ಸಂಜಯ ಗಾಂಧಿ ಮತ್ತು ಹನ್ಸಲ್ ಮೆಹ್ತಾ 
ಬಾಲಿವುಡ್

ಶೀಘ್ರವೇ ಸಂಜಯ್ ಗಾಂಧಿ ಜೀವನ ಚರಿತ್ರೆ ಆಧಾರಿತ ಚಿತ್ರ ನಿರ್ಮಾಣ: ಹನ್ಸಲ್ ಮೆಹ್ತಾ

ರಾಜಕಾರಣಿ ಹಾಗೂ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಪುತ್ರ ಸಂಜಯ ಗಾಂಧಿ ಅವರ ಜೀವನ ಚರಿತ್ರೆ ಆಧಾರಿತ ...

ಮುಂಬಯಿ: ರಾಜಕಾರಣಿ ಹಾಗೂ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಪುತ್ರ ಸಂಜಯ ಗಾಂಧಿ ಅವರ ಜೀವನ ಚರಿತ್ರೆ ಆಧಾರಿತ ಸಿನಿಮಾ ಶೀಘ್ರವೇ ಸೆಟ್ಟೇರಲಿದೆ ಎಂದು ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ಮಾಪಕ ಹನ್ಸಲ್ ಮೆಹ್ತಾ ಹೇಳಿದ್ದಾರೆ.

ಲೇಖಕ ವಿನೋದ್ ಮೆಹ್ತಾ , ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಬರೆದಿರುವ  'ದಿ ಸಂಜಯ್ ಸ್ಟೋರಿ ' ಪುಸ್ತಕ ಆಧರಿಸಿ ಚಿತ್ರ ನಿರ್ಮಾಣವಾಗಲಿದೆ. ಅತಿ ಚಿಕ್ಕ ವಯಸ್ಸಿನಲ್ಲೇ ದುರಂತ ಸಾವಿಗೀಡಾದ ಸಂಜಯ್ ಗಾಂಧಿ ಜೀವನದ ಸಂಪೂರ್ಣ ವಿವರ ಈ ಪುಸ್ತಕದಲ್ಲಿದೆ.

ಸಂಜಯ ಗಾಂಧಿ ಜೀವನದ ಬಗ್ಗೆ ಆಳವಾಗಿ ಸಂಶೋಧನೆ ನಡೆಸಿ ಬರೆದಿರುವ ಈ ಪುಸ್ತಕ ಅದ್ಭುತವಾಗಿದೆ. ಸಂಜಯ್ ಗಾಂಧಿ ಸಾವಿನ ರಹಸ್ಯ ಇನ್ನೂ ನಿಗೂಢವಾಗಿಯೇ ಉಳಿದಿದ್ದು, ತನ್ನ ತಾಯಿ ಹಾಗೂ ಉಕ್ಕಿನ ಮಹಿಳೆ ಇಂದಿರಾ ಗಾಂಧಿ ಜೊತೆಯೇ ಸಂಜಯ ಗಾಂಧಿ ಸಂಬಂಧ ಹೊಂದಿದ್ದರು ಎಂಬ ವಿಷಯವನ್ನು ಈ ಪುಸ್ತಕದಲ್ಲಿ ಪ್ರಕಟಿಸಲಾಗಿದೆ. ಈ ಎರಡು ಪಾತ್ರಗಳು ಚಿತ್ರದಲ್ಲಿ ಸವಾಲಿನ ಪಾತ್ರಗಳಾಗಿವೆ ಎಂದು ಹಸ್ನ ಲ್ ಮೆಹ್ತಾ ಹೇಳಿದ್ದಾರೆ.

ಇನ್ನು ಹೆಸರಿಡದ ಈ ಚಿತ್ರದ ಚಿತ್ರೀಕರಣ ಮುಂದಿನ ವರ್ಷ ಆರಂಭವಾಗಲಿದೆ.  ಸದ್ಯ ಕಂಗನಾ ರಾಣವತ್ ಅಭಿನಯದ ಸಿಮ್ರಾನ್ ಚಿತ್ರದಲ್ಲಿ ಹನ್ಸಲ್ ಬ್ಯುಸಿಯಾಗಿದ್ದಾರೆ, ತಮ್ಮ ಮತ್ತೊಂದು ಮಹತ್ವಕಾಂಕ್ಷೆಯ ಅಲಿಗರ್ ಚಿತ್ರ ಬಿಡುಗಡೆಗಾಗಿ ಕಾಯುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?