ಕಂಗನಾ ರಣಾವತ್, ಸಲ್ಮಾನ್ ಖಾನ್, 
ಬಾಲಿವುಡ್

ಸಲ್ಮಾನ್ ಖಾನ್ ಹೇಳಿಕೆ ಭಯಾನಕ ಮತ್ತು ಅಸಂವೇದಿ: ಕಂಗನಾ ರಣಾವತ್ ಕಿಡಿ

ಅತ್ಯಾಚಾರ ಕುರಿತಂತೆ ಬಾಲಿವುಡ್ ನಟ ಸಲ್ಮಾನ್ ಖಾನ್ ಹೇಳಿಕೆಯನ್ನು ರಾಷ್ಟ್ರ ಪ್ರಶಸ್ತಿ ವಿಜೇತೆ ನಟಿ ಕಂಗನಾ ರಣಾವತ್ ಟೀಕಿಸಿದ್ದಾರೆ...

ಮುಂಬೈ: ಅತ್ಯಾಚಾರ ಕುರಿತಂತೆ ಬಾಲಿವುಡ್ ನಟ ಸಲ್ಮಾನ್ ಖಾನ್ ಹೇಳಿಕೆಯನ್ನು ರಾಷ್ಟ್ರ ಪ್ರಶಸ್ತಿ ವಿಜೇತೆ ನಟಿ ಕಂಗನಾ ರಣಾವತ್ ಟೀಕಿಸಿದ್ದಾರೆ.

ಸಲ್ಮಾನ್ ಖಾನ್ ಹೇಳಿಕೆ ಅಸಂವೇದನರಹಿತವಾಗಿದೆ ಎಂದು ಟೀಕಿಸಿರುವ ಕಂಗನಾ ರಣಾವತ್, ಸಲ್ಮಾನ್ ನಂತ ನಟರು ಈ ರೀತಿ ಹೇಳಿಕೆ ನೀಡಿರುವುದು ದುರಾದುಷ್ಟಕರ. ಇಂತ ಹೇಳಿಕೆ ನೀಡುವ ಮುನ್ನ ಸಲ್ಮಾನ್ ಖಾನ್ ಯೋಚಿಸಬೇಕಿತ್ತು ಎಂದು ಹೇಳಿದ್ದಾರೆ.

ಸಲ್ಮಾನ್ ಹೇಳಿಕೆ ಕುರಿತಂತೆ ಬಾಲಿವುಡ್ ನ ಹಲವು ಸ್ಟಾರ್ ಗಳು ತೀವ್ರವಾಗಿ ಖಂಡಿಸಿದ್ದು, ಸಮಾಜ ಇಂತ ಮಹಿಳಾ ವಿರೋಧಿ ಹೇಳಿಕೆಗಳ ವಿರುದ್ಧ ಒಟ್ಟಾಗಿ ನಿಲ್ಲಬೇಕು. ಇಂತಹ ಹೇಳಿಕೆಯಿಂದ ಒಬ್ಬ ವ್ಯಕ್ತಿಗಲ್ಲ ಇಡೀ ಸಮಾಜಕ್ಕೆ ಅಪಮಾನವಾಗಿದೆ ಎಂದು ಕಂಗನಾ ಹೇಳಿದ್ದಾರೆ.

ಬಾಲಿವುಡ್ ನ ಬಹುನಿರೀಕ್ಷಿತ ಸುಲ್ತಾನ್ ಚಿತ್ರದ ಚಿತ್ರೀಕರಣದ ಸಂದರ್ಭದಲ್ಲಿ ಶೂಟಿಂಗ್ ಮುಗಿದ ಬಳಿಕ ನನ್ನ ಸ್ಥಿತಿ ಅತ್ಯಾಚಾರಕ್ಕೊಳಗಾದ ಮಹಿಳೆಯಂತಾಗುತ್ತಿತ್ತು ಎಂದು ಸಲ್ಮಾನ್ ಖಾನ್ ಹೇಳಿಕೆ ನೀಡಿದ್ದರು. ಈ ಹೇಳಿಕೆ ಇದೀಗ ತೀವ್ರ ವಿವಾದಕ್ಕೆ ಕಾರಣವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಚೀನಾ ಏಕಪಕ್ಷೀಯ ನೀತಿಗೆ ಬ್ರೇಕ್‌: 'Quad' ಸಭೆ ನಡುವೆ ಮಹತ್ವದ ಖನಿಜ ಒಪ್ಪಂದಕ್ಕೆ ಭಾರತ-ಅಮೆರಿಕಾ ಸಹಿ..!

Video: 'ಕಾಂತಾರ' ಕೆಂಗಣ್ಣಿಗೆ ಗುರಿ, ಬಾಲಿವುಡ್​ನಿಂದ ಬ್ಯಾನ್; ಚಾಮುಂಡೇಶ್ವರಿಗೆ ತಲೆಬಾಗಿ ಕ್ಷಮೆಯಾಚಿಸಿದ ರಣವೀರ್ ಸಿಂಗ್!

ಚೀನಾಗೆ ಕೌಂಟರ್: ಇಂಡೋ-ಪೆಸಿಫಿಕ್‌ನಲ್ಲಿ ಭದ್ರತಾ ಸಹಕಾರ ಹೆಚ್ಚಿಸಲು 'Quad' ಮಹತ್ವದ ತೀರ್ಮಾನ, ಹೊಸ ಕಾರ್ಯಯೋಜನೆ ಘೋಷಿಸಿದ ಮಾರ್ಕೊ ರುಬಿಯೋ..!

ಮಾಜಿ ಸಿಎಂ ಮಮತಾ ಬ್ಯಾನರ್ಜಿಗೆ ಮತ್ತೊಂದು ಶಾಕ್; 12 TMC ಸಂಸದರು BJP ಸೇರ್ಪಡೆ!

ಥೇಟ್ 'ಡೊನಾಲ್ಡ್ ಟ್ರಂಪ್' ರೀತಿಯ ಅಪರೂಪದ ಎಮ್ಮೆ! ನೋಡಲು ಮುಗಿಬಿದ್ದ ಜನರು, Video ವೈರಲ್

SCROLL FOR NEXT