ರಾಖಿ ಸಾವಂತ್ 
ಬಾಲಿವುಡ್

ಲೂಧಿಯಾನ ಕೋರ್ಟ್ ನಿಂದ ರಾಖಿ ಸಾವಂತ್'ಗೆ ಮತ್ತೆ ಬಂಧನ ವಾರಂಟ್

ಕೋರ್ಟ್ ವಿಚಾರಣೆಯಿಂದ ತಪ್ಪಿಸಿಕೊಳ್ಳುತ್ತಿರುವ ವಿವಾದಾತ್ಮಕ ನಟಿ ಬಾಲಿವುಡ್ ನಟಿ ರಾಖಿ ಸಾವಂತ್ ಅವರಿಗೆ....

ಚಂಡೀಗಢ: ಕೋರ್ಟ್ ವಿಚಾರಣೆಯಿಂದ ತಪ್ಪಿಸಿಕೊಳ್ಳುತ್ತಿರುವ ವಿವಾದಾತ್ಮಕ ನಟಿ ಬಾಲಿವುಡ್ ನಟಿ ರಾಖಿ ಸಾವಂತ್ ಅವರಿಗೆ ಲೂಧಿಯಾನ ಕೋರ್ಟ್ ಮಂಗಳವಾರ  ಹೊಸದಾಗಿ ಬಂಧನ ವಾರಂಟ್ ಜಾರಿ ಮಾಡಿದೆ. 
ರಾಮಾಯಣ ರಚನಕಾರ ವಾಲ್ಮೀಕಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಖಿ ಸಾವಂತ್ ಅವರು ಆಗಸ್ಟ್ 7ರಂದು ವಿಚಾರಣೆಗೆ ಹಾಜರಾಗಬೇಕಿತ್ತು. ಆದರೆ ವಿಚಾರಣೆಗೆ ಬಾರದೆ ತಮ್ಮ ವಕೀಲರ ಮೂಲಕ ತಾವು ಅಮೆರಿಕ ಪ್ರವಾಸಕ್ಕೆ ತೆರಳುತ್ತಿರುವುದಾಗಿ ತಿಳಿಸಿದ್ದಾರೆ.
ಈ ಮಧ್ಯೆ ಜಾಮೀನು ಅವಧಿ ವಿಸ್ತರಿಸುವಂತೆ ಕೋರಿ ರಾಖಿ ಸಾವಂತ್ ಸಲ್ಲಿಸಿದ್ದ ಅರ್ಜಿಯನ್ನು ಕೆಳ ನ್ಯಾಯಾಲಯ ವಜಾಗೊಳಿಸಿದ್ದು, ಇಂದು ಅವರ ವಕೀಲರು ಜಿಲ್ಲಾ ಮತ್ತು ಸೆಸೆನ್ಸ್ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ.
ವಾಲ್ಮೀಕಿ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ರಾಖಿ ಮೇಲೆ ಈ ಹಿಂದೆ ಪ್ರಕರಣ ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿಯ ಮೇಲೆ ಲುಧಿಯಾನಾ ನ್ಯಾಯಾಲಯದ ಬಂಧನಾದೇಶ ಹೊರಡಿಸಿತ್ತು. ಅದರಂತೆ ನಟಿ ರಾಖಿ ಸಾವಂತ್ ಅವರು ವಿಚಾರಣೆಗೆ ಖುದ್ದು ಹಾಜರಾಗಿದ್ದರು. 
ಪ್ರಕರಣ ಸಂಬಂಧ ವಾದ ಪ್ರತಿವಾದಗಳನ್ನು ಆಲಿಸಿದ ನ್ಯಾಯಾಲಯ, ರು.1 ಲಕ್ಷದ ಎರಡು ಬಾಂಡ್ ಗಳನ್ನು ಪಡೆದುಕೊಂಡು ರಾಖಿ ಸಾವಂತ್ ಅವರಿಗೆ ಜಾಮೀನು ಮಂಜೂರು ಮಾಡಿತ್ತು. ಆದರೆ ಆ ಜಾಮೀನು ಅವಧಿ ವಿಸ್ತರಿಸಲು ಕೋರ್ಟ್ ನಿರಾಕರಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT