ಬಾಲಿವುಡ್

ರಜನಿ, ಅಕ್ಷಯ್ ಅಭಿನಯದ 2.0 ಚಿತ್ರದ ಬಿಡುಗಡೆ ಮುಂದಕ್ಕೆ!

Vishwanath S
ನವದೆಹಲಿ: ಭಾರತೀಯ ಚಿತ್ರರಂಗದ ಬಹು ನಿರೀಕ್ಷಿತ ಚಿತ್ರ 2.0 ಚಿತ್ರದ ಬಿಡುಗಡೆ ಇನ್ನು ಮುಂದಕ್ಕೆ ಹೋಗಿದೆ. 
ದಕ್ಷಿಣ ಭಾರತದ ಸೂಪರ್ ಸ್ಟಾರ್ ರಜನಿಕಾಂತ್ ಹಾಗೂ ಬಾಲಿವುಡ್ ನಟ ಅಕ್ಷಯ್ ಕುಮಾರ್ ಅಭಿನಯದ ಶಂಕರ್ ನಿರ್ದೇಶನದ 2.0 ಚಿತ್ರ ಜನವರಿ 25ರಂದು ಜಗತ್ತಿನಾದ್ಯಂತ ಅದ್ಧೂರಿಯಾಗಿ ಬಿಡುಗಡೆ ಮಾಡಲು ಚಿತ್ರ ತಂಡ ತೀರ್ಮಾನಿಸಿತ್ತು. ಆದರೆ ಇದೀಗ ಪೋಸ್ಟ್ ಪ್ರೊಡೆಕ್ಷನ್ ಕೆಲಸದಿಂದ ಚಿತ್ರ ಏಪ್ರಿಲ್ 27ರಂದು ಬಿಡುಗಡೆಯಾಗುವ ಸಾಧ್ಯತೆ ಇದೆ. 
2.0 ಚಿತ್ರದ ಆಡಿಯೋ ಬಿಡುಗಡೆಯನ್ನು ದುಬೈನಲ್ಲಿ ಅದ್ಧೂರಿಯಾಗಿ ಬಿಡುಗಡೆ ಮಾಡಲಾಗಿತ್ತು. ಇನ್ನೇನು ಚಿತ್ರ ಬಿಡುಗಡೆಯಾಗುತ್ತದೆ ಎಂದು ಭಾವಿಸಿದ್ದ ಅಭಿಮಾನಿಗಳಿಗೆ ಚಿತ್ರದ ಬಿಡುಗಡೆ ಮುಂದಕ್ಕೆ ಹೋಗಿರುವುದು ಭಾರೀ ನಿರಾಸೆ ಮೂಡಿಸಿದೆ. 
SCROLL FOR NEXT