ಬ್ರದರ್ಸ್ ಚಿತ್ರದಲ್ಲಿ ನಟ ಅಕ್ಷಯ್ ಕುಮಾರ್ ಹಾಗೂ ಸಿದ್ದಾರ್ಥ್ ಮಲ್ಹೋತ್ರಾ 
ಬಾಲಿವುಡ್

ಬ್ರದರ್ಸ್ ಚಿತ್ರದ ಟೀಸರ್ ಶೇರ್ ಮಾಡಿದ ಅಕ್ಷಯ್

ಬಾಲಿವುಡ್ ನ ಬಹುನಿರೀಕ್ಷಿತ ಚಿತ್ರಗಳಲ್ಲೊಂದಾದ ಬಾಲಿವುಡ್ ನಟ ಅಕ್ಷಯ್ ಕುಮಾರ್ ನಟನೆಯ ಬ್ರದರ್ಸ್ ಚಿತ್ರ ಬಾರಿ ಸುದ್ದಿ ಮಾಡುತ್ತಿದ್ದು, ಚಿತ್ರದ ಟೀಸರ್ ವೊಂದನ್ನು ಅಕ್ಷಯ್ ಕುಮಾರ್ ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಶೇರ್ ಮಾಡಿದ್ದಾರೆ...

ಬಾಲಿವುಡ್ ನ ಬಹುನಿರೀಕ್ಷಿತ ಚಿತ್ರಗಳಲ್ಲೊಂದಾದ ಬಾಲಿವುಡ್ ನಟ ಅಕ್ಷಯ್ ಕುಮಾರ್ ನಟನೆಯ ಬ್ರದರ್ಸ್ ಚಿತ್ರ ಬಾರಿ ಸುದ್ದಿ ಮಾಡುತ್ತಿದ್ದು, ಚಿತ್ರದ ಟೀಸರ್ ವೊಂದನ್ನು ಅಕ್ಷಯ್ ಕುಮಾರ್ ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಶೇರ್ ಮಾಡಿದ್ದಾರೆ.

ಅಕ್ಷಯ್ ಕುಮಾರ್ ಶೇರ್ ಮಾಡಿರುವ ಟೀಸರ್ ನಲ್ಲಿ ಐಟಂ ಸಾಂಗ್ ವೊಂದರಲ್ಲಿ ಕರೀನಾ ಕಪೂರ್ ಕುಣಿದಿರುವುದು ವಿಶೇಷವಾಗಿದ್ದು, ಚಿತ್ರದಲ್ಲಿ ಕರೀನಾ ಕಾಣಿಸಿಕೊಂಡಿರುವ ಫಸ್ಟ್ ಲುಕ್ ಇದಾಗಿದೆ.

ಬ್ರದರ್ಸ್ ಚಿತ್ರವು ಬಾಕ್ಸಿಂಗ್ ಪ್ರಧಾನ ಕಥೆಯಾಗಿದ್ದು, ಫ್ಯಾಮಿಲಿ ಎಂಟರ್ಟೈನ್ಮೆಂಟ್ ನಿಂದ ಕೂಡಿರುವ ಚಿತ್ರವಾಗಿದೆ. ಚಿತ್ರದಲ್ಲಿ ಅಕ್ಷಯ್ ಕುಮಾರ್ ಸಹೋದರನಾಗಿ ಸಿದ್ದಾರ್ಥ್ ಮಲ್ಹೋತ್ರಾ ಅಭಿನಯಿಸಿದ್ದು, ಚಿತ್ರದಲ್ಲಿ 'ಮೆರಾ ನಾಮ್ ಮೇರಿ' ಎಂಬ ಐಟಂ ಸಾಂಗ್ ಒಂದರಲ್ಲಿ ಬಾಲಿವುಡ್ ಸುಂದರಿ ಕರೀನಾ ಕಪೂರ್ ಕಾಣಿಸಿಕೊಂಡಿದ್ದಾರೆ. ಇದಲ್ಲದೆ, ಚಿತ್ರದಲ್ಲಿ ಅಕ್ಷಯ್ ಜೋಡಿಯಾಗಿ ನೀಳಕಾಲ ಸುಂದರಿ ಜಾಕ್ವೆಲಿನ್ ಫರ್ನಾಂಡಿಸ್ ಕಾಣಿಸಿಕೊಂಡಿದ್ದಾರೆ.

ಅಗ್ನಿಫಥ್ ಚಿತ್ರದ ಮೂಲಕ ಖ್ಯಾತಿಗಳಿಸಿರುವ ನಿರ್ದೇಶಕ ಕರಣ್ ಮಲ್ಹೋತ್ರಾ ಬ್ರದರ್ಸ್ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಇದೇ ಮೊದಲ ಬಾರಿಗೆ ಸಿದ್ಧಾರ್ಥ್ ಮಲ್ಹೋತ್ರಾ ತಮ್ಮ ಚಾಕೋಲೇಟೇ ಹೀರೋ ಗೆಟಪ್ ನಿಂದ ರಫ್ ಆಂಡ್ ಟಫ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಎಲ್ಲಾ ಅಂಶಗಳು ಇದೀಗ ಬ್ರದರ್ಸ್ ಚಿತ್ರದ ಮೇಲೆ ಹಲವು ನಿರೀಕ್ಷೆ ಹುಟ್ಟಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

No Toll For Indian Tankers': ಅಮೆರಿಕ ದಿಗ್ಬಂಧನ ನಡುವೆ ಹಾರ್ಮುಜ್ ಜಲಸಂಧಿ ಮೂಲಕ ಭಾರತೀಯ ಹಡಗು ಸಾಗಲು ಇರಾನ್ ಭರವಸೆ!

ರಾಮ ಮಂದಿರದಲ್ಲಿ 'ಸಾಂಕೇತಿಕ ಜ್ಯೋತಿ' ಹಿಂದೂ ಸಂಪ್ರದಾಯಕ್ಕೆ ವಿರುದ್ಧ: ಸ್ವಾಮಿ ಅವಿಮುಕ್ತೇಶ್ವರಾನಂದ್ ಆಕ್ಷೇಪ

Video: ಹಾಸನದಲ್ಲಿ ಸಿನಿಮೀಯ ಶೈಲಿಯ ವಿಚಿತ್ರ ಘಟನೆ; ಪತಿ, ಮಗು ತೊರೆದು ಕಾರಿನಲ್ಲೇ ಪ್ರಿಯಕರನ ಜತೆ ಮಹಿಳೆ ಮದುವೆ!

SIR ಗೆ ಆಕ್ಷೇಪ: ಪಶ್ಚಿಮ ಬಂಗಾಳ ಚುನಾವಣೆ ರದ್ದತಿಗೆ ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್; ವಿರೋಧಿಗಳಿಗೆ ತೀವ್ರ ಹಿನ್ನಡೆ!

ಸರ್ಕಾರಿ ಗೌರವಗಳೊಂದಿಗೆ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ

SCROLL FOR NEXT