ವಿಮಾನ ನಿಲ್ದಾಣಗಳಲ್ಲಿ ಭರ್ಜರಿ ಉದ್ಯೋಗಾವಕಾಶ Online Desk
ವೃತ್ತಿ & ಉದ್ಯೋಗ ಅವಕಾಶಗಳು

ವಿಮಾನ ನಿಲ್ದಾಣಗಳಲ್ಲಿ ಭರ್ಜರಿ ಉದ್ಯೋಗಾವಕಾಶ: 389 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಸರ್ಕಾರ, ಸಂಬಳ 1 ಲಕ್ಷ ರೂ

AAI Recruitment 2026: ಕೇಂದ್ರ ಸರ್ಕಾರಿ ಸ್ವಾಮ್ಯದ ಪ್ರಾಧಿಕಾರದಲ್ಲಿ ಉದ್ಯೋಗ ಬಯಸುವವರಿಗೆ ಗುಡ್ ನ್ಯೂಸ್; ಯಾಕಂದ್ರೆ, ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರವು 389 ಹುದ್ದೆಗಳ ಭರ್ತಿಗಾಗಿ ಅಧಿಕೃತ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಆ ಕುರಿತ ವರದಿ ಇಲ್ಲಿದೆ:

ಬೆಂಗಳೂರು: ಕೇಂದ್ರ ಸರ್ಕಾರಿ ಸ್ವಾಮ್ಯದ ಕಂಪನಿಯಲ್ಲಿ ಉದ್ಯೋಗ ಬಯಸುವವರಿಗೆ ಗುಡ್ ನ್ಯೂಸ್; ಯಾಕಂದ್ರೆ, ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರವು 389 ಮ್ಯಾನೇಜರ್ ಮತ್ತು ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗಳ ಭರ್ತಿಗಾಗಿ ಅಧಿಕೃತ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಆ ಕುರಿತ ವರದಿ ಇಲ್ಲಿದೆ:

ಹುದ್ದೆಗಳ ವಿವರ:

  • ನೇಮಕಾತಿ ಸಂಸ್ಥೆ: ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ

  • ಒಟ್ಟು ಹುದ್ದೆಗಳು: 389

  • ಹುದ್ದೆಗಳ ಪ್ರಕಾರ:

    • ಮ್ಯಾನೇಜರ್: 260 ಹುದ್ದೆಗಳು

    • ಜೂನಿಯರ್ ಎಕ್ಸಿಕ್ಯೂಟಿವ್: 129 ಹುದ್ದೆಗಳು

  • ಉದ್ಯೋಗ ಸ್ಥಳ: ಬೆಂಗಳೂರು ಸೇರಿದಂತೆ ದೇಶದ ವಿವಿಧ ವಿಮಾನ ನಿಲ್ದಾಣಗಳು.

ಅರ್ಹತೆ:

  • ಮ್ಯಾನೇಜರ್ ಹುದ್ದೆಗಳಿಗೆ:

    • ಸಂಬಂಧಿತ ವಿಭಾಗದಲ್ಲಿ ಪದವಿ/ಸ್ನಾತಕೋತ್ತರ ಪದವಿ (B.E/B.Tech, MBA, CA/ICWA, LL.B, ಮಾಸ್ ಕಮ್ಯುನಿಕೇಷನ್ ಇತ್ಯಾದಿ).

    • ಅನುಭವ: ಸಂಬಂಧಪಟ್ಟ ಕ್ಷೇತ್ರದಲ್ಲಿ ಕನಿಷ್ಠ 3 ವರ್ಷಗಳ ಅನುಭವ ಕಡ್ಡಾಯ.

  • ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ:

    • ಸಂಬಂಧಿತ ವಿಭಾಗದಲ್ಲಿ ಪದವಿ/ಸ್ನಾತಕೋತ್ತರ ಪದವಿ.

    • ಅನುಭವ: ಯಾವುದೇ ಅನುಭವದ ಅಗತ್ಯವಿಲ್ಲ.

  • ವಯೋಮಿತಿ ಸಡಿಲಿಕೆ:

    ಗರಿಷ್ಠ ವಯೋಮಿತಿ: 07.09.2026 ಕ್ಕೆ 32 ವರ್ಷಗಳು (ಹುದ್ದೆಗಳಿಗೆ ಅನುಗುಣವಾಗಿ ವಯೋಮಿತಿ ಬದಲಾಗಲಿದೆ ಜೊತೆಗೆ SC/ST ಅಭ್ಯರ್ಥಿಗಳಿಗೆ: 5 ವರ್ಷ, OBC (NCL) ಅಭ್ಯರ್ಥಿಗಳಿಗೆ: 3 ವರ್ಷ ಹಾಗೂ ವಿಕಲಚೇತನ ಅಭ್ಯರ್ಥಿಗಳಿಗೆ: 10 ವರ್ಷಗಳ ಸಡಿಲಿಕೆ ಇದೆ).

ಅರ್ಜಿ ಶುಲ್ಕ:

  • ಸಾಮಾನ್ಯ/OBC/EWS ಅಭ್ಯರ್ಥಿಗಳಿಗೆ: ₹1,000/-

  • SC / ST / PwBD / ಮಹಿಳಾ ಅಭ್ಯರ್ಥಿಗಳಿಗೆ: ವಿನಾಯಿತಿ

ಆಯ್ಕೆ ಪ್ರಕ್ರಿಯೆ:

ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT): ವಸ್ತುನಿಷ್ಠ ಮಾದರಿಯ (Objective Type) ಪರೀಕ್ಷೆ. ಯಾವುದೇ ಋಣಾತ್ಮಕ ಮೌಲ್ಯಮಾಪನ (Negative Marking) ಇರುವುದಿಲ್ಲ. ತದನಂತರ ದಾಖಲೆಗಳ ಪರಿಶೀಲನೆ ನಡೆಯಲಿದೆ. ಇದರೊಂದಿಗೆ ಮ್ಯಾನೇಜರ್ ಹುದ್ದೆಗಳಿಗೆ ನೇರ ಸಂದರ್ಶನವಿರುತ್ತದೆ.

ಸಂಬಳ:

  • ಮ್ಯಾನೇಜರ್: ₹60,000 ರಿಂದ ₹1,80,000 (ವಾರ್ಷಿಕ CTC ಅಂದಾಜು ₹21 ಲಕ್ಷ)

  • ಜೂನಿಯರ್ ಎಕ್ಸಿಕ್ಯೂಟಿವ್: ₹40,000 ರಿಂದ ₹1,40,000 (ವಾರ್ಷಿಕ CTC ಅಂದಾಜು ₹14 ಲಕ್ಷ)

ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಕೆ ಪ್ರಾರಂಭ: 08.08.2026

  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 07.09.2026

  • ಪರೀಕ್ಷೆಯ ದಿನಾಂಕ (CBT): AAI ವೆಬ್‌ಸೈಟ್‌ನಲ್ಲಿ ತದನಂತರ ಪ್ರಕಟಿಸಲಾಗುವುದು.

ಅರ್ಜಿ ಸಲ್ಲಿಸುವುದು ಹೇಗೆ?

ಅರ್ಹ ಅಭ್ಯರ್ಥಿಗಳು AAI ನ ಅಧಿಕೃತ ವೆಬ್‌ಸೈಟ್ https://www.aai.aero/ ನಲ್ಲಿ 'CAREERS' ವಿಭಾಗಕ್ಕೆ ತೆರಳಿ ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

"ನಾವು ಕೈ ಜೋಡಿಸೋಣ": ಗಲ್ವಾನ್ ಸಂಘರ್ಷದ ಬಳಿಕ ಮೊದಲ ಮಾತುಕತೆ ವೇಳೆ Narendra Modi ಗೆ Xi Jinping ಸಂದೇಶ; ಭಾರತದೆದುರು ಮಂಡಿಯೂರಿದ ಚೀನಾ?

ಪ್ರಶ್ನೆ ಪತ್ರಿಕೆ ಸೋರಿಕೆ ಸಹಿಸಲ್ಲ: KPSC ವಿರುದ್ಧ ಹೋರಾಟಕ್ಕೆ CJP ಎಂಟ್ರಿ: ನೊಂದ ಅಭ್ಯರ್ಥಿಗಳಿಗೆ ನ್ಯಾಯದ ಭರವಸೆ

ಮೈಸೂರಿನ 'ಪೇಟೆ ರೌಡಿ' ಪೊಲೀಸ್ ಠಾಣೆಗೆ ನುಗ್ಗಿದ್ರೆ ನಾನು ಸೀದಾ ಪರಪ್ಪನ ಅಗ್ರಹಾರಕ್ಕೆ ನುಗ್ಗಿಸುತ್ತೇನೆ: ಪ್ರತಾಪ್ ಸಿಂಹಗೆ ಪ್ರಿಯಾಂಕ್ ಖರ್ಗೆ ಖಡಕ್ ವಾರ್ನ್

ಚೀನಾ ಇದ್ದರೂ ಬ್ರಿಕ್ಸ್‌ ಸದಸ್ಯತ್ವಕ್ಕಾಗಿ 3 ವರ್ಷಗಳ ಹಿಂದೆಯೇ ಅರ್ಜಿ ಸಲ್ಲಿಸಿದ್ರೂ ಅವಕಾಶ ಸಿಕ್ಕಿಲ್ಲ: ಪಾಕ್ ಗೋಳಾಟ!

ಬಳ್ಳಾರಿ ನಂತರ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಮತ್ತೊಂದು ಪಾದಯಾತ್ರೆ; ಸೆಪ್ಟೆಂಬರ್ 15 ರಿಂದ ರಾಜ್ಯಾದ್ಯಂತ ಹೋರಾಟ