ನಟಿ ಕಂಗನಾ ರಣಾವತ್ 
ಬಾಲಿವುಡ್

ಫ್ಯಾಶನ್-೨ ನಿರಾಕರಿಸಿದ ಕಂಗನಾ ರಣಾವತ್?

ಮೂಲಗಳ ಪ್ರಕಾರ ಇತ್ತೀಚೆಗಷ್ಟೇ ನಿರ್ದೇಶಕ ಮಧುರ್ ಭಂಡಾರ್ಕರ್ ಫ್ಯಾಷನ್-೨ ಸ್ಕ್ರಿಪ್ಟ್ ಹಿಡಿದು ನಟಿ ಕಂಗನಾ ರಣಾವತ್ ಅವರನ್ನು ಭೇಟಿ ಮಾಡಿದ್ದಾರೆ ಆದರೆ ಸ್ಕ್ರಿಪ್ಟ್ ತಮಗೆ ಹಿಡಿಸಿಲ್ಲ ಎಂದು ತಿಳಿಸಿರುವ ನಟಿ

ಮೂಲಗಳ ಪ್ರಕಾರ ಇತ್ತೀಚೆಗಷ್ಟೇ ನಿರ್ದೇಶಕ ಮಧುರ್ ಭಂಡಾರ್ಕರ್ ಫ್ಯಾಷನ್-೨ ಸ್ಕ್ರಿಪ್ಟ್ ಹಿಡಿದು ನಟಿ ಕಂಗನಾ ರಣಾವತ್ ಅವರನ್ನು ಭೇಟಿ ಮಾಡಿದ್ದಾರೆ ಆದರೆ ಸ್ಕ್ರಿಪ್ಟ್ ತಮಗೆ ಹಿಡಿಸಿಲ್ಲ ಎಂದು ತಿಳಿಸಿರುವ ನಟಿ ಸಿನೆಮಾದ ಭಾಗವಾಗಲು ನಿರಾಕರಿಸಿದ್ದಾರೆ ಎನ್ನಲಾಗಿದೆ. 
ಎರಡು ವರ್ಷಗಳ ಹಿಂದೆ ಭಂಡಾರ್ಕರ್ ಫ್ಯಾಷನ್ ಎರಡನೇ ಭಾಗ ನಿರ್ದೇಶಿಸಲು ಯೋಜನೆ ರೂಪಿಸುತ್ತಿದ್ದಾರೆ ಎಂದು ವರದಿಯಾಗಿತ್ತು ಮತ್ತು ರಾಷ್ಟ್ರ ಪ್ರಶಸ್ತಿ ವಿಜೇತ ನಟಿ ಅದರಲ್ಲಿ ನಟಿಸಲಿದ್ದಾರೆ ಎನ್ನಲಾಗಿತ್ತು. 
ಫ್ಯಾಷನ್ ಚಿತ್ರದಲ್ಲಿ ಪ್ರಿಯಾಂಕಾ ಚೋಪ್ರಾ ಮತ್ತು ಕಂಗನಾ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದರು. ಈ ಸಿನೆಮಾ ವಿಮರ್ಶಕರ ಮೆಚ್ಚುಗೆ ಗಳಿಸಿದ್ದಲ್ಲದೆ, ಬಾಕ್ಸ್ ಆಫಿಸ್ ನಲ್ಲಿ ಕೂಡ ಉತ್ತಮ ಗಳಿಕೆ ಕಂಡಿತ್ತು. 
ಈಗ ಕಂಗನಾ ಈ ಪಾತ್ರವನ್ನು ನಿರಾಕರಿಸಿದ್ದು, ಅದೇ ಪಾತ್ರಕ್ಕೆ ಭಂಡಾರ್ಕರ್ ಪ್ರಿಯಾಂಕಾ ಚೋಪ್ರಾ ಅವರ ಮೊರೆ ಹೋಗಲಿದ್ದಾರೆಯೇ ಎಂಬ ಪ್ರಶ್ನೆಗಳು ಬಾಲಿವುಡ್ ನಗರಿಯಲ್ಲಿ ಕೇಳಿಬರುತ್ತಿವೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ; ರಾಜ್ಯಸಭಾ ಸದಸ್ಯತ್ವ ನಿರಾಕರಣೆ

ವಿದಾಯದ ಕೊನೇ ಕ್ಷಣದಲ್ಲೂ Siddaramaiah ಮಹತ್ವದ ಕ್ರಮ: ಆಪ್ತ ಕಾರ್ಯದರ್ಶಿ, ವಿಶೇಷಾಧಿಕಾರಿ ವರ್ಗಾವಣೆ

Siddaramaiah Press Meet: 'ಹೈಕಮಾಂಡ್ ಆದೇಶದ ಮೇಲೆ ರಾಜಿನಾಮೆ ನೀಡಿದ್ದೇನೆ': ಸಿದ್ದರಾಮಯ್ಯ ವಿದಾಯದ ಮಾತು

Siddaramaiah ರಾಜಿನಾಮೆ: 'ನಾನು ಆ ಪಕ್ಷದಲ್ಲಿ ಇಲ್ಲದೆ ಇರಬಹುದು, ಆದರೆ ಅವರೊಂದಿಗಿನ ಒಡನಾಟ ಮರೆಯುವಂತದ್ದಲ್ಲ': BC ಪಾಟೀಲ್ ಭಾವುಕ

ಕಾಂಗ್ರೆಸ್ಸಿನ ಕುರ್ಚಿ ಕಚ್ಚಾಟದ ಪ್ರಹಸನ: ಕನ್ನಡಿಗರಿಗೆ ನಯಾಪೈಸೆ ಪ್ರಯೋಜನ ಇಲ್ಲ- ಬಿಜೆಪಿ

SCROLL FOR NEXT