3ನೇ ಬಾರಿಯೂ ಮಹಿಳಾ ಆಯೋಗದ ವಿಚಾರಣೆಯಿಂದ ಸಲ್ಲು ಎಸ್ಕೇಪ್: ಪತ್ರ ರವಾನೆ
3 ನೇ ಬಾರಿಯೂ ಖುದ್ದು ವಿಚಾರಣೆಗೆ ಹಾಜರಾಗದ ಸಲ್ಮಾನ್ ಆಯೋಗಕ್ಕೆ ಪತ್ರವೊಂದನ್ನು ಕಳುಹಿಸಿದ್ದಾರೆ. ಪತ್ರದಲ್ಲಿ ಏನು ತಿಳಿಸಿದ್ದಾರೆ ಎಂಬ ಅಂಶದ ಬಗ್ಗೆ ಈಗಲೇ ಏನು ...
: ಅತ್ಯಾಚಾರಕ್ಕೊಳಗಾದ ಮಹಿಳೆಯಂತಾಗಿದ್ದೆ ಹೇಳಿಕೆಗೆ ಸಂಬಂಧಿಸಿದಂತೆ ನಟ ಸಲ್ಮಾನ್ ಖಾನ್ ಅವರು ಮಹಾರಾಷ್ಟ್ರ ರಾಜ್ಯ ಮಹಿಳಾ ಆಯೋಗದ ಮುಂದೆ ಸತತ ಮೂರನೇ ಬಾರಿಯೂ ವಿಚಾರಣೆಗೆ ಹಾಜರಾಗಲಿಲ್ಲ.
3 ನೇ ಬಾರಿಯೂ ಖುದ್ದು ವಿಚಾರಣೆಗೆ ಹಾಜರಾಗದ ಸಲ್ಮಾನ್ ಆಯೋಗಕ್ಕೆ ಪತ್ರವೊಂದನ್ನು ಕಳುಹಿಸಿದ್ದಾರೆ. ಪತ್ರದಲ್ಲಿ ಏನು ತಿಳಿಸಿದ್ದಾರೆ ಎಂಬ ಅಂಶದ ಬಗ್ಗೆ ಈಗಲೇ ಏನು ಹೇಳಲಾಗದು. ಈ ಹಂತದಲ್ಲಿ ಪತ್ರದಲ್ಲಿ ಏನಿದೆ ಎಂಬುದನ್ನು ಬಹಿರಗಂ ಪಡಿಸಲಾಗದು ಎಂದು ಮಹಾರಾಷ್ಟ್ರ ಮಹಿಳಾ ಆಯೋಗದ ಅಧ್ಯಕ್ಷೆ ವಿಜಯ್ ರಾಹತ್ಕರ್ ಹೇಳಿದ್ದಾರೆ.
ಸಲ್ಮಾನ್ ಬರೆದಿರುವ ಪತ್ರವನ್ನು ಆಯೋಗದ ಕಾನೂನು ಇಲಾಖೆಗೆ ಕಳುಹಿಸಿ, ಮುಂದಿನ ಕ್ರಮದ ಬಗ್ಗೆ ತೀರ್ಮಾನಿಸಲಾಗುವುದು ರಾಹತ್ಕರ್ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಸುಲ್ತಾನ್ ಸಿನಿಮಾದ ಚಿತ್ರೀಕರಣದ ನಂತರ ನಾನು ಅತ್ಯಾಚಾರಕ್ಕೊಳಗಾದ ಮಹಿಳೆಯಂತಾಗುತ್ತಿದ್ದೆ ಎಂದು ಹೇಳಿಕೆ ನೀಡುವ ಮೂಲಕ ತೀವ್ರ ವಿವಾದಕ್ಕೆ ಗುರಿಯಾಗಿದ್ದ ಸಲ್ಮಾನ್ಗೆ ಆಯೋಗ ವಿಚಾರಣೆಗೆ ಹಾಜರಾಗಲು ಮೂರು ಬಾರಿ ನೋಟಿಸ್ ಜಾರಿ ಮಾಡಿತ್ತು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.