ಸಂಜಯ್ ದತ್ ಇನ್ಮುಂದೆ ಗಾಂಧೀಗಿರಿ ಮಾಡಬೇಕು: ಶತ್ರುಘ್ನ ಸಿನ್ಹಾ
ನಟ ಸಂಜಯ್ ದತ್ ಜೈಲಿನಿಂದ ಬಿಡುಗಡೆಯಾಗಿರುವುದಕ್ಕೆ ಸಂತಸ ವ್ಯಕ್ತಪಡಿಸಿರುವ ಹಿರಿಯ ನಟ ಹಾಗೂ ಬಿಜೆಪಿ ಮುಖಂಡ ಶತ್ರುಘ್ನ ಸಿನ್ಹಾ ಅವರು ಇನ್ನು...
ಮುಂಬೈ: ನಟ ಸಂಜಯ್ ದತ್ ಜೈಲಿನಿಂದ ಬಿಡುಗಡೆಯಾಗಿರುವುದಕ್ಕೆ ಸಂತಸ ವ್ಯಕ್ತಪಡಿಸಿರುವ ಹಿರಿಯ ನಟ ಹಾಗೂ ಬಿಜೆಪಿ ಮುಖಂಡ ಶತ್ರುಘ್ನ ಸಿನ್ಹಾ ಅವರು ಇನ್ನು ಮುಂದೆ ಸಂಜಯ್ ದತ್ ಲಗೇ ರಹೋ ಮುನ್ನಬಾಯಿ ರೀತಿ ಗಾಂಧೀಗಿರಿ ಮಾಡಬೇಕು ಎಂದು ಹೇಳಿದ್ದಾರೆ.
ಯೆರವಾಡ ಸೆಂಟ್ರಲ್ ಜೈಲಿನಿಂದ ಸಂಜಯ್ ದತ್ ಬಿಡುಗಡೆಗಾಗಿ ಕುಟುಂಬಸ್ಥರು ಹಾಗೂ ಸ್ನೇಹಿತರು ಎದುರು ನೋಡುತ್ತಿದ್ದರು ಎಂದು ಶತ್ರುಘ್ನ ಸಿನ್ಹಾ ಟ್ವೀಟಿಸಿದ್ದಾರೆ.
1993ರ ಮಾರ್ಚ್ 12ರಂದು ಮುಂಬೈನಲ್ಲಿ ನಡೆದ ಸರಣಿ ಬಾಂಬ್ ಸ್ಫೋಟ ಪ್ರಕರಣದಲ್ಲಿ ಅಪರಾಧಿಯಾಗಿದ್ದ 56 ವರ್ಷ ವಯಸ್ಸಿನ ಸಂಜಯ್ ದತ್ ಅವರು 42 ತಿಂಗಳು ಶಿಕ್ಷೆ ಅನುಭವಿಸಿದ್ದು, ಸನ್ನಡತೆ ಆಧಾರದ ಮೇಲೆ ಜೈಲಿನಿಂದ ಬಿಡುಗಡೆಗೊಂಡಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.