ಶಾರೂಖ್ ಖಾನ್ 
ಬಾಲಿವುಡ್

ಅಭಿವ್ಯಕ್ತಿ ಸ್ವಾತಂತ್ರ್ಯ ಎಂದರೇ ಮೌನವಾಗಿರುವುದು: ಶಾರೂಖ್ ಖಾನ್

ಅಸಹಿಷ್ಣುತೆ ಕುರಿತು ಹೇಳಿಕೆ ನೀಡಿ ಕಳೆದ ವರ್ಷ ದೇಶದಲ್ಲಿ ಬಿರುಗಾಳಿ ಎಬ್ಬಿಸಿದ್ದ ಬಾಲಿವುಡ್‌ ನಟ ಶಾರುಖ್‌ ಖಾನ್‌ ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ...

ಮುಂಬಯಿ: ಅಸಹಿಷ್ಣುತೆ ಕುರಿತು ಹೇಳಿಕೆ ನೀಡಿ ಕಳೆದ ವರ್ಷ ದೇಶದಲ್ಲಿ ಬಿರುಗಾಳಿ ಎಬ್ಬಿಸಿದ್ದ ಬಾಲಿವುಡ್‌ ನಟ ಶಾರುಖ್‌ ಖಾನ್‌ ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

'ಫ್ಯಾನ್‌' ಚಿತ್ರದ ಟ್ರೇಲರ್‌ ಬಿಡುಗಡೆ ಸಮಾರಂಭದಲ್ಲಿ ಶಾರುಖ್‌ ಬಹಳ ಎಚ್ಚರಿಕೆಯಿಂದ ಮಾತನಾಡಿದ್ದಾರೆ.ಅಸಹಿಷ್ಣುತೆ ಕುರಿತು ಹೇಳಿಕೆ ನೀಡಿದ ನಂತರದ ಅನುಭವ ಹೇಗಿತ್ತು ಎಂದು ಅವರನ್ನು ಪ್ರಶ್ನಿಸಿದಾಗ, 'ಈ ಬಗ್ಗೆ ನಾನು ಮಾತನಾಡುವುದಿಲ್ಲ. ಮೌನವಾಗಿ ಇರುವುದೂ ಅಭಿವ್ಯಕ್ತಿ ಸ್ವಾತಂತ್ರ್ಯ,' ಎಂದಿದ್ದಾರೆ.

ಕಳೆದ ವರ್ಷ ನವೆಂಬರ್‌ನಲ್ಲಿ 50ನೇ ವರ್ಷದ ಹುಟ್ಟುಹಬ್ಬ ಆಚರಿಸಿದ ನಟ,'ದೇಶದಲ್ಲಿ ಅಸಹಿಷ್ಣುತೆ ಮಿತಿ ಮೀರಿದೆ. ಅಸಹಿಷ್ಣುತೆ ಹೆಚ್ಚುತ್ತಲೇ ಇದೆ ಎಂಬ ಭಾವನೆ ಮೂಡಿದೆ,'ಎಂದಿದ್ದರು. ಈ ಹೇಳಿಕೆ ಸಾಕಷ್ಟು ವಿವಾದಕ್ಕೆ ಗುರಿಯಾಗಿತ್ತು. ಬಿಜೆಪಿಯ ಹಲವು ಸದಸ್ಯರು ಹೇಳಿಕೆಯನ್ನು ಕಟುವಾಗಿ ಟೀಕಿಸಿದ್ದರು. ನಟನ 'ದಿಲ್‌ವಾಲೆ' ಚಿತ್ರಕ್ಕೂ ಪ್ರತಿಭಟನೆಯ ಬಿಸಿ ತಟ್ಟಿತ್ತು.


Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ

Sting operation ಮೂಲಕ ನಿಮ್ಮನ್ನು ಸಿಲುಕಿಸಲು ಯತ್ನಿಸಿರುವುದು ನಿಜವೇ ಆಗಿದ್ದರೆ ತನಿಖೆಗೆ ಆದೇಶಿಸಿ: ಸಿಎಂ ಡಿಕೆ.ಶಿವಕುಮಾರ್'ಗೆ HDK ಸವಾಲು

ಮತ ಕಳ್ಳತನದಿಂದಲೇ ಮೋದಿ ಪ್ರಧಾನಿಯಾಗಿದ್ದು, ಗೆಲ್ಲಲಾಗದ ರಾಜ್ಯಗಳಲ್ಲೂ BJP ಗೆಲುವು: ಅಭಿಜೀತ್ ದೀಪ್ಕೆ

ರಾಜ್ಯದ ಬಾಕಿ ಹಣದ ಬಗ್ಗೆ ನಿರ್ಮಲಾ ಸೀತಾರಾಮನ್ ಜೊತೆ ಚರ್ಚೆ: GST ಮಂಡಳಿ ಸಭೆ ಬಳಿಕ CM ಡಿಕೆ.ಶಿವಕುಮಾರ್ ಹರ್ಷ

ಉತ್ತರ ಭಾರತ ವ್ಯಕ್ತಿಯಿಂದ ಡಿಕೆಶಿ ಸಿಲುಕಿಸಲು ಯತ್ನ: ಸಚಿವ ಸತೀಶ್ ಜಾರಕಿಹೊಳಿ