Onlie Desk
ವೃತ್ತಿ & ಉದ್ಯೋಗ ಅವಕಾಶಗಳು

ಇಂಜಿನಿಯರ್ ಪದವಿಧರರಿಗೆ ಗುಡ್ ನ್ಯೂಸ್: ರೈಲ್ವೆ ಇಲಾಖೆಯಲ್ಲಿ ಭರ್ಜರಿ 4,098 ಹುದ್ದೆಗಳಿಗೆ ನೇಮಕಾತಿ, ಸಂಬಳ 36 ಸಾವಿರ+

ಕೇಂದ್ರ ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವ ಯುವಕರಿಗೆ ಭಾರತೀಯ ರೈಲ್ವೆ ಇಲಾಖೆ ಭರ್ಜರಿ ನೇಮಕಾತಿ ಕಿರು ಅಧಿಸೂಚನೆ ಹೊರಡಿಸಿದೆ. ಇದರೊಂದಿಗೆ, ರೈಲ್ವೆ ನೇಮಕಾತಿ ಮಂಡಳಿಯು ಜೂನಿಯರ್ ಇಂಜಿನಿಯರ್ ಸೇರಿದಂತೆ ವಿವಿಧ ವಿಭಾಗಗಳ ಒಟ್ಟು 4,098 ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಲಿದೆ.

ಕೇಂದ್ರ ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವ ಯುವಕರಿಗೆ ಭಾರತೀಯ ರೈಲ್ವೆ ಇಲಾಖೆ ಭರ್ಜರಿ ನೇಮಕಾತಿ ಕಿರು ಅಧಿಸೂಚನೆ ಹೊರಡಿಸಿದೆ. ಇದರೊಂದಿಗೆ, ರೈಲ್ವೆ ನೇಮಕಾತಿ ಮಂಡಳಿಯು ಜೂನಿಯರ್ ಇಂಜಿನಿಯರ್ ಸೇರಿದಂತೆ ವಿವಿಧ ವಿಭಾಗಗಳ ಒಟ್ಟು 4,098 ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಲಿದೆ. ಆ ಕುರಿತ ವರದಿ ಇಲ್ಲಿದೆ:

ನೇಮಕಾತಿ ವಿವರ:

  • ಜೂನಿಯರ್ ಇಂಜಿನಿಯರ್ (JE): 3,749 ಹುದ್ದೆಗಳು (ಸಿವಿಲ್, ಎಲೆಕ್ಟ್ರಿಕಲ್, ಮೆಕ್ಯಾನಿಕಲ್, ವರ್ಕ್ಸ್‌ಶಾಪ್ ಇತ್ಯಾದಿ)

  • ಡಿಪೋ ಮೆಟೀರಿಯಲ್ ಸೂಪರಿಂಟೆಂಡೆಂಟ್ (DMS): 314 ಹುದ್ದೆಗಳು

  • ಕೆಮಿಕಲ್ & ಮೆಟಲರ್ಜಿಕಲ್ ಅಸಿಸ್ಟೆಂಟ್ (CMA): 35 ಹುದ್ದೆಗಳು

ಅರ್ಹತೆ:

  • ವಿದ್ಯಾರ್ಹತೆ: ಮಾನ್ಯತೆ ಪಡೆದ ಸಂಸ್ಥೆಯಿಂದ ಸಂಬಂಧಪಟ್ಟ ಇಂಜಿನಿಯರಿಂಗ್ ವಿಭಾಗದಲ್ಲಿ ಡಿಪ್ಲೊಮಾ ಅಥವಾ ಬಿ.ಇ/ಬಿ.ಟೆಕ್ ಪದವಿ ಪಡೆದಿರಬೇಕು.

  • ವಯೋಮಿತಿ: 01 ಜನವರಿ 2027 ಕ್ಕೆ ಅನ್ವಯಿಸುವಂತೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 33 ವರ್ಷ (ಸರ್ಕಾರಿ ನಿಯಮಾವಳಿಗಳ ಪ್ರಕಾರ ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ).

ಸಂಬಳ:

ಆಯ್ಕೆಯಾಗುವ ಅಭ್ಯರ್ಥಿಗಳಿಗೆ 7ನೇ ವೇತನ ಆಯೋಗದ ಅನುಸಾರ Pay Level 6 ರ ಅಡಿಯಲ್ಲಿ 35,400 ಪ್ರತಿ ತಿಂಗಳು ವೇತನ ಸಿಗಲಿದೆ. ಇದರೊಂದಿಗೆ, HRA, DA ಮತ್ತು ರೈಲ್ವೆ ಇಲಾಖೆಯ ಇತರೆ ಭತ್ಯೆಗಳೂ ಸಿಗಲಿವೆ.

ಪ್ರಮುಖ ದಿನಾಂಕ:

  • ವಿವರವಾದ ಅಧಿಸೂಚನೆ ಪ್ರಕಟಣೆ: 13 ಆಗಸ್ಟ್ 2026

  • ಆನ್‌ಲೈನ್ ಅರ್ಜಿ ಸಲ್ಲಿಕೆ ಆರಂಭ: 14 ಆಗಸ್ಟ್ 2026

  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 13 ಸೆಪ್ಟೆಂಬರ್ 2026

ಆಯ್ಕೆ ಪ್ರಕ್ರಿಯೆ:

  • ಅಭ್ಯರ್ಥಿಗಳನ್ನು ಒಟ್ಟು 4 ಹಂತಗಳ ಮೂಲಕ ಆಯ್ಕೆ ಮಾಡಲಾಗುತ್ತದೆ,

  • ಕಂಪ್ಯೂಟರ್ ಆಧಾರಿತ ಪರೀಕ್ಷೆ - 1 (CBT 1)

  • ಕಂಪ್ಯೂಟರ್ ಆಧಾರಿತ ಪರೀಕ್ಷೆ - 2 (CBT 2 - ತಾಂತ್ರಿಕ ವಿಷಯಗಳು)

  • ದಾಖಲಾತಿ ಪರಿಶೀಲನೆ (Document Verification)

  • ವೈದ್ಯಕೀಯ ಪರೀಕ್ಷೆ (Medical Examination)

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

"ನಾವು ಕೈ ಜೋಡಿಸೋಣ": ಗಲ್ವಾನ್ ಸಂಘರ್ಷದ ಬಳಿಕ ಮೊದಲ ಮಾತುಕತೆ ವೇಳೆ Narendra Modi ಗೆ Xi Jinping ಸಂದೇಶ; ಭಾರತದೆದುರು ಮಂಡಿಯೂರಿದ ಚೀನಾ?

ಪ್ರಶ್ನೆ ಪತ್ರಿಕೆ ಸೋರಿಕೆ ಸಹಿಸಲ್ಲ: KPSC ವಿರುದ್ಧ ಹೋರಾಟಕ್ಕೆ CJP ಎಂಟ್ರಿ: ನೊಂದ ಅಭ್ಯರ್ಥಿಗಳಿಗೆ ನ್ಯಾಯದ ಭರವಸೆ

ಮೈಸೂರಿನ 'ಪೇಟೆ ರೌಡಿ' ಪೊಲೀಸ್ ಠಾಣೆಗೆ ನುಗ್ಗಿದ್ರೆ ನಾನು ಸೀದಾ ಪರಪ್ಪನ ಅಗ್ರಹಾರಕ್ಕೆ ನುಗ್ಗಿಸುತ್ತೇನೆ: ಪ್ರತಾಪ್ ಸಿಂಹಗೆ ಪ್ರಿಯಾಂಕ್ ಖರ್ಗೆ ಖಡಕ್ ವಾರ್ನ್

ಚೀನಾ ಇದ್ದರೂ ಬ್ರಿಕ್ಸ್‌ ಸದಸ್ಯತ್ವಕ್ಕಾಗಿ 3 ವರ್ಷಗಳ ಹಿಂದೆಯೇ ಅರ್ಜಿ ಸಲ್ಲಿಸಿದ್ರೂ ಅವಕಾಶ ಸಿಕ್ಕಿಲ್ಲ: ಪಾಕ್ ಗೋಳಾಟ!

ಬಳ್ಳಾರಿ ನಂತರ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಮತ್ತೊಂದು ಪಾದಯಾತ್ರೆ; ಸೆಪ್ಟೆಂಬರ್ 15 ರಿಂದ ರಾಜ್ಯಾದ್ಯಂತ ಹೋರಾಟ