ಸಬ್ ಇನ್‌ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ AI Image
ವೃತ್ತಿ & ಉದ್ಯೋಗ ಅವಕಾಶಗಳು

ಪದವೀಧರರಿಗೆ ಕೇಂದ್ರ ಸರ್ಕಾರದಲ್ಲಿ ಬಂಪರ್ ಆಫರ್: 1,871 ಸಬ್ ಇನ್‌ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ; 1 ಲಕ್ಷಕ್ಕೂ ಅಧಿಕ ಸಂಬಳ!

SSC SI Recruitment 2026: ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗವು ದೆಹಲಿ ಪೊಲೀಸ್ ಮತ್ತು ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ ಖಾಲಿ ಇರುವ ಒಟ್ಟು 1,871 ಸಬ್-ಇನ್ಸ್‌ಪೆಕ್ಟರ್ (SI) ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ. ಆ ಕುರಿತ ವರದಿ ಇಲ್ಲಿದೆ:

SSC SI Recruitment 2026: ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗವು (SSC) ದೆಹಲಿ ಪೊಲೀಸ್ ಮತ್ತು ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ (CAPF) ಖಾಲಿ ಇರುವ ಒಟ್ಟು 1,871 ಸಬ್-ಇನ್ಸ್‌ಪೆಕ್ಟರ್ (SI) ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ. ಅದರಲ್ಲೂ, ಕೇಂದ್ರ ಸರ್ಕಾರಿ ಉದ್ಯೋಗದ ಹುಡುಕಾಟದಲ್ಲಿರುವ ಪದವೀಧರ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದ್ದು, ದೇಶಾದ್ಯಂತ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಆ ಕುರಿತ ವರದಿ ಇಲ್ಲಿದೆ:

ಹುದ್ದೆಗಳ ವಿವರ:

  • ಹುದ್ದೆಯ ಹೆಸರು: ಸಬ್-ಇನ್ಸ್‌ಪೆಕ್ಟರ್

  • ಒಟ್ಟು ಹುದ್ದೆಗಳು: 1,871 ಹುದ್ದೆಗಳು

    • ದೆಹಲಿ ಪೊಲೀಸ್ SI: 317 ಹುದ್ದೆಗಳು

    • ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆ (CAPFs - BSF, CISF, CRPF, ITBP, SSB) SI (GD): 1,320 ಹುದ್ದೆಗಳು

    • CISF SI (Fire) - ಪುರುಷರಿಗೆ ಮಾತ್ರ: 234 ಹುದ್ದೆಗಳು

ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಸಲು ಆರಂಭದ ದಿನಾಂಕ: ಸೆಪ್ಟೆಂಬರ್ 10, 2026

  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಸೆಪ್ಟೆಂಬರ್ 30, 2026 (ರಾತ್ರಿ 11:00 ಗಂಟೆಯವರೆಗೆ)

  • ಆನ್‌ಲೈನ್ ಶುಲ್ಕ ಪಾವತಿಗೆ ಕೊನೆಯ ದಿನ: ಅಕ್ಟೋಬರ್ 1, 2026

  • ಅರ್ಜಿ ತಿದ್ದುಪಡಿ ವಿಂಡೋ: ಅಕ್ಟೋಬರ್ 8 ರಿಂದ ಅಕ್ಟೋಬರ್ 10, 2026

ಅರ್ಹತೆ:

  • ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪಾಸ್ ಮಾಡಿರಬೇಕು. (ದೆಹಲಿ ಪೊಲೀಸ್ ಎಸ್‌ಐ ಹುದ್ದೆಗೆ ಪುರುಷ ಅಭ್ಯರ್ಥಿಗಳು ಚಾಲನಾ ಪರವಾನಗಿ - LMV ಡ್ರೈವಿಂಗ್ ಲೈಸೆನ್ಸ್ ಹೊಂದಿರಬೇಕು).

  • ವಯೋಮಿತಿ: ಅಭ್ಯರ್ಥಿಗಳ ವಯಸ್ಸು 20 ರಿಂದ 25 ವರ್ಷಗಳ ಒಳಗಿರಬೇಕು. (ಕೇಂದ್ರ ಸರ್ಕಾರದ ನಿಯಮಗಳ ಪ್ರಕಾರ ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ).

ವೇತನ ಶ್ರೇಣಿ:

  • ಆಯ್ಕೆಯಾದ ಅಭ್ಯರ್ಥಿಗಳಿಗೆ ಪೇ ಲೆವೆಲ್-6 ರ ಅಡಿಯಲ್ಲಿ ₹35,400 ರಿಂದ ₹1,12,400 ವರೆಗೆ ಮಾಸಿಕ ವೇತನ ಹಾಗೂ ಕೇಂದ್ರ ಸರ್ಕಾರದ ಇತರೆ ಭತ್ಯೆಗಳು ಸಿಗಲಿವೆ.

ಅರ್ಜಿ ಶುಲ್ಕ:

  • ಸಾಮಾನ್ಯ, ಒಬಿಸಿ ಮತ್ತು ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ: ₹100

  • ಮಹಿಳೆಯರು, ಎಸ್‌ಸಿ, ಎಸ್‌ಟಿ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ: ಯಾವುದೇ ಶುಲ್ಕ ಇರುವುದಿಲ್ಲ

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಒಟ್ಟು 4 ಹಂತಗಳ ಮೂಲಕ ಆಯ್ಕೆ ಮಾಡಲಾಗುತ್ತದೆ:

  • ಕಂಪ್ಯೂಟರ್ ಆಧಾರಿತ ಲಿಖಿತ ಪರೀಕ್ಷೆ - ಪೇಪರ್ 1

  • ದೈಹಿಕ ಗುಣಮಟ್ಟದ ಪರೀಕ್ಷೆ ಮತ್ತು ದೈಹಿಕ ಸಹಿಷ್ಣುತೆ ಪರೀಕ್ಷೆ

  • ಲಿಖಿತ ಪರೀಕ್ಷೆ - ಪೇಪರ್ 2

  • ವೈದ್ಯಕೀಯ ತಪಾಸಣೆ ಮತ್ತು ದಾಖಲಾತಿ ಪರಿಶೀಲನೆ

ಅರ್ಜಿ ಸಲ್ಲಿಕೆ ವಿಧಾನ:

ಸಿಬ್ಬಂದಿ ನೇಮಕಾತಿ ಆಯೋಗದ (SSC) ಸಬ್-ಇನ್ಸ್‌ಪೆಕ್ಟರ್ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುಲು ಅಭ್ಯರ್ಥಿಗಳು ಎಸ್‌ಎಸ್‌ಸಿಯ ಹೊಸ ಅಧಿಕೃತ ವೆಬ್‌ಸೈಟ್ ssc.gov.in ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕಾಗುತ್ತದೆ.

ಸಿಬ್ಬಂದಿ ನೇಮಕಾತಿ ಆಯೋಗದ ಅರ್ಜಿ ಲಿಂಕ್:

https://ssc.gov.in/

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಯುದ್ಧ ಆರಂಭಕ್ಕೆ ವಿಜಯದಶಮಿ ಪ್ರಶಸ್ತ ಕಾಲ, ಮಾಧ್ಯಮದವರಿಗೆ ಒಳ್ಳೆಯ ಆಹಾರ ನೀಡುತ್ತೇನೆ': HD ಕುಮಾರಸ್ವಾಮಿ

ಸಿದ್ದರಾಮಯ್ಯ ಮನೆ ಗೃಹಪ್ರವೇಶ: ಪತ್ನಿಯಿಂದ ಗೋ ಪೂಜೆ, ಲಕ್ಷ್ಮಿ ಫೋಟೊ ಹಿಡಿದು ನಿಂತ ಯತೀಂದ್ರ; ಸಾಮಾಜಿಕ ಮಾಧ್ಯಮಗಳಲ್ಲಿ ಭಾರಿ ಚರ್ಚೆ

ನಾಯಕತ್ವ ಎಂದರೆ ತೊಂದರೆ ಬಂದಾಗ ಓಡಿಹೋಗುವುದಲ್ಲ: Biggboss ವೇದಿಕೆ ಮೇಲೆ ಸೇತುಪತಿ ಹೇಳಿಕೆ ಬೆನ್ನಲ್ಲೇ ಭುಗಿಲೆದ್ದ ಆಕ್ರೋಶ!

2,000 ರೂ ಗಿಂತ ಹೆಚ್ಚಿನ UPI ಪಾವತಿ ಮೇಲೆ ಶುಲ್ಕ? ಶೀಘ್ರದಲ್ಲೇ ನಿರ್ಧಾರ

ಪಶ್ಚಿಮ ಬಂಗಾಳ ಉಪಚುನಾವಣೆ: ನಂದಿಗ್ರಾಮದಲ್ಲಿ ಹತ್ಯೆಗೀಡಾದ ಸಿಎಂ ಆಪ್ತ ಸಹಾಯಕನ ತಾಯಿ ಕಣಕ್ಕೆ!