ಕಂಗನಾ - ಹೃತಿಕ್ ರೋಷನ್ 
ಬಾಲಿವುಡ್

ಹೃತಿಕ್ ರೋಷನ್ ಗೆ ಕಂಗನಾ ಜೊತೆ ಅಫೇರ್ ಇರಲಿಲ್ಲ ಅಂತ ಸಾಬೀತುಪಡಿಸುತ್ತೇವೆ: ವಕೀಲರು

ಬಾಲಿವುಡ್ ನಟ ಹೃತಿಕ್ ರೋಷನ್ ಮತ್ತು ಅವರ ವಕೀಲರು ನಟಿ ಕಂಗನಾ ರನೌತ್ ವಿರುದ್ಧದ ಕಾನೂನು ಸಮರದಿಂದ ಹಿಂದೆ ಸರಿಯುವ ಯಾವುದೇ ಲಕ್ಷಣಗಳು...

ನವದೆಹಲಿ: ಬಾಲಿವುಡ್ ನಟ ಹೃತಿಕ್ ರೋಷನ್ ಮತ್ತು ಅವರ ವಕೀಲರು ನಟಿ ಕಂಗನಾ ರನೌತ್ ವಿರುದ್ಧದ ಕಾನೂನು ಸಮರದಿಂದ ಹಿಂದೆ ಸರಿಯುವ ಯಾವುದೇ ಲಕ್ಷಣಗಳು ಕಾಣಿಸುತ್ತಿಲ್ಲ. ನನ್ನ ಕಕ್ಷಿದಾರ ಹೃತಿಕ್ ರೋಷನ್ ಕಂಗನಾ ಜೊತೆ ಸಂಬಂಧ ಹೊಂದಿರಲಿಲ್ಲ ಎಂಬುದನ್ನು ನಾವು ಸಾಬೀತು ಮಾಡುತ್ತೇವೆ ಎಂದು ಅವರ ವಕೀಲರು ಹೇಳಿದ್ದಾರೆ.
ಸತ್ಯಾಂಶ ಏನು ಎಂಬುದನ್ನು ಸಂಬಂಧಪಟ್ಟವರಿಗೆ ತಿಳಿಸಿದ್ದೇವೆ. ಈ ಮಾತಿನ ಸಮರದಲ್ಲಿ ಯಾರೂ ಗೊಂದಲಕ್ಕೆ ಒಳಗಾಗಬೇಕಿಲ್ಲ. ನಮ್ಮ ಕಕ್ಷಿದಾರ ಕಂಗನಾ ಅವರೊಂದಿಗೆ ಯಾವುದೇ ಸಂಬಂಧ ಹೊಂದಿಲ್ಲ ಎಂಬುದುನ್ನು ನಾವು ಸಾಬೀತುಪಡಿಸುತ್ತೇವೆ. ಇದಕ್ಕೆ ಸಂಬಂಧಿಸಿದ ಬಲವಾದ ಸಾಕ್ಷ್ಯಾಧಾರಗಳನ್ನು ನಾವು ತನಿಖಾ ಅಧಿಕಾರಿಗಳಿಗೆ ನೀಡಿದ್ದೇವೆ ಎಂದು ಹೃತಿಕ್ ರೋಷನ್ ಅವರ ವಕೀಲರು ಐಎಎನ್ ಎಸ್ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ. 
ಅವರು ಸಹ ಅಪೇರ್ ಇತ್ತು ಎಂಬದುಕ್ಕೆ ಏನಾದರೂ ಸಾಕ್ಷ್ಯಗಳಿದ್ದರೆ ತನಿಖಾಧಿಕಾರಿಗಳಿಗೆ ನೀಡಲಿ ಎಂದು ವಕೀಲರು ಹೇಳಿದ್ದಾರೆ. ಅಲ್ಲದೆ ನಾವು ಇಲ್ಲಿ ನೋಟಿಸ್ ಹಾಗೂ ಪ್ರತಿ ನೋಟಿಸ್ ನೀಡುವ ಆಟವಾಡುತ್ತಿಲ್ಲ. ಸತ್ಯಾಂಶವನ್ನು ಹೊರ ತರಲು ಕಾನೂನು ಹೋರಾಟ ನಡೆಸುತ್ತಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ.
ಕೆಲವು ದಿನಗಳ ಹಿಂದ ನಟಿ ಕಂಗನಾ ರನೌತ್ ಅವರು 42 ವರ್ಷದ ನಟ ಹೃತಿಕ್ ಅವರು ತನ್ನ ಖಾಸಗಿ ಚಿತ್ರಗಳನ್ನು ವಿತರಿಸುತ್ತಿದ್ದಾರೆ ಎಂದು ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದರು. ಅಲ್ಲದೆ ಆರೋಪಿ ನಟನನ್ನು ಕೂಡಲೇ ಬಂಧಿಸುವಂತೆ ಮನವಿ ಮಾಡಿದ್ದರು.
ಕೆಲವು ದಿನಗಳ ಹಿಂದೆ ತಮ್ಮ ಅಫೇರ್ ಬಗ್ಗೆ ಪರಸ್ಪರ ಲೀಗಲ್ ನೋಟಿಸ್‌ ಕೊಟ್ಟುಕೊಂಡಿದ್ದ ಬಾಲಿವುಡ್ ತಾರೆಯರು, ತನಗೆ ಹೃತಿಕ್ ಜತೆ ಅಫೇರ್ ಇದ್ದದ್ದು ನಿಜ ಎಂದು ಸಂದರ್ಶನದಲ್ಲಿ ಹೇಳಿದ್ದ ಕಂಗನಾ ತಮ್ಮ ಹೇಳಿಕೆ ವಾಪಸ್ ಪಡೆಯುವಂತೆ ಹೃತಿಕ್ ನೋಟಿಸ್ ನೀಡಿದ್ದರು. ಇದಕ್ಕೆ ಪ್ರತಿಯಾಗಿ ಕಂಗನಾ ಸಹ ಲೀಗಲ್ ನೋಟಿಸ್ ಕಳುಹಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಕಾರ್ಮಿಕರ ಆರೋಗ್ಯ ತಪಾಸಣೆ ಹೆಸರಲ್ಲಿ 800 ಕೋಟಿ ರೂ. ಲೂಟಿ; ಸಂತೋಷ್ ಲಾಡ್ ರಾಜೀನಾಮೆಗೆ ಆರಗ ಜ್ಞಾನೇಂದ್ರ ಆಗ್ರಹ

ಹೆನ್ರಿ ಕಗನ್, ಕೆನ್ಸೊ ಸೊವೈಗೆ 2026ರ ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿ

'ನಾನು ಕ್ಯಾಬ್‌ನಲ್ಲಿ ಓಡಾಡೋ ಹುಡುಗಿ ಕಣ್ರೋ.. ಹೋಗ್ಲಿ ಪಾಪ ಅಂತಾ ಬಸ್`ನಲ್ಲಿ ಬಂದೆ': MTC ಬಸ್‌ನಲ್ಲಿ ಕುಡಿದ ಮತ್ತಿನಲ್ಲಿ ಯುವತಿ ರಂಪಾಟ, Video ವೈರಲ್