ಉಡ್ತಾ ಪಂಜಾಬ್ 
ಬಾಲಿವುಡ್

ಉಡ್ತಾ ಪಂಜಾಬ್ ಕಮಾಲ್: ಮೊದಲ ದಿನವೇ 10.5 ಕೋಟಿ ರು ಕಲೆಕ್ಷನ್

ದೇಶಾದ್ಯಂತ ಭಾರಿ ಚರ್ಚೆಗೆ ಕಾರಣವಾಗಿದ್ದ ಉಡ್ತಾ ಪಂಜಾಬ್‌ ಹಿಂದಿ ಚಿತ್ರಕ್ಕೆ ಉತ್ತರ ಭಾರತದಲ್ಲಿ ಉತ್ತಮ ಪ್ರತಿಕ್ರಿಯೆ ಕಂಡುಬಂದಿದೆ. ಬಿಡುಗಡೆಯಾದ ಮೂರು ..

ಮುಂಬಯಿ: ದೇಶಾದ್ಯಂತ ಭಾರಿ ಚರ್ಚೆಗೆ ಕಾರಣವಾಗಿದ್ದ ಉಡ್ತಾ ಪಂಜಾಬ್‌ ಹಿಂದಿ ಚಿತ್ರಕ್ಕೆ ಉತ್ತರ ಭಾರತದಲ್ಲಿ ಉತ್ತಮ ಪ್ರತಿಕ್ರಿಯೆ ಕಂಡುಬಂದಿದೆ. ಬಿಡುಗಡೆಯಾದ ಮೂರು ದಿನಗಳಲ್ಲೇ 10.5 ಕೋಟಿ ರೂ. ಕಲೆಕ್ಷನ್ ಆಗಿದೆ.

ದೆಹಲಿ, ರಾಜಸ್ಥಾನ, ಗುಜರಾತ್‌ನಲ್ಲಿ ಒಳ್ಳೆಯ ಪ್ರತಿಕ್ರಿಯೆ ಕಂಡುಬಂದಿದೆ. ಆದರೆ ಅಲ್ಲಿಕಂಡುಬಂದಂತಹ ಉತ್ಸಾಹದ ಪ್ರತಿಕ್ರಿಯೆ ದಕ್ಷಿಣ ಮತ್ತು ಈಶಾನ್ಯ ಪ್ರದೇಶದಲ್ಲಿ ಕಂಡುಬಂದಿಲ್ಲ. ಪೂರ್ವ ಪ್ರಾಂತ್ಯದ ಭಾಗದಲ್ಲಿ ಜನಪ್ರಿಯತೆ ಪಡೆಯುವಲ್ಲಿ ವಿಫ‌ಲವಾಗಿದೆ ಎಂದು ಚಿತ್ರ ಪ್ರದರ್ಶಕ ರಾಜೇಶ್‌ ತಡಾನಿ ಹೇಳಿದ್ದಾರೆ.

ಬಿಡುಗಡೆಗೂ ಮುನ್ನವೆ ಕೇಂದ್ರ ಸೆನ್ಸಾರ್ ಮಂಡಳಿ ಹಲವಾರು ದೃಶ್ಯಾವಳಿಗಳನ್ನು ಕಟ್‌ ಮಾಡಿ ಎಲ್ಲರ ಗಮನ ಸೆಳೆದಿತ್ತು. ಮಲ್ಟಿಪ್ಲೆಕ್ಸ್‌ ಚಿತ್ರಮಂದಿರಗಳಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಏಕ ತೆರೆಯ ಚಿತ್ರಮಂದಿರಗಳಲ್ಲಿ ಜನರನ್ನು ಸೆಳೆಯುವಲ್ಲಿ ವಿಫ‌ಲವಾಗಿದೆ. ಮೊದಲ ಪ್ರದರ್ಶನದಲ್ಲಿ ಅಷ್ಟು ಉತ್ತಮ ಪ್ರತಿಕ್ರಿಯೆ ದೊರೆತಿರಲಿಲ್ಲ, ನಂತರದ ಪ್ರದರ್ಶನಳಲ್ಲಿ ಚಿತ್ರಕ್ಕೆ ಉತ್ತಮ ರೆಸ್ಪಾನ್ಸ್ ಸಿಕ್ಕಿದೆ ಎಂದು ಪಂಜಾಬ್ ನ ವಿತರಕರೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ

'ಆಶ್ರಮಕ್ಕೆ ಬರಲು ಹಣ ಪಡೆದ ಕೊಹ್ಲಿ' ಆರೋಪ: ಉಲ್ಟಾ ಹೊಡೆದ Falahari Maharaj, ಕ್ಷಮೆಯಾಚನೆ! video

26 ಸೆಕೆಂಡ್ ನಲ್ಲೇ ಗ್ರೇಟ್ ಎಸ್ಕೇಪ್; ಮೃಗಾಲಯ ವೀಕ್ಷಣೆಗೆ ಬಂದ ಜೋಡಿ, ಗಂಡ ಬೈಕ್ ಪಾರ್ಕ್ ಮಾಡೋ ಗ್ಯಾಪಲ್ಲಿ 'ಲವರ್ ಜೊತೆ ಪತ್ನಿ ಪರಾರಿ'! Video ವೈರಲ್!

ಅ.10ರಂದು CJP ಪ್ರತಿಭಟನೆ ಹಿನ್ನೆಲೆ ದೆಹಲಿಗೆ ತೆರಳುವ ಹಲವು ರೈಲುಗಳು ರದ್ದು, ಪ್ರಯಾಣಿಕರಿಗೆ ಸಂಕಷ್ಟ!