ಅಂಗನವಾಡಿ ಕೇಂದ್ರ (ಸಂಗ್ರಹ ಚಿತ್ರ) Online Desk
ವೃತ್ತಿ & ಉದ್ಯೋಗ ಅವಕಾಶಗಳು

PUC ಪಾಸಾಗಿರುವ ಮಹಿಳೆಯರಿಗೆ ಗುಡ್ ನ್ಯೂಸ್: ಈ ಜಿಲ್ಲೆಯಲ್ಲಿ ಭರ್ಜರಿ ಉದ್ಯೋಗಾವಕಾಶ, ಈಗಲೇ ಅರ್ಜಿ ಸಲ್ಲಿಸಿ

ದಕ್ಷಿಣ ಕನ್ನಡ ಜಿಲ್ಲೆ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅರ್ಜಿ ಆಹ್ವಾನಿಸಿದೆ. ಆ ಕುರಿತ ವರದಿ ಇಲ್ಲಿದೆ.

ಮಂಗಳೂರು (ದಕ್ಷಿಣ ಕನ್ನಡ): ದಕ್ಷಿಣ ಕನ್ನಡ ಜಿಲ್ಲೆ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅರ್ಜಿ ಆಹ್ವಾನಿಸಿದೆ. ಆ ಕುರಿತ ವರದಿ ಇಲ್ಲಿದೆ.

ಹುದ್ದೆಯ ವಿವರ:

  • ಮಂಗಳೂರು ನಗರ ವ್ಯಾಪ್ತಿ: ಅಂಗನವಾಡಿ ಕಾರ್ಯಕರ್ತೆ: 07 ಹುದ್ದೆಗಳು, ಅಂಗನವಾಡಿ ಸಹಾಯಕಿ: 32 ಹುದ್ದೆಗಳು

  • ಮಂಗಳೂರು ಗ್ರಾಮಾಂತರ ವ್ಯಾಪ್ತಿ: ಅಂಗನವಾಡಿ ಕಾರ್ಯಕರ್ತೆ: 04 ಹುದ್ದೆಗಳು, ಅಂಗನವಾಡಿ ಸಹಾಯಕಿ: 39 ಹುದ್ದೆಗಳು

  • ತಾಲ್ಲೂಕುವಾರು ಹಂಚಿಕೆ:

  • ಮಂಗಳೂರು ತಾಲ್ಲೂಕು: 14 ಸಹಾಯಕಿಯರ ಹುದ್ದೆಗಳು

  • ಮೂಲ್ಕಿ ತಾಲ್ಲೂಕು: 03 ಸಹಾಯಕಿಯರ ಹುದ್ದೆಗಳು

  • ಮೂಡುಬಿದಿರೆ ತಾಲ್ಲೂಕು: 04 ಸಹಾಯಕಿಯರ ಹುದ್ದೆಗಳು

  • ಉಳ್ಳಾಲ ತಾಲ್ಲೂಕು: 04 ಕಾರ್ಯಕರ್ತೆಯರು, 18 ಸಹಾಯಕಿಯರ ಹುದ್ದೆಗಳು

ಅರ್ಹತೆ :

  • ಕೇವಲ ಮಹಿಳಾ ಅಭ್ಯರ್ಥಿಗಳಿಗೆ ಮಾತ್ರ ಅವಕಾಶ.

  • ವಯೋಮಿತಿ: ಕನಿಷ್ಠ 18 ವರ್ಷ ತುಂಬಿರಬೇಕು ಮತ್ತು ಗರಿಷ್ಠ 35 ವರ್ಷ ವಯೋಮಿತಿ ಮೀರಬಾರದು.

  • ವಾಸಸ್ಥಳ: ಅಭ್ಯರ್ಥಿಗಳು ಕಡ್ಡಾಯವಾಗಿ ಹುದ್ದೆ ಖಾಲಿ ಇರುವ ವಾರ್ಡ್ ಅಥವಾ ಗ್ರಾಮದ ನಿವಾಸಿಯಾಗಿರಬೇಕು.

ಇದರೊಂದಿಗೆ ಅಂಗನವಾಡಿ ಕಾರ್ಯಕರ್ತೆಗೆ ಕನಿಷ್ಠ ಪಿಯುಸಿ ಅಥವಾ ತತ್ಸಮಾನ ಅರ್ಹತೆ ಅಗತ್ಯ. ಸಹಾಯಕಿಗೆ ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ಪಾಸ್ ಆಗಿರಬೇಕು. ಜೊತೆಗೆ ಕಡ್ಡಾಯವಾಗಿ ಕನ್ನಡ ಓದಲು ಮತ್ತು ಬರೆಯಲು ಬರಬೇಕು.

ಅರ್ಜಿ ಸಲ್ಲಿಸುವ ವಿಧಾನ:

ಅರ್ಹ ಮಹಿಳಾ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಆಫ್‌ಲೈನ್ ಮೂಲಕವೇ ಅರ್ಜಿಗಳನ್ನು ಸಲ್ಲಿಸಬೇಕಾಗುತ್ತದೆ. ಅದರಂತೆ ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಸಂಬಂಧಪಟ್ಟಂತಹ ಶಿಶು ಅಭಿವೃದ್ಧಿ ಯೋಜನೆ ಕಚೇರಿಗೆ (CDPO) ತಲುಪಿಸಬೇಕು.

ಕೊನೆಯ ದಿನಾಂಕ: 10 ಆಗಸ್ಟ್ 2026. (ಕೊನೆಯ ದಿನಾಂಕದ ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.)

ಹೆಚ್ಚಿನ ವಿವರ ಹಾಗೂ ಅರ್ಜಿಗಾಗಿ ಅಭ್ಯರ್ಥಿಗಳು, ಮಂಗಳೂರು ನಗರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ: 0824-2959809, ಮಂಗಳೂರು ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ: 0824-2263199 ಸಂಪರ್ಕಿಸಬೇಕು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಗಲ್ಫ್ ಆಫ್ ಮೆಕ್ಸಿಕೋ, ಒಂಟಾರಿಯೊ ಲೇಕ್ ಬಳಿಕ Strait of Hormuz ಗೆ ನನ್ನ ಹೆಸರು ಮರುನಾಮಕರಣ ಮಾಡಿ- ಅಮೆರಿಕ ಅಧ್ಯಕ್ಷ Trump ವಿಚಿತ್ರ ಬೇಡಿಕೆ!

ರಕ್ಷಣಾ ಸಾಮರ್ಥ್ಯ ಇನ್ನಷ್ಟು ಬಲಿಷ್ಠ: ದೇಶೀಯ ನಿರ್ಮಿತ ಗ್ಲೈಡ್ ಬಾಂಬ್ ಖಗಂಟಕ್ -243 ಪರೀಕ್ಷೆ ಯಶಸ್ವಿ

ಭಾರೀ ಮಳೆ: ಉಕ್ಕಿ ಹರಿಯುತ್ತಿರುವ ಪ್ರಮುಖ ನದಿಗಳು, ಬಿಹಾರದಲ್ಲಿ ಹೈ ಅಲರ್ಟ್

AEE ನೇಮಕಾತಿಯಲ್ಲಿ ಅಕ್ರಮ: ಪ್ರಿಯಾಂಕ್ ಖರ್ಗೆಗೆ HDK ಸಾಲು ಸಾಲು ಪ್ರಶ್ನೆ; ಇದೇನಾ 'ದೇಶವೇ ಅಲ್ಲೋಲ ಕಲ್ಲೋಲ ಆಗೋ' ವಿಷಯ? Video

'aashiq banaya': 'ಅಕ್ಷರಶಃ ನಮ್ಮಿಬ್ಬರ ಕೆಮಿಸ್ಟ್ರಿ ಅಣ್ಣ-ತಂಗಿಯಂತಿತ್ತು': ನಟ ಇಮ್ರಾನ್ ಹಶ್ಮಿ ಕುರಿತು ಅಚ್ಚರಿ ಹೇಳಿಕೆ ಕೊಟ್ಟ ನಟಿ Tanushree Dutta