ರಾಜಕುಮಾರ್ ಹಿರಾನಿ 
ಬಾಲಿವುಡ್

ಬೈಕ್‌ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡ 'ಪಿಕೆ' ನಿರ್ದೇಶಕ ರಾಜ್‌ಕುಮಾರ್‌ ಹಿರಾನಿ

ಬಾಲಿವುಡ್‌ ನ ಖ್ಯಾತ ನಿರ್ದೇಶಕ ರಾಜಕುಮಾರ್‌ ಹಿರಾನಿ ಅವರು ಬೈಕ್‌ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ...

ಮುಂಬೈ: ಬಾಲಿವುಡ್‌ ನ ಖ್ಯಾತ ನಿರ್ದೇಶಕ ರಾಜಕುಮಾರ್‌ ಹಿರಾನಿ ಅವರು ಬೈಕ್‌ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. 
ರಾಜಕುಮಾರ್ ಹಿರಾನಿ ಪ್ರಾಣಾಪಾಯದಿಂದ ಪಾರಾಗಿದ್ದು, ಬಾಂದ್ರಾದ ಲೀಲಾವತಿ ಆಸ್ಪತ್ರೆಗೆ ಸೇರಿಸಲಾಗಿದೆ. ಮುಖ, ದವಡೆ, ಗದ್ದಕ್ಕೆ ತೀವ್ರ ಗಾಯಗಳಾಗಿರುವುದರಿಂದ ಅವರಿಗೆ ಶಸ್ತ್ರ ಚಿಕಿತ್ಸೆ ನಡೆಸುವ ಅಗತ್ಯವಿದೆ ಎಂದು ವೈದ್ಯರು ಹೇಳಿದ್ದಾರೆ.
ರಾಜಕುಮಾರ್ ಹಿರಾನಿ ಅವರ ನೌಕರನೊಬ್ಬ ಹೊಸ ಬೈಕನ್ನು ಖರೀದಿಸಿದ್ದು, ಒಮ್ಮೆ ರೈಡ್‌ ಮಾಡಿ ಎಂದು ಕೇಳಿಕೊಂಡಿದ್ದಾನೆ. ಬೈಕ್ ಹತ್ತಿದ ಅವರು ಬೈಕಿನ ಭಾರವನ್ನು ನಿಭಾಯಿಸಲಾಗದೆ ರಸ್ತೆಗೆ ಉರುಳಿ ಬಿದ್ದಿದ್ದಾರೆ. ಈ ವೇಳೆ ಬೈಕ್‌ ಅವರ ಮೇಲೆಯೇ ಬಿತ್ತು ಎಂದು ನೌಕರ ತಿಳಿಸಿದ್ದಾನೆ. 
ಹಿರಾನಿ ಅವರು ಮುನ್ನಾ ಭಾಯಿ ಎಂಬಿಬಿಎಸ್‌, ಲಗೇ ರಹೋ ಮುನ್ನಾಭಾಯಿ, ತ್ರೀ ಈಡಿಯಟ್ಸ್‌ ಮತ್ತು ಪಿಕೆ ಯಂತಹ ಬ್ಲಾಕ್ ಬಸ್ಟರ್ ಚಿತ್ರಗಳನ್ನು ನಿರ್ದೇಶಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!