ಹುತಾತ್ಮ ಯೋಧರಿಗೆ ನಮನ ಸಲ್ಲಿಸುತ್ತಿರುವ ಅಕ್ಷಯ್‌ ಕುಮಾರ್ 
ಬಾಲಿವುಡ್

ಯೋಧರೇ ನಮ್ಮ ನಿಜವಾದ ಹೀರೋಗಳು: ಅಕ್ಷಯ್‌ ಕುಮಾರ್‌

ಯೋಧರೇ ನಮ್ಮ ನಿಜವಾದ ಹೀರೋಗಳು ಎಂದು ಬಾಲಿವುಡ್ ಸೂಪರ್ ಸ್ಟಾರ್ ಅಕ್ಷಯ್ ಕುಮಾರ್ ಅವರು ಮಂಗಳವಾರ ಹೇಳಿದ್ದಾರೆ.

ಶ್ರೀನಗರ: ಯೋಧರೇ ನಮ್ಮ ನಿಜವಾದ ಹೀರೋಗಳು ಎಂದು ಬಾಲಿವುಡ್ ಸೂಪರ್ ಸ್ಟಾರ್ ಅಕ್ಷಯ್ ಕುಮಾರ್ ಅವರು ಮಂಗಳವಾರ ಹೇಳಿದ್ದಾರೆ.
ಇಂದು ಜಮ್ಮು ಮತ್ತು ಕಾಶ್ಮೀರದಲ್ಲಿ ಬಿಎಸ್ಎಫ್ ಶಿಬಿರಕ್ಕೆ ಭೇಟಿ ನೀಡಿ, ಇತ್ತೀಚಿನ ಕದನ ವಿಮಾರ ಉಲ್ಲಂಘನೆ ಮತ್ತು ಎನ್ ಕೌಂಟರ್ ನಲ್ಲಿ ಹುತಾತ್ಮರಾದ ಯೋಧರಿಗೆ ಗೌರವ ನಮನ ಸಲ್ಲಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮತನಾಡಿದ ಅಕ್ಷಯ್ ಕುಮಾರ್, ನಾನು ರೀಲ್ ಹೀರೋ, ನೀವು ನಿಜವಾದ ಹೀರೋಗಳು. ನನಗೆ ಇಲ್ಲಿ ಬಂದು ನಿಮ್ಮನ್ನು ಭೇಟಿ ಮಾಡಲು ಅವಕಾಶ ಸಿಕ್ಕಿದ್ದು ನನ್ನ ಅದೃಷ್ಟ ಎಂದರು.
ಹುತಾತ್ಮ ಯೋಧರ ಕುಟುಂಬಗಳಿಗೆ 9 ಲಕ್ಷ ಹಾಗೂ ಸೇನೆ 80 ಲಕ್ಷ ದೇಣಿಗೆ ನೀಡಿರುವ ಅಕ್ಷಯ್ ಅವರು, ಬಹಳಷ್ಟು ಜನಕ್ಕೆ ಸೇನೆಗೆ ನೆರವು ನೀಡಬೇಕು ಎಂಬ ಹಂಬಲ ಇರುತ್ತದೆ. ಆದರೆ ಏನು ಮಾಡಬೇಕು ಎಂಬುದು ಅವರಿಗೆ ತಿಳಿಯುವುದಿಲ್ಲ. ದೇಶದ ಯೋಧರ ಬಗ್ಗೆ ನಮಗೆ ಹೆಮ್ಮೆ ಇದೆ. ಅವರ ಜೊತೆ ನಾವಿದ್ದೇವೆ ಎಂದರು.
ಅಕ್ಷಯ್ ಕುಮಾರ್ ಅವರು ತಮ್ಮ ಮುಂಬರುವ ಚಿತ್ರದ ಚಿತ್ರೀಕರಣಕ್ಕಾಗಿ ಮಥುರಾಗೆ ಆಗಮಿಸಿದ್ದರು. ಈ ವೇಳೆ ಬಿಡುವು ಮಾಡಿಕೊಂಡು ತಮ್ಮ ಸ್ವಂತ ವೆಚ್ಚದಲ್ಲಿ ಹೆಲಿಕಾಪ್ಟರ್ ಬಿಎಸ್ ಎಫ್ ಶಿಬಿರಕ್ಕೆ ಭೇಟಿ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!