಕೀಯ ಕ್ಷೇತ್ರದಲ್ಲಿ ಸರ್ಕಾರಿ ಉದ್ಯೋಗ ಹುಡುಕುತ್ತಿರುವ ಆಯುಷ್ ಪದವೀಧರರಿಗೆ ಸುವರ್ಣಾವಕಾಶ. ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ರಾಷ್ಟ್ರೀಯ ಆಯುಷ್ ಅಭಿಯಾನದಡಿಯಲ್ಲಿ ಸಮುದಾಯ ಆರೋಗ್ಯ ಅಧಿಕಾರಿ ಹುದ್ದೆಯ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಬಿದ್ದಿದೆ. ಆ ಕುರಿತ ವರದಿ ಇಲ್ಲಿದೆ:

ಚಿಕ್ಕಬಳ್ಳಾಪುರ: ವೈದ್ಯಕೀಯ ಕ್ಷೇತ್ರದಲ್ಲಿ ಸರ್ಕಾರಿ ಉದ್ಯೋಗ ಹುಡುಕುತ್ತಿರುವ ಆಯುಷ್ ಪದವೀಧರರಿಗೆ ಸುವರ್ಣಾವಕಾಶ ಒಲಿದು ಬಂದಿದೆ. ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ರಾಷ್ಟ್ರೀಯ ಆಯುಷ್ ಅಭಿಯಾನದಡಿಯಲ್ಲಿ ಸಮುದಾಯ ಆರೋಗ್ಯ ಅಧಿಕಾರಿ ಹುದ್ದೆಯ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಬಿದ್ದಿದ್ದು, ಅರ್ಹ ಅಭ್ಯರ್ಥಿಗಳಿಗೆ ಇದು ಉತ್ತಮ ವೇದಿಕೆಯಾಗಿದೆ. ಹಾಗಾಗಿ, ನೇಮಕಾತಿ ಕುರಿತ ಸಂಪೂರ್ಣ ಮಾಹಿತಿ ಈ ವರದಿಯಲ್ಲಿದೆ:

ಹುದ್ದೆಯ ವಿವರ:

  • ಹುದ್ದೆಯ ಹೆಸರು: ಸಮುದಾಯ ಆರೋಗ್ಯ ಅಧಿಕಾರಿ

  • ಖಾಲಿ ಇರುವ ಹುದ್ದೆ: 01

  • ಉದ್ಯೋಗದ ಸ್ಥಳ: ಆಯುಷ್ ಆರೋಗ್ಯ ಮಂದಿರ, ಸೋಮೇನಹಳ್ಳಿ, ಗುಡಿಬಂಡೆ ತಾಲೂಕು, ಚಿಕ್ಕಬಳ್ಳಾಪುರ ಜಿಲ್ಲೆ

  • ನೇಮಕಾತಿ ವಿಧಾನ: ಸಂಪೂರ್ಣ ತಾತ್ಕಾಲಿಕ ಗುತ್ತಿಗೆ ಆಧಾರದ ಮೇಲೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಆಗಸ್ಟ್ 31, 2026

ಅರ್ಹತೆ:

  • ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿಎಎಂಎಸ್ ಪದವಿ ಅಥವಾ ನಿಗದಿಪಡಿಸಿದ ಆಯುಷ್ ವೈದ್ಯಕೀಯ ಪದವಿ ಹೊಂದಿರಬೇಕು ಹಾಗೂ ಕಡ್ಡಾಯವಾಗಿ ನೋಂದಣಿ ಮಾಡಿಸಿರಬೇಕು.

  • ವಯೋಮಿತಿ: ಆಗಸ್ಟ್ 13, 2026 ಕ್ಕೆ ಅನ್ವಯಿಸುವಂತೆ ಅಭ್ಯರ್ಥಿಯ ಗರಿಷ್ಠ ವಯಸ್ಸು 40 ವರ್ಷ ಮೀರಿರಬಾರದು. ಸರ್ಕಾರದ ನಿಯಮಾನುಸಾರ ವಯೋಮಿತಿಯಲ್ಲಿ ಕ್ಯಾಟ್ 2A, 2B, 3A, 3B ಅಭ್ಯರ್ಥಿಗಳಿಗೆ: 3 ವರ್ಷಗಳು, SC/ST/ಕ್ಯಾಟ್-1 ಅಭ್ಯರ್ಥಿಗಳಿಗೆ: 5 ವರ್ಷಗಳು, ವಿಕಲಚೇತನ (PH) ಅಭ್ಯರ್ಥಿಗಳಿಗೆ: 10 ವರ್ಷಗಳ ಸಡಲಿಲಿಕೆ ನೀಡಲಾಗಿದೆ.

ಅರ್ಜಿ ಸಲ್ಲಿಸುವುದು ಹೇಗೆ?

  • ಅಭ್ಯರ್ಥಿಗಳು ಆಫ್‌ಲೈನ್ (Offline) ಮೂಲಕವೇ ಅರ್ಜಿ ಸಲ್ಲಿಸಬೇಕು:ಚಿಕ್ಕಬಳ್ಳಾಪುರ ಜಿಲ್ಲೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಳ್ಳಬೇಕು.

  • ಅರ್ಜಿಯಲ್ಲಿ ಕೇಳಲಾಗಿರುವ ಎಲ್ಲಾ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ.

  • ನಿಮ್ಮ ಶೈಕ್ಷಣಿಕ ದಾಖಲಾತಿಗಳು, ವಯಸ್ಸಿನ ಪುರಾವೆ ಮತ್ತು ಅನುಭವದ ಪ್ರಮಾಣಪತ್ರಗಳ ನಕಲು ಪ್ರತಿಯನ್ನು ಅರ್ಜಿಯೊಂದಿಗೆ ಲಗತ್ತಿಸಿ.

  • ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ "ಜಿಲ್ಲಾ ಆಯುಷ್ ಅಧಿಕಾರಿಗಳ ಕಾರ್ಯಾಲಯ, ಚಿಕ್ಕಬಳ್ಳಾಪುರ" ಈ ವಿಳಾಸಕ್ಕೆ ಕೊನೆಯ ದಿನಾಂಕದ ಒಳಗಾಗಿ ತಲುಪಿಸಬೇಕು.

  • ಈ ಹುದ್ದೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ತಮಿಳುನಾಡಿಗೆ ಕಾವೇರಿ, ಕನ್ನಡಿಗರಿಗೆ ಮತ್ತೆ ಚೊಂಬು: ನಿತ್ಯ 9,000 ಕ್ಯೂಸೆಕ್ ನೀರು ಬಿಡಲು CWRC ಸೂಚನೆ!

ಪ್ರತಿಪಕ್ಷಗಳ ಪ್ರತಿಭಟನೆ, ಗದ್ದಲದ ನಡುವೆ ಯಾವುದೇ ಚರ್ಚೆಯಿಲ್ಲದೇ ವಿಧಾನ ಪರಿಷತ್ತಿನಲ್ಲಿ ಎರಡು ವಿಧೇಯಕಗಳು ಪಾಸ್

Biggboss Kannada ಅಗ್ನಿಪರೀಕ್ಷೆ: ಗೆಟ್ ಔಟ್, ಇದೆಲ್ಲಾ ಬೇಡ ಬ್ರೋ; ವಿನಯ್ ಗೌಡಗೆ ಸ್ಪರ್ಧಿ ತಿರುಗೇಟು, Video ವೈರಲ್!

SIR ಮೊದಲ ಕರಡು ಮತದಾರರ ಪಟ್ಟಿ ಪ್ರಕಟ: 1 ಕೋಟಿ, 7 ಲಕ್ಷ ಮತದಾರರ ಹೆಸರು ಡಿಲೀಟ್, ಬೆಂಗಳೂರಲ್ಲೇ ಅತಿ ಹೆಚ್ಚು!

ಕೊಲಂಬೊ ಟೆಸ್ಟ್‌ನಲ್ಲಿ ಭಾರತದ ಅಬ್ಬರ: 503/9ಕ್ಕೆ ಇನ್ನಿಂಗ್ಸ್ ಡಿಕ್ಲೇರ್, ಲಂಕಾ ಇನ್ನಿಂಗ್ಸ್ ಗೆ ಮಳೆ ಅಡ್ಡಿ