'ಡೋಂಗಿ ಬಾಬಾ ಅಣ್ಣಾ' ಎಂದು ಟ್ವೀಟಿಸಿ ವಿವಾದಕ್ಕೀಡಾದ ಗಾಯಕ ಅಭಿಜಿತ್
ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಅವರನ್ನು ಗಾಯಕ ಅಭಿಜಿತ್ ಭಟ್ಟಾಚಾರ್ಯ ಡೋಂಗಿ ಬಾಬಾ ಎಂದು ಟ್ವೀಟಿಸುವ ಮೂಲಕ ಹೊಸ ವಿವಾದ ಸೃಷ್ಟಿಸಿದ್ದಾರೆ...
ಮುಂಬೈ: ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಅವರನ್ನು ಗಾಯಕ ಅಭಿಜಿತ್ ಭಟ್ಟಾಚಾರ್ಯ ಡೋಂಗಿ ಬಾಬಾ ಎಂದು ಟ್ವೀಟಿಸುವ ಮೂಲಕ ಹೊಸ ವಿವಾದ ಸೃಷ್ಟಿಸಿದ್ದಾರೆ.
ಅಣ್ಣಾ ಹಜಾರೆ ಅವರ ಜೀವನಾಧಾರಿತ ಚಿತ್ರ ಅಣ್ಣಾ: ಕಿಷನ್ ಬಾಬುರಾವ್ ಹಜಾರೆ ಚಿತ್ರವನ್ನು ವೀಕ್ಷಿಸಿದ ಬಳಿಕ ಅಭಿಜಿತ್ ಈ ರೀತಿ ಟ್ವೀಟ್ ಮಾಡಿದ್ದು, ಅಭಿಜಿತ್ ಅವರ ಈ ಟ್ವೀಟ್ ಇದೀಗ ವ್ಯಾಪಕ ಟೀಕೆಗೆ ಗುರಿಯಾಗಿದೆ.
ಅಭಿಜಿತ್ ಭಟ್ಟಾಚಾರ್ಯ ಟ್ವೀಟ್ ನಲ್ಲಿ ಡೋಂಗಿ ಬಾಬಾ ಅಣ್ಣಾ ಬಿಡುಗಡೆಯಾಗಿದೆ. ಈ ವಾರ ತೆರೆಕಂಡ ಏಕಮೇವ ಚಿತ್ರ ಇದಾಗಿದ್ದು ಈ ಚಿತ್ರವನ್ನು ವೀಕ್ಷಿಸಲು ಅರವಿಂದ್ ಕೇಜ್ರಿವಾಲ್ ಸಹ ಹೋಗಿಲ್ಲ ಎಂದು ವ್ಯಂಗ್ಯ ಮಾಡಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.