ಗದಗ: ಸರ್ಕಾರಿ ನೌಕರಿ ಪಡೆಯುವುದು ನಿಮ್ಮ ಬಹುದಿನಗಳ ಕನಸೇ? ಕೇವಲ ಹತ್ತನೇ ತರಗತಿ ಪಾಸಾಗಿದ್ದರೂ ಸಾಕು, ತಿಂಗಳಿಗೆ ಕೈತುಂಬಾ ಸಂಬಳ ತರುವ ಹುದ್ದೆಯೊಂದು ನಿಮ್ಮ ಕೈಗೆಟುಕುವ ದೂರದಲ್ಲಿದೆ. ಅದರಂತೆ, ಗದಗ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ 22 ಹುದ್ದೆಗಳಿಗೆ ಅರ್ಜಿ ಕರೆಯಲಾಗಿದ್ದು, ಸ್ಪರ್ಧಾತ್ಮಕ ಪರೀಕ್ಷೆಯಿಲ್ಲದೆ ಮೆರಿಟ್ ಆಧಾರದಲ್ಲೇ ಆಯ್ಕೆಯಾಗುವ ಅವಕಾಶ ಉದ್ಯೋಗಾಕಾಂಕ್ಷಿಗಳನ್ನು ಆಕರ್ಷಿಸುತ್ತಿದೆ. ಆ ಕುರಿತ ವರದಿ ಇಲ್ಲಿದೆ:
ಹುದ್ದೆಯ ವಿವರ:
ಹುದ್ದೆಯ ಹೆಸರು: ಜವಾನ
ಒಟ್ಟು ಹುದ್ದೆಗಳು: 22
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಆರಂಭದ ದಿನಾಂಕ: 28 ಸೆಪ್ಟೆಂಬರ್ 2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31 ಅಕ್ಟೋಬರ್ 2026 (ರಾತ್ರಿ 11:59 ರವರೆಗೆ)
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 03 ನವೆಂಬರ್ 2026
ಅರ್ಹತೆಗಳು:
ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಗಳು SSLC (10ನೇ ತರಗತಿ) ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಕಡ್ಡಾಯವಾಗಿ ಉತ್ತೀರ್ಣರಾಗಿರಬೇಕು.
ಭಾಷಾ ಜ್ಞಾನ: ಕನ್ನಡ ಭಾಷೆಯನ್ನು ಓದಲು ಮತ್ತು ಬರೆಯಲು ಕಡ್ಡಾಯವಾಗಿ ತಿಳಿದರಬೇಕು.
ವಯೋಮಿತಿ (31 ಅಕ್ಟೋಬರ್ 2026 ಕ್ಕೆ ಅನ್ವಯಿಸುವಂತೆ):
ಕನಿಷ್ಠ ವಯಸ್ಸು: 18 ವರ್ಷ.
ಗರಿಷ್ಠ ವಯಸ್ಸು: ಸಾಮಾನ್ಯ ವರ್ಗಕ್ಕೆ (GM) 35 ವರ್ಷ, ಹಿಂದುಳಿದ ವರ್ಗಗಳಿಗೆ (2A/2B/3A/3B) 38 ವರ್ಷ ಹಾಗೂ SC/ST/Cat-I ಅಭ್ಯರ್ಥಿಗಳಿಗೆ 40 ವರ್ಷ.
ಸಂಬಳ:
₹27,000 ರಿಂದ ₹46,675 (ನಿಯಮಾನುಸಾರ ಇತರೆ ಭತ್ಯೆಗಳು ಇರುತ್ತವೆ).
ಅರ್ಜಿ ಸಲ್ಲಿಸುವ ವಿಧಾನ
ಅರ್ಹ ಅಭ್ಯರ್ಥಿಗಳು ಗದಗ ಇ-ಕೋರ್ಟ್ಸ್‌ನ ಅಧಿಕೃತ ವೆಬ್‌ಸೈಟ್ ಮೂಲಕವೇ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು.
ಮೊದಲು Gadag District Court Official Websiteನ ನೇಮಕಾತಿ ವಿಭಾಗಕ್ಕೆ ಭೇಟಿ ನೀಡಿ.
ಅಲ್ಲಿ ನೀಡಿರುವ "Recruitment for the post of PEON - Click here to Apply" ಲಿಂಕ್ ಮೇಲೆ ಕ್ಲಿಕ್ ಮಾಡಿ.
ಆನ್‌ಲೈನ್ ಅರ್ಜಿ ನಮೂನೆಯಲ್ಲಿ ನಿಮ್ಮ ವೈಯಕ್ತಿಕ ವಿವರಗಳು, ಶೈಕ್ಷಣಿಕ ಅಂಕಗಳು ಮತ್ತು ಮೀಸಲಾತಿ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ.
ನಿಮ್ಮ ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ಫೋಟೋ ಹಾಗೂ ಸಹಿಯನ್ನು ಸ್ಕ್ಯಾನ್ ಮಾಡಿ ಅಪ್‌ಲೋಡ್ ಮಾಡಿ.
ಅರ್ಜಿ ಸಲ್ಲಿಕೆ ಪೂರ್ಣಗೊಂಡ ನಂತರ ಶುಲ್ಕ ಅನ್ವಯಿಸುವ ಅಭ್ಯರ್ಥಿಗಳು ಆನ್‌ಲೈನ್ ಬ್ಯಾಂಕಿಂಗ್/ಯುಪಿಐ ಮೂಲಕ ಶುಲ್ಕ ಪಾವತಿಸಿ, ಅರ್ಜಿಯ ಪ್ರತಿಯನ್ನು ಪ್ರಿಂಟ್ ತೆಗೆದಿಟ್ಟುಕೊಳ್ಳಿ.
ಅರ್ಜಿ ಶುಲ್ಕ:
ಸಾಮಾನ್ಯ ವರ್ಗ (General Merit): ₹200.
ಪ್ರವರ್ಗ 2A, 2B, 3A, 3B ಅಭ್ಯರ್ಥಿಗಳಿಗೆ: ₹100.
SC, ST ಮತ್ತು ಪ್ರವರ್ಗ-1 ಅಭ್ಯರ್ಥಿಗಳಿಗೆ: ಶುಲ್ಕ ವಿನಾಯಿತಿ ಇದೆ (ಉಚಿತ).
ಆಯ್ಕೆ ವಿಧಾನ:
ಶಾರ್ಟ್‌ಲಿಸ್ಟ್ ಪ್ರಕ್ರಿಯೆ: ಅಭ್ಯರ್ಥಿಗಳು SSLC ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಮೆರಿಟ್ ಆಧಾರದ ಮೇಲೆ 1:5 ಅನುಪಾತದಲ್ಲಿ ಸಂದರ್ಶನಕ್ಕೆ ಆಯ್ಕೆ ಮಾಡಲಾಗುತ್ತದೆ.
ಸಂದರ್ಶನ: ಆಯ್ಕೆಯಾದ ಅಭ್ಯರ್ಥಿಗಳಿಗೆ 10 ಅಂಕಗಳ ಸಂದರ್ಶನ ನಡೆಸಿ ಅಂತಿಮವಾಗಿ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗುತ್ತದೆ (ಯಾವುದೇ ಲಿಖಿತ ಪರೀಕ್ಷೆ ಇರುವುದಿಲ್ಲ).