ಸಂಜಯ್ ದತ್ 
ಬಾಲಿವುಡ್

ಬಿಜೆಪಿ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡ ಬಾಲಿವುಡ್ ನಟ ಸಂಜಯ್ ದತ್

ಬಾಲಿವುಡ್ ನಟ ಸಂಜಯ್ ದತ್ ಅವರು ಜೈಲಿನಿಂದ ಬಿಡುಗಡೆಯಾದ ನಂತರ ಇದೇ ಮೊದಲ ಬಾರಿಗೆ ಸಾರ್ವಜನಿಕವಾಗಿ, ಅದೂ ತನ್ನ ಬಿಡುಗಡೆಯನ್ನೇ ವಿರೋಧಿಸುತ್ತಿದ್ದ...

ಮುಂಬೈ: ಬಾಲಿವುಡ್ ನಟ ಸಂಜಯ್ ದತ್ ಅವರು ಜೈಲಿನಿಂದ ಬಿಡುಗಡೆಯಾದ ನಂತರ ಇದೇ ಮೊದಲ ಬಾರಿಗೆ ಸಾರ್ವಜನಿಕವಾಗಿ, ಅದೂ ತನ್ನ ಬಿಡುಗಡೆಯನ್ನೇ ವಿರೋಧಿಸುತ್ತಿದ್ದ ಬಿಜೆಪಿ ವೇದಿಕೆಯಲ್ಲಿ ಕಾಣಿಸಿಕೊಳ್ಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಅಲ್ಲದೆ ಬಿಜೆಪಿಯನ್ನು ಹಾಡಿ ಹೊಗಳಿದ್ದಾರೆ.
ಸಂಜಯ್ ದತ್ ಅವರು ಕಳೆದ ಫೆಬ್ರವರಿಯಲ್ಲಿ ಜೈಲಿನಿಂದ ಬಿಡುಗಡೆಯಾದ ನಂತರ ಸಾರ್ವಜನಿಕ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದು ಇದೇ ಮೊದಲು. ಹೀಗಾಗಿ ಎಲ್ಲರ ಕಣ್ಣು ನಟನ ಮೇಲೆ ನೆಟ್ಟಿತ್ತು. 
ಸಂಜಯ್ ದತ್ ಅವರು ಹಿಂದೆ ಪದೇಪದೆ ಪೆರೋಲ್ ಮೇಲೆ ಬಿಡುಗಡೆಯಾದಗಲ್ಲೆಲ್ಲ ಬಿಜೆಪಿ ನಾಯಕರಿಂದಲೇ ಟೀಕೆಗೆ ಗುರಿಯಾಗಿದ್ದರು. ಅವರ ಪೆರೋಲ್ ಅನ್ನು ವಿರೋಧಿಸಿದ್ದ ನಗರ ಬಿಜೆಪಿ ಅಧ್ಯಕ್ಷ ಆಶೀಶ್ ಶೆಲಾರ್ ಹಾಗೂ ಮೋಹಿತ್ ಖಾಂಬೋಜ್ ಆಯೋಜಿಸಿದ್ದ ಮಹಾರಾಷ್ಟ್ರ ದಿವಸ ಕಾರ್ಯಕ್ರಮದಲ್ಲಿ ಸಂಜಯ್ ದತ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.
ಈ ವೇಳೆ ಮಾತನಾಡಿದ ಬಾಲಿವುಡ್ ನಟ ಸಂಜಯ್ ದತ್, ಮಹಾರಾಷ್ಟ್ರದಲ್ಲಿ ಬಿಜೆಪಿ ಇನ್ನಷ್ಟು ಬಲಿಷ್ಠವಾಗಿ ಬೆಳೆಯಲಿ. ಮುಂಬರುವ ಚುನಾವಣೆಯಲ್ಲಿ ಇನ್ನಷ್ಟು ಸೀಟು ಗೆಲ್ಲುವಂತಾಗಲಿ ಎಂದು ಹಾರೈಸಿದರು.
ಮುಂಬೈ ಸರಣಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಐದು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿದ್ದ ಸಂಜಯ್ ದತ್ ಅವರು ಕಳೆದ ಫೆಬ್ರವರಿಯಲ್ಲಿ ಜೈಲಿನಿಂದ ಹೊರಬಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ನೇಪಾಳ-ಟಿಬೆಟ್ ಗಡಿಯಲ್ಲಿ ಭೀಕರ ಪ್ರವಾಹ: ಸಾವಿನ ಸಂಖ್ಯೆ 165ಕ್ಕೆ ಏರಿಕೆ; 300ಕ್ಕೂ ಹೆಚ್ಚು ಭಾರತೀಯರು ನಾಪತ್ತೆ

Toxic Box Office Collection: ಟಾಕ್ಸಿಕ್ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ? ಕನ್ನಡಕ್ಕಿಂತ ಹಿಂದಿಯಲ್ಲಿ ಡಬಲ್ ಗಳಿಕೆ!

ದೆಹಲಿ: ಫ್ರೆಂಡ್​ಶಿಪ್ ನಿರಕಾರಿಸಿದ್ದಕ್ಕೆ 21 ವರ್ಷದ ಮಾಡೆಲ್'ನನ್ನು ಆಕೆಯ ಮನೆಗೆ ನುಗ್ಗಿ ಹತ್ಯೆಗೈದು ಜಿಮ್ ಟ್ರೇನರ್!

ಅಸಮಾಧಾನ ತಣಿಸಲು CM ಡಿಕೆಶಿ ಆಪ್ತ ಶಾಸಕ ಆಸೀಫ್ ಸೇಠ್‌ಗೆ ‘ಬುಡಾ’ ಅಧ್ಯಕ್ಷ ಪಟ್ಟ

Iran ಸರ್ವೋಚ್ಚ ನಾಯಕ Mojtaba Khamenei ಸತ್ತಿಲ್ಲ, ಗಂಭೀರವಾಗಿ ಗಾಯಗೊಂಡಿದ್ದಾರೆ: ಹಳೇ Vidoe ಬಿಡುಗಡೆ ಬೆನ್ನಲ್ಲೇ ಅಸಲಿಯತ್ತು ಬಿಚ್ಚಿಟ್ಟ Donald Trump..!