ಶಾರುಖ್ ಖಾನ್ , ಅಜಯ್ ದೇವ್ ಗನ್ , ಗೋವಿಂದ, ಅರ್ ಬಾಜ್ ಖಾನ್ 
ಬಾಲಿವುಡ್

ಪಾನ್‌ಮಸಾಲ ಜಾಹೀರಾತಿನಲ್ಲಿ ನಟಿಸಬೇಡಿ ಎಂದು ನಿಮ್ಮ ಪತಿಗೆ ಹೇಳಿ

ಬಾಲಿವುಡ್ ನಟ ಶಾರುಖ್ ಖಾನ್ ಸೇರಿದಂತೆ ಇತರ ನಾಲ್ವರು ನಟರ ಹೆಂಡತಿಯರಿಗೆ ದೆಹಲಿಯ ಆಮ್ ಆದ್ಮಿ ಸರ್ಕಾರ ಪತ್ರವೊಂದನ್ನು ಕಳುಹಿಸಿದೆ. ಪಾನ್...

ನವದೆಹಲಿ: ಬಾಲಿವುಡ್ ನಟ ಶಾರುಖ್ ಖಾನ್ ಸೇರಿದಂತೆ ಇತರ ನಾಲ್ವರು ನಟರ ಹೆಂಡತಿಯರಿಗೆ ದೆಹಲಿಯ ಆಮ್ ಆದ್ಮಿ ಸರ್ಕಾರ ಪತ್ರವೊಂದನ್ನು ಕಳುಹಿಸಿದೆ. ಪಾನ್ ಮಸಾಲ (ಹೊಗೆಸೊಪ್ಪು ) ಉತ್ಪನ್ನಗಳು ಕ್ಯಾನ್ಸರ್ ಗೆ ಕಾರಣವಾಗುತ್ತದೆ ಎಂಬ ವಿಷಯವನ್ನು ಉಲ್ಲೇಖಿಸಿ, ಇಂಥಾ ಜಾಹೀರಾತುಗಳಲ್ಲಿ ಕಾಣಿಸಿಕೊಳ್ಳದಂತೆ ನಿಮ್ಮ ಪತಿಯಲ್ಲಿ ಹೇಳಿ ಎಂದು ಸರ್ಕಾರ ಈ ಪತ್ರದಲ್ಲಿ ವಿನಂತಿಸಿದೆ. 
ಇಂಥಾ ಜಾಹೀರಾತುಗಳಲ್ಲಿ ನಟಿಸದಂತೆ ನಟರಲ್ಲಿ ಬಿನ್ನವಿಸಿಕೊಂಡಿದ್ದರೂ ಅವರ ಕಡೆಯಿಂದ ಯಾವುದೇ ಪ್ರತಿಕ್ರಿಯೆ ಸಿಗದೇ ಇರುವ ಕಾರಣ ನಟರ ಪತ್ನಿಗೆ ಪತ್ರಗಳನ್ನು ಕಳುಹಿಸಲಾಗಿದೆ.
ಅಜಯ್ ದೇವಗನ್, ಅರ್‌ಬಾಜ್ ಖಾನ್, ಶಾರುಖ್ ಖಾನ್ ಮತ್ತು ಗೋವಿಂದ ಅವರ ಪತ್ನಿಯರಿಗೆ ದೆಹಲಿ ರಾಜ್ಯ ಆರೋಗ್ಯ ಸಚಿವಾಲಯ ಈ ರೀತಿಯ ಪತ್ರವನ್ನು ಕಳುಹಿಸಿದೆ. ಸಾರ್ವಜನಿಕರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಶಾರುಖ್ ಖಾನ್ ಅವರನ್ನು ಪಾನ್ ಮಸಾಲ ಜಾಹೀರಾತಿನಲ್ಲಿ ನಟಿಸಬಾರದೆಂದು ನೀವು ಅವರಲ್ಲಿ ಹೇಳಬೇಕೆಂದು ನಾವು ಈ ಮೂಲಕ ವಿನಂತಿಸುತ್ತೇವೆ ಎಂದು ಶಾರುಖ್ ಖಾನ್ ಪತ್ನಿ ಗೌರಿ ಖಾನ್ ಅವರಿಗೆ ಕಳುಹಿಸಿದ ಪತ್ರದಲ್ಲಿ ಹೇಳಲಾಗಿದೆ.
ಈ ಹಿಂದೆ ಇಂಥಾ ಜಾಹೀರಾತುಗಳಲ್ಲಿ ನಟಿಸಬೇಡಿ ಎಂದು ಶಾರುಖ್‌ಖಾನ್ ಅವರಿಗೆ ಪತ್ರ ಕಳಿಸಿದ್ದರೂ, ಶಾರುಖ್ ಇದನ್ನು ಲೆಕ್ಕಿಸದೆ ಇಂಥಾ ಜಾಹೀರಾತುಗಳಲ್ಲಿ ನಟನೆ ಮುಂದುವರಿಸಿದ್ದರು ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ಇದೇ ರೀತಿಯ ಒಕ್ಕಣೆಯಿರುವ ಪತ್ರವನ್ನೇ ಇತರ ನಟರ ಪತ್ನಿಯರಿಗೂ ಕಳುಹಿಸಲಾಗಿದೆ ಎಂದು ದೆಹಲಿ ಸರ್ಕಾರ ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

'ಹನೂರು ಎನ್‌ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ

SIR ವೇಳೆ 1.08 ಕೋಟಿಗೂ ಅಧಿಕ ಮತದಾರರು ASDDO ಪಟ್ಟಿಗೆ: ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಿಸಬೇಕು- CECಗೆ ಸಿಎಂ ಶಿವಕುಮಾರ್ ಪತ್ರ!