ಸಿಎಂ ಡಿಕೆ ಶಿವಕುಮಾರ್ ಸಾಂದರ್ಭಿಕ ಚಿತ್ರ 
ವೃತ್ತಿ & ಉದ್ಯೋಗ ಅವಕಾಶಗಳು

ರಾಜ್ಯದ ವಸತಿ ಶಾಲೆಗಳಲ್ಲಿ 3,409 ಹುದ್ದೆಗಳ ನೇಮಕಾತಿಗೆ ಸರ್ಕಾರದಿಂದ ಅನುಮೋದನೆ!

ನೇರ ನೇಮಕಾತಿ ಹುದ್ದೆಗಳು – 1,469, ಹಂಗಾಮಿ/ಅತಿಥಿ ಶಿಕ್ಷಕರು ಮತ್ತು ಸಿಬ್ಬಂದಿ – 1,940 ಒಟ್ಟು ಹುದ್ದೆಗಳು – 3,409 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

ಬೆಂಗಳೂರು : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಿವಿಧ ವಸತಿ ಶಾಲೆಗಳು, ಕಾಲೇಜುಗಳು ಹಾಗೂ ಆಡಳಿತ ವಿಭಾಗಗಳಲ್ಲಿ ಖಾಲಿ ಇರುವ ಒಟ್ಟು 3,409 ಹುದ್ದೆಗಳನ್ನು ನೇರ ನೇಮಕಾತಿ ಮತ್ತು ಹಂಗಾಮಿ/ಅತಿಥಿ ಆಧಾರದ ನೇಮಕಾತಿ ಮೂಲಕ ಭರ್ತಿ ಮಾಡಲು ರಾಜ್ಯ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ.

ಸರ್ಕಾರದ ಆದೇಶದ ಪ್ರಕಾರ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿರುವ ಮೌಲಾನಾ ಆಜಾದ್ ಮಾದರಿ ಶಾಲೆಗಳು, ಮೋರಾರ್ಜಿ ದೇಸಾಯಿ ವಸತಿ ಶಾಲೆಗಳು, ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆಗಳು ಹಾಗೂ ವಿವಿಧ ವಸತಿ ನಿಲಯಗಳಲ್ಲಿ ಅಗತ್ಯ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳಲಾಗುತ್ತದೆ.

ನೇರ ನೇಮಕಾತಿ ಹುದ್ದೆಗಳು – 1,469, ಹಂಗಾಮಿ/ಅತಿಥಿ ಶಿಕ್ಷಕರು ಮತ್ತು ಸಿಬ್ಬಂದಿ – 1,940 ಒಟ್ಟು ಹುದ್ದೆಗಳು – 3,409 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

ಯಾವ ಹುದ್ದೆಗಳು ಭರ್ತಿಯಾಗಲಿವೆ? ಪ್ರಾಂಶುಪಾಲರು, ಮುಖ್ಯ ಶಿಕ್ಷಕರು, ಪದವಿ ಪೂರ್ವ ಕಾಲೇಜು ಉಪನ್ಯಾಸಕರು, ಪ್ರೌಢಶಾಲಾ ಶಿಕ್ಷಕರು, ಪ್ರಾಥಮಿಕ ಶಾಲಾ ಶಿಕ್ಷಕರು, ದೈಹಿಕ ಶಿಕ್ಷಣ ಶಿಕ್ಷಕರು, ಕಲಾ ಶಿಕ್ಷಕರು, ವಿಜ್ಞಾನ ಶಿಕ್ಷಕರು, ಹಿಂದಿ ಶಿಕ್ಷಕರು, ಸಮಾಜ ವಿಜ್ಞಾನ ಶಿಕ್ಷಕರು, ಗಣಿತ ಶಿಕ್ಷಕರು, ಇತಿಹಾಸ, ಅರ್ಥಶಾಸ್ತ್ರ, ವಾಣಿಜ್ಯ ಹಾಗೂ ಇತರೆ ವಿಷಯಗಳ ಉಪನ್ಯಾಸಕರು, ಅಡುಗೆ ಸಿಬ್ಬಂದಿ ಸೇರಿದಂತೆ ವಿವಿಧ ಹುದ್ದೆಗಳು

ನೇಮಕಾತಿ ಹೇಗೆ ನಡೆಯಲಿದೆ? ಸರ್ಕಾರದ ಆದೇಶದಂತೆ ನೇರ ನೇಮಕಾತಿಗೆ ಸಂಬಂಧಿಸಿದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA)ಮೂಲಕ ಪರೀಕ್ಷೆ ಮೂಲಕ ಭರ್ತಿ ಮಾಡಲಾಗುತ್ತದೆ. ಹಂಗಾಮಿ/ಅತಿಥಿ ಶಿಕ್ಷಕರು ಹಾಗೂ ಸಿಬ್ಬಂದಿಯನ್ನು ಇಲಾಖೆಯ ಮಾರ್ಗಸೂಚಿಯಂತೆ ನೇಮಕ ಮಾಡಿಕೊಳ್ಳಲಾಗುತ್ತದೆ.

ಮೋರಾರ್ಜಿ ದೇಸಾಯಿ ವಸತಿ ಪದವಿ ಪೂರ್ವ ಕಾಲೇಜುಗಳಿಗೆ 800 ಹುದ್ದೆಗಳು, ಮೌಲಾನಾ ಆಜಾದ್ ಮಾದರಿ ಶಾಲೆಗಳಿಗೆ 2,050 ಹುದ್ದೆಗಳು, ಹಾಗೂ ಅಲ್ಪಸಂಖ್ಯಾತರ ಮಾದರಿ ವಸತಿ ಶಾಲೆಗಳಿಗೆ ಪ್ರತ್ಯೇಕ ಹುದ್ದೆಗಳನ್ನು ಮಂಜೂರು ಮಾಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಅಲ್ಲಿ ಪ್ರತಿ ಮತದಾರನಿಗೂ photo ID’ಯಿದೆ: ಭಾರತದ ಚುನಾವಣಾ ವ್ಯವಸ್ಥೆ ಕೊಂಡಾಡಿದ ಟ್ರಂಪ್, ಅಮೆರಿಕಾ ಮತದಾನ ವ್ಯವಸ್ಥೆ ಬದಲಾವಣೆಗೆ ಪಟ್ಟು, SAVE America Act ಜಾರಿಗೆ ಆಗ್ರಹ..!

ಜಿಲ್ಲಾವಾರು ಕಾಂಗ್ರೆಸ್ ಶಾಸಕರೊಂದಿಗೆ ನಿಯಮಿತ ಸಭೆಗೆ ಸಿಎಂ ಡಿಕೆ. ಶಿವಕುಮಾರ್‌ ನಿರ್ಧಾರ..!

ಕರ್ನಾಟಕ ಸೇರಿ ದೇಶಾದ್ಯಂತ Pakನ ISI ಬೆಂಬಲಿತ ಗ್ಯಾಂಗಸ್ಟರ್ ಶಹಜಾದ್ ಭಟ್ಟಿ ಜಾಲದ 200ಕ್ಕೂ ಹೆಚ್ಚು ಜನರ ಬಂಧನ: ಅಮಿತ್ ಶಾ

ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಬಿಗಿಪಟ್ಟು: ವಿಧಾನಸಭೆಯಲ್ಲಿ ಪ್ರತಿಭಟನೆ, ಗದ್ದಲ, ಕಲಾಪಕ್ಕೆ ಅಡ್ಡಿ!

'ಸ್ವಲ್ಪ ತಾಳ್ಮೆಯಿಂದ ಕಾಯಿರಿ' ಪಾಕಿಸ್ತಾನ, ಬಾಂಗ್ಲಾದೇಶ, ಅಪ್ಘಾನಿಸ್ತಾನ ಮತ್ತೆ ಭಾರತಕ್ಕೆ ಸೇರಿಕೊಳ್ಳುವ ದಿನ ಬರುತ್ತದೆ- ಬಾಬಾ ರಾಮದೇವ್!