ಶಿಕ್ಷಕಿ AI Image
ವೃತ್ತಿ & ಉದ್ಯೋಗ ಅವಕಾಶಗಳು

B.Ed., TET ಪಾಸಾದವರಿಗೆ ಗುಡ್ ನ್ಯೂಸ್; ವಸತಿ ಶಾಲೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ KEA

ಶಿಕ್ಷಕ ವೃತ್ತಿಯ ಕನಸು ಹೊತ್ತು ಸರ್ಕಾರಿ ನೌಕರಿಯ ನಿರೀಕ್ಷೆಯಲ್ಲಿದ್ದೀರಾ? ಹಾಗಿದ್ದರೆ ನಿಮಗಾಗಿ ರಾಜ್ಯ ಸರ್ಕಾರ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದೆ. ಸಮಾಜ ಕಲ್ಯಾಣ ಇಲಾಖೆಯ ವಸತಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳ ಭರ್ತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಧಿಸೂಚನೆ ಹೊರಡಿಸಿದೆ.

ಬೆಂಗಳೂರು: ಶಿಕ್ಷಕ ವೃತ್ತಿಯ ಕನಸು ಹೊತ್ತು ಸರ್ಕಾರಿ ಹುದ್ದೆಯ ನಿರೀಕ್ಷೆಯಲ್ಲಿದ್ದೀರಾ? ಹಾಗಿದ್ದರೆ ನಿಮಗೊಂದು ಸುವರ್ಣಾವಕಾಶ ಇಲ್ಲಿದೆ. ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯ ವಸತಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳ ಭರ್ತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅಧಿಸೂಚನೆ ಹೊರಡಿಸಿದ್ದು, ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ಆ ಕುರಿತ ವರದಿ ಇಲ್ಲಿದೆ:

ಹುದ್ದೆಗಳ ವಿವರ:

  • ಒಟ್ಟು ಹುದ್ದೆಗಳು: 140

  • ಉಳಿಕೆ ಮೂಲ ವೃಂದ: 100

  • ಕಲ್ಯಾಣ ಕರ್ನಾಟಕ: 40 

ಅರ್ಹತೆ:

  • ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಆಯಾ ವಿಷಯದಲ್ಲಿ ಪದವಿ (Degree) ಮತ್ತು ಬಿ.ಎಡ್ (B.Ed) ಮುಗಿಸಿರಬೇಕು. ಜೊತೆಗೆ,  ಅಭ್ಯರ್ಥಿಗಳು ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ (TET ಅಥವಾ CTET) ಕಡ್ಡಾಯವಾಗಿ ತೇರ್ಗಡೆಯಾಗಿರಬೇಕು.

  • ವಯೋಮಿತಿ: ಅರ್ಜಿ ಸಲ್ಲಿಸಲು ಕನಿಷ್ಠ ವಯಸ್ಸು 18 ವರ್ಷ, ಗರಿಷ್ಠ ವಯೋಮಿತಿ 40 ವರ್ಷ (ಒಬಿಸಿ (2A, 2B, 3A, 3B) ಗೆ 3 ವರ್ಷ ಹಾಗೂ SC / ST / ಪ್ರವರ್ಗ-1ಕ್ಕೆ 5 ವರ್ಷ ವಯೋಮಿತಿ ಸಡಲಿಕೆ ಇದೆ.)

ವೇತನ ಶ್ರೇಣಿ:

41,300 ರೂಪಾಯಿಗಳಿಂದ 81,800 ರೂಪಾಯಿಗಳವರೆಗಿನ ಆಕರ್ಷಕ ವೇತನ ಶ್ರೇಣಿ ಇರಲಿದೆ.

ಪ್ರಮುಖ ದಿನಾಂಕಗಳು:

  • ಅಧಿಸೂಚನೆ ಪ್ರಕಟವಾದ ದಿನಾಂಕ: 20 ಆಗಸ್ಟ್ 2026

  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 18 ಸೆಪ್ಟೆಂಬರ್ 2026

  • ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನ: 19 ಸೆಪ್ಟೆಂಬರ್ 2026

  • ಪರೀಕ್ಷಾ ದಿನಾಂಕ: ಸದ್ಯದಲ್ಲೇ ಪ್ರಕಟಿಸಲಾಗುವುದು

ಅರ್ಜಿ ಸಲ್ಲಿಸುವ ಹಂತಗಳು:

ಅರ್ಹ ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್‌ಸೈಟ್ ಮೂಲಕವೇ ಅರ್ಜಿ ಸಲ್ಲಿಸಬೇಕು.

  • ವೆಬ್‌ಸೈಟ್‌ಗೆ ಭೇಟಿ ನೀಡಿ: ಮೊದಲಿಗೆ KEA ಅಧಿಕೃತ ವೆಬ್‌ಸೈಟ್‌ಗೆ ಹೋಗಿ.

  • ನೋಂದಣಿ: 'New Registration' ಕ್ಲಿಕ್ ಮಾಡಿ. ನಿಮ್ಮ ಹೆಸರು, ಮೊಬೈಲ್ ಸಂಖ್ಯೆ ಮತ್ತು ಇಮೇಲ್ ಐಡಿ ನೀಡಿ ಖಾತೆ ತೆರೆಯಿರಿ.

  • ಮಾಹಿತಿ ಭರ್ತಿ ಮಾಡಿ: ನಿಮ್ಮ ವೈಯಕ್ತಿಕ ವಿವರಗಳು, ಶೈಕ್ಷಣಿಕ ಅರ್ಹತೆ (ಪದವಿ, ಬಿ.ಎಡ್) ಮತ್ತು TET ಅಂಕಗಳನ್ನು ಸರಿಯಾಗಿ ದಾಖಲಿಸಿ.

  • ದಾಖಲೆಗಳ ಅಪ್ಲೋಡ್: ನಿಮ್ಮ ಇತ್ತೀಚಿನ ಭಾವಚಿತ್ರ, ಸಹಿ ಮತ್ತು ಎಡಗೈ ಹೆಬ್ಬೆರಳಿನ ಗುರುತನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ.

  • ಮೀಸಲಾತಿ ವಿವರ: ಜಾತಿ, ಆದಾಯ, ಗ್ರಾಮೀಣ ಅಥವಾ ಕನ್ನಡ ಮಾಧ್ಯಮ ಮೀಸಲಾತಿ ಇದ್ದರೆ ಆ ವಿವರಗಳನ್ನು ಆಯ್ಕೆ ಮಾಡಿ.

  • ಶುಲ್ಕ ಪಾವತಿ: ಆನ್‌ಲೈನ್ ಬ್ಯಾಂಕಿಂಗ್, ಕಾರ್ಡ್ ಅಥವಾ UPI ಮೂಲಕ ನಿಗದಿತ ಅರ್ಜಿ ಶುಲ್ಕವನ್ನು ಪಾವತಿಸಿ.

  • ಪ್ರಿಂಟ್ ಔಟ್: ಅರ್ಜಿ ಪೂರ್ಣಗೊಂಡ ನಂತರ, ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿಯ ನಕಲನ್ನು ಡೌನ್‌ಲೋಡ್ ಮಾಡಿ ಇಟ್ಟುಕೊಳ್ಳಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ಮನೆ ಮುಂದೆ ನಿಲ್ಲಿಸೋ ವಾಹನಗಳಿಗೆ ಪಾರ್ಕಿಂಗ್ ಶುಲ್ಕಕ್ಕೆ ರಾಮಲಿಂಗಾರೆಡ್ಡಿ ತೀವ್ರ ಆಕ್ಷೇಪ; CM ಡಿಕೆಶಿಗೆ ಪತ್ರ

'30 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ,ಇನ್ನು ಸಾಧ್ಯವಿಲ್ಲ': ನಿವೃತ್ತಿಯ ಸುಳಿವು ನೀಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ; ಹೊಸ ಪೀಳಿಗೆಗೆ ದಾರಿ ಮಾಡಿಕೊಡುವ ಇಂಗಿತ!