ಬಡರೈತರ ನೆರವಿಗೆ ಮುಂದಾದ ನಟ ಅಕ್ಷಯ್ ಕುಮಾರ್
ಬಾಲಿವುಡ್ ನಟ ನಾನಾ ಪಾಟೇಕರ್ ರೈತ ಕುಟುಂಬಗಳಿಗೆ ಸಹಾಯ ಮಾಡುತ್ತಿರುವ ಬೆನ್ನಲ್ಲೇ ನಟ ಅಕ್ಷಯ್ ಕುಮಾರ್ ಕೂಡ ರೈತರ ನೆರವು ನೀಡಲು...
ಮುಂಬೈ: ಬಾಲಿವುಡ್ ನಟ ನಾನಾ ಪಾಟೇಕರ್ ರೈತ ಕುಟುಂಬಗಳಿಗೆ ಸಹಾಯ ಮಾಡುತ್ತಿರುವ ಬೆನ್ನಲ್ಲೇ ನಟ ಅಕ್ಷಯ್ ಕುಮಾರ್ ಕೂಡ ರೈತರ ನೆರವು ನೀಡಲು ಮುಂದಾಗಿದ್ದಾರೆ.
ಮಹಾರಾಷ್ಟ್ರದ ಬರಪೀಡಿತ ಜಿಲ್ಲೆಯ ರೈತರ ಸಹಾಯಕ್ಕಾಗಿ ಅಕ್ಷಯ್ 90 ಲಕ್ಷ ರು ನೀಡಲು ಒಲವು ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗಿದೆ.
ತಮ್ಮ ಈ ಮಹಾ ಕಾರ್ಯವನ್ನು ಪ್ರಚಾರದಿಂದ ದೂರವಿರಿಸಿರುವ ಅಕ್ಷಯ್ ಮುಂದಿನ 6 ತಿಂಗಳಲ್ಲಿ ಪ್ರತಿ ಜಿಲ್ಲೆಯ 30 ರೈತರಿಗೆ 50ಸಾವಿರ ರು. ಆರ್ಥಿಕ ನೆರವು ನೀಡಲಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.
ಈ ಹಿಂದೆ ನಟ ನಾನಾ ಪಾಟೇಕರ್ ಹಾಗೂ ಕ್ರಿಕೆಟರ್ ಅಂಜಿಕ್ಯ ರೆಹಾನೆ ಮಹಾರಾಷ್ಟ್ರದ ರೈತ ಸಂಕಷ್ಟಕ್ಕೆ ಸ್ಪಂದಿಸಿದ್ದರು. ಈಗ ಅಕ್ಷಯ್ ಕುಮಾರ್ ಕೂಡ ಅದೇ ದಾರಿಯಲ್ಲಿ ಸಾಗುತ್ತಿರುವುದು ಖುಷಿಯ ವಿಚಾರ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.