ಆಸಿನ್ - ರಾಹುಲ್ ಶರ್ಮಾ 
ಬಾಲಿವುಡ್

ಆಸಿನ್ - ರಾಹುಲ್ ಶರ್ಮಾ ಮದುವೆ ದಿನಾಂಕ ನಿಗದಿ

2008ರಲ್ಲಿ ತೆರೆಕಂಡ ಘಜನಿ ಚಿತ್ರದ ಮೂಲಕ ಬಾಲಿವುಡ್ ಗೆ ಎಂಟ್ರಿ ಕೊಟ್ಟಿದ್ದ ದಕ್ಷಿಣ ಭಾರತದ ಖ್ಯಾತ ನಟಿ, ಮಲೆಯಾಳಿ ಬೆಡಗಿ...

2008ರಲ್ಲಿ ತೆರೆಕಂಡ ಘಜನಿ ಚಿತ್ರದ ಮೂಲಕ ಬಾಲಿವುಡ್ ಗೆ ಎಂಟ್ರಿ ಕೊಟ್ಟಿದ್ದ ದಕ್ಷಿಣ ಭಾರತದ ಖ್ಯಾತ ನಟಿ, ಮಲೆಯಾಳಿ ಬೆಡಗಿ ಆಸಿನ್ ಅವರು ಹೊಸ ವರ್ಷದಲ್ಲಿ ಹೊಸ ಜೀವನಕ್ಕೆ ಕಾಲಿಡುತ್ತಿದ್ದಾರೆ.
ಆಸಿನ್ ಅವರು ಮುಂದಿನ ಜನವರಿ 23ರಂದು ಮೈಕ್ರೋ ಮ್ಯಾಕ್ಸ್ ಮೊಬೈಲ್ ಕಂಪನಿಯ ಸ್ಥಾಪಕ ರಾಹುಲ್ ಶರ್ಮಾ ಅವರೊಂದಿಗೆ ಸಪ್ತಪದಿ ತುಳಿಯಲಿದ್ದಾರೆ  ಎಂದು ಮುಂಬೈ ಮಿರರ್ ವರದಿ ಮಾಡಿದೆ.
ಆಸಿನ್ ಹಾಗೂ ದೆಹಲಿ ಮೂಲದ ಉದ್ಯಮಿ ರಾಹುಲ್ ಶರ್ಮಾ ಅವರ ಮದುವೆ ದಹೆಲಿಯಲ್ಲೇ ನಡೆಯಲಿದ್ದು, ಬಳಿಕ ತಮ್ಮ ಸ್ನೇಹಿತರು ಹಾಗೂ ಸಹೋದ್ಯೋಗಿಗಳಿಗಾಗಿ ಮುಂಬೈಯಲ್ಲಿ ಅದ್ದೂರಿ ಆರತಕ್ಷತೆ ಸಮಾರಂಭ ನಡೆಯಲಿದೆ ಎಂದು ವರದಿ ಮಾಡಲಾಗಿದೆ.
ಕಳೆದ ಕೆಲವು ವರ್ಷಗಳಿಂದ ರಾಹುಲ್ ಹಾಗೂ ಆಸಿನ್ ಪರಸ್ಪರ ಪ್ರೀತಿಸುತ್ತಿದ್ದು, ಇದೀಗ ದಾಂಪತ್ಯ ಜೀವನಕ್ಕೆ ಕಾಲಿಡುವ ಮೂಲಕ ಬಾಲಿವುಡ್‌ಗೆ ವಿದಾಯ ಹೇಳುತ್ತಿದ್ದಾರೆ.
ಇತ್ತೀಚಿಗಷ್ಟೇ ಮದುವೆ ಸುದ್ದಿಯನ್ನು ಖಚಿತಪಡಿಸಿದ್ದ ಆಸಿನ್, ನಾನು ಈಗ ನನ್ನ ವೈಯಕ್ತಿಕ ಜೀವನಕ್ಕೆ ಹೆಚ್ಚು ಸಮಯ ಕೊಡಬೇಕಾಗಿದ್ದು, ಕಳೆದ ಎರಡು ವರ್ಷಗಳಿಂದ ಯಾವುದೇ ಹೊಸ ಚಿತ್ರಗಳಿಗೆ ಸಹಿ ಹಾಕಿಲ್ಲ ಎಂದಿದ್ದರು.
ಬಾಲಿವುಡ್ ಸೇರಿದಂತೆ ದಕ್ಷಿಣ ಭಾರತದ ಹಲವು ಭಾಷೆಗಳ ಚಿತ್ರಗಳಲ್ಲಿ ಅಭಿನಯಿಸಿರುವ ಆಸಿನ್ ಮದುವೆ ಸುದ್ದಿ ಅಭಿಮಾನಿಗಳಲ್ಲಿ ನಿರಾಶೆ ಮೂಡಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

IPL 2026: MI vs RCB; ವಾಂಖೆಡೆ ಕ್ರೀಡಾಂಗಣದಲ್ಲಿ ಇತಿಹಾಸ ಬರೆದ ಬೆಂಗಳೂರು, ಅತ್ಯಧಿಕ ಮೊತ್ತ!

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

SCROLL FOR NEXT