ಕೆನರಾ ಬ್ಯಾಂಕ್‌ನಲ್ಲಿ ಪರೀಕ್ಷೆ ಇಲ್ಲದೆ ಉದ್ಯೋಗ, 3,500 ಅಪ್ರೆಂಟಿಸ್ ನೇಮಕಾತಿ AI Image
ವೃತ್ತಿ & ಉದ್ಯೋಗ ಅವಕಾಶಗಳು

ಪದವೀಧರರಿಗೆ ಬಂಪರ್ ಚಾನ್ಸ್: ಕೆನರಾ ಬ್ಯಾಂಕ್‌ನಲ್ಲಿ ಪರೀಕ್ಷೆ ಇಲ್ಲದೆ ಉದ್ಯೋಗ, 3,500 ಅಪ್ರೆಂಟಿಸ್ ನೇಮಕಾತಿ

ಕೆನರಾ ಬ್ಯಾಂಕ್ ದೇಶಾದ್ಯಂತ ಖಾಲಿ ಇರುವ 3,500 ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಇದರಲ್ಲಿ ಕರ್ನಾಟಕಕ್ಕೆ 581 ಹುದ್ದೆಗಳನ್ನು ಮೀಸಲಿಡಲಾಗಿದ್ದು, ಪದವೀಧರರಿಗೆ ಇದೊಂದು ಸುವರ್ಣ ಅವಕಾಶವಾಗಿದೆ. ಆ ಕುರಿತ ವರದಿ ಇಲ್ಲಿದೆ:

Canara Bank Apprentice Opportunity: ಪ್ರತಿಷ್ಠಿತ ಸಾರ್ವಜನಿಕ ವಲಯದ ಬ್ಯಾಂಕ್ ಆದ ಕೆನರಾ ಬ್ಯಾಂಕ್ 2026-27ನೇ ಹಣಕಾಸು ವರ್ಷಕ್ಕೆ ದೇಶಾದ್ಯಂತ ಖಾಲಿ ಇರುವ 3,500 ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಇದರಲ್ಲಿ ಕರ್ನಾಟಕಕ್ಕೆ 581 ಹುದ್ದೆಗಳನ್ನು ಮೀಸಲಿಡಲಾಗಿದ್ದು, ಪದವೀಧರರಿಗೆ ಇದೊಂದು ಸುವರ್ಣ ಅವಕಾಶವಾಗಿದೆ. ಆ ಕುರಿತ ವರದಿ ಇಲ್ಲಿದೆ:

ಹುದ್ದೆಗಳ ವಿವರ:

  • ಒಟ್ಟು ಹುದ್ದೆಗಳು 3,500 ಹುದ್ದೆಗಳು

    • ಕರ್ನಾಟಕದಲ್ಲೇ 581 ಹುದ್ದೆಗಳು

  • ತರಬೇತಿ ಅವಧಿ: 1 ವರ್ಷ (12 ತಿಂಗಳು)

ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಕೆ ಆರಂಭ: ಅಕ್ಟೋಬರ್ 1, 2026

  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಅಕ್ಟೋಬರ್ 17, 2026

ಅರ್ಹತೆ:

  • ಶೈಕ್ಷಣಿಕ ಅರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ (Graduation Degree) ಹೊಂದಿರಬೇಕು. ಅಭ್ಯರ್ಥಿಗಳು ತಮ್ಮ ಪದವಿಯನ್ನು ಜನವರಿ 1, 2023 ಮತ್ತು ಸೆಪ್ಟೆಂಬರ್ 1, 2026ರ ನಡುವೆ ಪೂರ್ಣಗೊಳಿಸಿರಬೇಕು.

  • ವಯೋಮಿತಿ: ಕನಿಷ್ಠ 20 ವರ್ಷಗಳು ಮತ್ತು ಗರಿಷ್ಠ 28 ವರ್ಷಗಳು. (SC/ST ಅಭ್ಯರ್ಥಿಗಳಿಗೆ 5 ವರ್ಷ, OBC ಅಭ್ಯರ್ಥಿಗಳಿಗೆ 3 ವರ್ಷ ಹಾಗೂ PwBD ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ಇರುತ್ತದೆ).

  • ಭಾಷಾ ಜ್ಞಾನ: ಅಭ್ಯರ್ಥಿಗಳು ತಾವು ಅರ್ಜಿ ಸಲ್ಲಿಸುವ ರಾಜ್ಯದ ಸ್ಥಳೀಯ ಭಾಷೆಯನ್ನು (ಉದಾಹರಣೆಗೆ ಕರ್ನಾಟಕಕ್ಕೆ ಕನ್ನಡ) ಬರೆಯಲು, ಓದಲು ಮತ್ತು ಮಾತನಾಡಲು ತಿಳಿದಿರಬೇಕು. ಡಾಕ್ಯುಮೆಂಟ್ ವೆರಿಫಿಕೇಶನ್ ಸಮಯದಲ್ಲಿ ಸ್ಥಳೀಯ ಭಾಷಾ ಪರೀಕ್ಷೆ ನಡೆಸಲಾಗುತ್ತದೆ.

  • ಅರ್ಜಿ ಶುಲ್ಕ:

    • SC / ST / PwBD ಅಭ್ಯರ್ಥಿಗಳಿಗೆ: ಯಾವುದೇ ಶುಲ್ಕ ಇರುವುದಿಲ್ಲ (ಉಚಿತ).

    • ಇತರ ಎಲ್ಲಾ ಅಭ್ಯರ್ಥಿಗಳಿಗೆ (General, OBC, EWS): ₹500.

ಮಾಸಿಕ ಸ್ಟೈಫಂಡ್:

ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ₹16,650 ಸ್ಟೈಫಂಡ್ ದೊರೆಯಲಿದೆ. (ಇದರಲ್ಲಿ ಕೆನರಾ ಬ್ಯಾಂಕ್ ಪಾಲು ₹10,500 ಮತ್ತು ಕೇಂದ್ರ ಸರ್ಕಾರದ DBT ಮೂಲಕ ₹6,150 ಸಿಗಲಿದೆ). ಬಹುಮುಖ್ಯವಾಗಿ, ಅಪ್ರೆಂಟಿಸ್‌ಗಳನ್ನು ಕಾಯಂ ನೌಕರರಂತೆ ಪರಿಗಣಿಸಲಾಗುವುದಿಲ್ಲ ಮತ್ತು ನೌಕರರ ಯಾವುದೇ ಸವಲತ್ತುಗಳು ಅನ್ವಯಿಸುವುದಿಲ್ಲ. ತರಬೇತಿಯ ನಂತರ ಕಾಯಂ ಉದ್ಯೋಗ ನೀಡುವ ಯಾವುದೇ ಬದ್ಧತೆ ಬ್ಯಾಂಕ್‌‌ಗೆ ಇರುವುದಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ?

  • ಅಭ್ಯರ್ಥಿಗಳು ಮೊದಲು ಸರ್ಕಾರದ ಅಧಿಕೃತ NATS Portal ನಲ್ಲಿ ನೊಂದಣಿ ಮಾಡಿಕೊಂಡು Enrollment ID ಪಡೆದುಕೊಳ್ಳಬೇಕು. (ಅಲ್ಲಿ ಪ್ರೊಫೈಲ್ 100% ಪೂರ್ಣಗೊಂಡಿರಬೇಕು).

  • ನಂತರ ಕೆನರಾ ಬ್ಯಾಂಕಿನ ಅಧಿಕೃತ ವೆಬ್‌ಸೈಟ್‌ Canara Bank Careers ಪುಟಕ್ಕೆ ಭೇಟಿ ನೀಡಿ ಅಪ್ರೆಂಟಿಸ್‌ಶಿಪ್ ಲಿಂಕ್ ಕ್ಲಿಕ್ ಮಾಡಬೇಕು.

  • ಆನ್‌ಲೈನ್ ಅರ್ಜಿ ಫಾರಂನಲ್ಲಿ ನಿಮ್ಮ ವೈಯಕ್ತಿಕ ವಿವರಗಳು, ಶೈಕ್ಷಣಿಕ ದಾಖಲೆಗಳು ಮತ್ತು NATS ಐಡಿಯನ್ನು ಭರ್ತಿ ಮಾಡಿ ಸಬ್ಮಿಟ್ ಮಾಡಬೇಕು.

ಅರ್ಜಿ ಸಲ್ಲಿಕೆ ಲಿಂಕ್

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Asian Games 2026: ಫೈನಲ್ ನಲ್ಲಿ ಪಾಕಿಸ್ತಾನ ವಿರುದ್ಧ ಭಾರತಕ್ಕೆ ರೋಚಕ ಜಯ, ಮತ್ತೊಂದು ಚಿನ್ನದ ಪದಕ

Asian Games 2026: ಇತಿಹಾಸ ಬರೆದ ಮೈಸೂರಿನ ಪ್ರಣವಿ ಅರಸ್; ಚಿನ್ನ ಗೆದ್ದ ಮೊದಲ ಭಾರತೀಯ ಮಹಿಳಾ ಗಾಲ್ಫರ್

ನೈಟ್ ಶಿಫ್ಟ್ ಮುಗಿಸಿ ಮನೆಗೆ ಮರಳುವಷ್ಟರಲ್ಲಿ ಎದುರಾಯ್ತು ಸಾವು: ತಿರುಪತಿಯ ಫಾರ್ಮಾ ಘಟಕದಲ್ಲಿ ಸಿಡಿದ ಬಾಯ್ಲರ್, ಐವರು ಕಾರ್ಮಿಕರು ಸಾವು!

CNG ರೀಫಿಲ್ ವೇಳೆ ಭೀಕರ ಸ್ಫೋಟ; NH-48ರಲ್ಲಿ ಭಯಾನಕ ಘಟನೆ, ಬದುಕಿದ್ದೇ ಅಚ್ಚರಿ! Video

ಏಷ್ಯನ್ ಗೇಮ್ಸ್ 2026 ಫೈನಲ್: ವೈಭವ್ ಸೂರ್ಯವಂಶಿ ಅಣಕಿಸಿದ ಪಾಕ್ ಸ್ಟಾರ್ ಆಟಗಾರ! ಏನು ಮಾಡಿದ್ರು ಗೊತ್ತಾ? Video