ಪ್ರತ್ಯೂಷಾ ಬ್ಯಾನರ್ಜಿ ಮತ್ತು ರಾಹುಲ್ ರಾಜ್ ಸಿಂಗ್ 
ಬಾಲಿವುಡ್

ರಾಹುಲ್ ಸಿಂಗ್ ಜಾಮೀನು ರದ್ಧುಗೊಳಿಸುವಂತೆ ಸುಪ್ರೀಂ ಮೆಟ್ಟಿಲೇರಿದ ಪ್ರತ್ಯೂಷಾ ತಾಯಿ

ಕಿರುತೆರೆ ನಟಿ ಪ್ರತ್ಯೂಷಾ ಬ್ಯಾನರ್ಜಿ ಆತ್ಮಹತ್ಯೆ ಪ್ರಕರಣದಲ್ಲಿ ಆಕೆಯ ಸ್ನೇಹಿತ ರಾಹುಲ್ ರಾಜ್ ಸಿಂಗ್ ಗೆ ನೀಡಿರುವ ಜಾಮೀನನ್ನು ರದ್ದುಗೊಳಿಸಬೇಕೆಂದು, ಆಕೆಯ ತಾಯಿ...

ನವದೆಹಲಿ: ಕಿರುತೆರೆ ನಟಿ ಪ್ರತ್ಯೂಷಾ ಬ್ಯಾನರ್ಜಿ ಆತ್ಮಹತ್ಯೆ ಪ್ರಕರಣದಲ್ಲಿ ಆಕೆಯ ಸ್ನೇಹಿತ ರಾಹುಲ್ ರಾಜ್ ಸಿಂಗ್ ಗೆ ನೀಡಿರುವ ಜಾಮೀನನ್ನು ರದ್ದುಗೊಳಿಸಬೇಕೆಂದು, ಆಕೆಯ ತಾಯಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ.

ತಮ್ಮ ಮಗಳ ಮೃತ ದೇಹದ ಮೇಲೆ ಗಾಯದ ಗುರುತುಗಳಿದ್ದವು, ಇದು ಆಕೆಯ ಮೇಲೆ ಹಲ್ಲೆ ನಡೆಸಿರುವುದಕ್ಕೆ ಸಾಕ್ಷಿಯಾಗಿದೆ, ಹೀಗಾಗಿ ರಾಹುಲ್ ರಾಜ್ ಸಿಂಗ್  ಹೈಕೋರ್ಟ್ ನೀಡಿರುವ ಜಾಮೀನನ್ನು ರದ್ದುಗೊಳಿಸಬೇಕೆಂದು ಸೋಮ ಬ್ಯಾನರ್ಜಿ ಮನವಿ ಮಾಡಿದ್ದಾರೆ.

ತಮ್ಮ ಮಗಳು ಆತ್ಮಹತ್ಯೆ ಮಾಡಿಕೊಂಡಿಲ್ಲ, ಆಕೆಯನ್ನು ರಾಹುಲ್ ಕೊಲೆ ಮಾಡಿದ್ದಾನೆ. ಹೀಗಾಗಿ ಆತನನ್ನು ಪೊಲೀಸ್ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಬೇಕೆಂದು ಸೋಮ ಬ್ಯಾನರ್ಜಿ ಮನವಿಯಲ್ಲಿ ತಿಳಿಸಿದ್ದಾರೆ. ಏಪ್ರಿಲ್ 25 ರಂದು ಹೈಕೋರ್ಟ್ ರಾಹುಲ್ ರಾಜ್ ಸಿಂಗ್ ಗೆ ನಿರೀಕ್ಷಣಾ ಜಾಮೀನು ನೀಡಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್