ಬೆಂಗಳೂರು: ನಟಿ, ಬಿಗ್‌ಬಾಸ್ ಮಾಜಿ ಸ್ಪರ್ಧಿ ಕೃಷಿ ತಾಪಂಡ, ನಿರ್ಮಾಪಕರೊಬ್ಬರ ವಿರುದ್ಧ ಕಿರುಕುಳ ಹಾಗೂ ಮಾನಸಿಕ ಹಿಂಸೆ ನೀಡಿದ ಆರೋಪದಡಿ ದೂರು ದಾಖಲಿಸಿದ್ದಾರೆ, ಇದರ ನಡುವೆಯೇ ತಮ್ಮ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.
ಕಳೆದ ಕೆಲವು ದಿನಗಳು ನನಗೆ ತುಂಬಾ ಭಾರವಾಗಿದ್ದವು. ನನ್ನ ವೈಯಕ್ತಿಕ ವಿಷಯ ಈಗ ಸಾರ್ವಜನಿಕವಾಗಿದೆ. ಪೊಲೀಸರ, ಕಾನೂನು, ಮಾಧ್ಯಮ ಮತ್ತು ಅನೇಕ ಜನರ ಬೆಂಬಲ ಸಿಕ್ಕಿದ್ದಕ್ಕೆ ನಾನು ಕೃತಜ್ಞೆ. ಆದರೆ ಕೆಲವರು ಇನ್ನೂ ದುಃಖ ಕೊಡೋ ರೀತಿಯಲ್ಲಿ, ಅರ್ಥವಿಲ್ಲದಂತೆ ಮಾತನಾಡುತ್ತಿದ್ದಾರೆ. ಎಲ್ಲರೂ ನನ್ನನ್ನು ನಂಬಲೇಬೇಕು ಅಥವಾ ಬೆಂಬಲಿಸಲೇಬೇಕು ಅನ್ನೋ ನಿರೀಕ್ಷೆ ನನಗಿಲ್ಲ.
ಆದ್ರೆ ಯಾರನ್ನಾದರೂ ಕೆಡವೋ, ಕೀಳು ಮಾತಾಡೋ ಹಕ್ಕು ಯಾರಿಗೂ ಇಲ್ಲ. ಸೋಷಿಯಲ್ ಮೀಡಿಯಾದ ದ್ವೇಷ-ಬುಲ್ಲಿಯಿಂಗ್ ಎಲ್ಲರೂ ತಾಳಲು ಸಾಧ್ಯವಾಗುವುದಿಲ್ಲ. ನನ್ನ ಸುರಕ್ಷತೆ, ನನ್ನ ಮನಶಾಂತಿ ಮತ್ತು ನನ್ನ ಬದುಕಿಗಾಗಿ ನಾನು ಮಾಡಬೇಕಾದುದನ್ನೇ ಮಾಡಿದ್ದೇನೆ. ನನ್ನ ಸತ್ಯದ ಮೇಲೆ ನಾನು ದೃಢವಾಗಿದ್ದೇನೆ. ನನ್ನ ಜೊತೆ ನಿಂತ ಎಲ್ಲರಿಗೂ ಹೃದಯಪೂರ್ವಕ ಧನ್ಯವಾದಗಳು’ ಎಂದು ಬರೆದುಕೊಂಡಿದ್ದಾರೆ.