ಬಾಹುಬಲಿ 2 ಚಿತ್ರದಲ್ಲಿ ನಟ ಶಾರುಖ್ ಖಾನ್?
ಬಹುನಿರೀಕ್ಷಿತ ಬಾಹುಬಲಿ-2 ಚಿತ್ರದಲ್ಲಿ ಬಾಲಿವುಡ್ ನಟ ಶಾರುಖ್ ಖಾನ್ ಸಹ ಸಣ್ಣ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ...
ಮುಂಬೈ: ಬಹುನಿರೀಕ್ಷಿತ ಬಾಹುಬಲಿ-2 ಚಿತ್ರದಲ್ಲಿ ಬಾಲಿವುಡ್ ನಟ ಶಾರುಖ್ ಖಾನ್ ಸಹ ಸಣ್ಣ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.
ಬಾಹುಬಲಿ 2 ಚಿತ್ರ ಬಾಹುಬಲಿ(ಪ್ರಭಾಸ್) ಮತ್ತು ಬಲ್ಲಾಳದೇವಾ (ರಾಣಾ ದಗ್ಗುಬಾಟಿ) ನಡುವೆ ನಡೆಯುವ ಚಿತ್ರಕಥೆಯಾಗಿದ್ದು ಇವರಿಬ್ಬರ ನಡುವೆ ಮಧ್ಯವರ್ತಿಯಾಗಿ ಶಾರುಖ್ ಖಾನ್ ಕಾಣಿಸಿಕೊಂಡಿದ್ದಾರಂತೆ.
ಏಪ್ರಿಲ್ 28ಕ್ಕೆ ಬಾಹುಬಲಿ 2 ಚಿತ್ರ ಬಿಡುಗಡೆಯಾಗುವ ಸಾಧ್ಯತೆ ಇದೆ. ಈ ಮಧ್ಯೆ ಚಿತ್ರದಲ್ಲಿ ದೊಡ್ಡ ದೊಡ್ಡ ಸ್ಟಾರ್ ನಟರು ಅಭಿನಯಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಕೆಲವು ದಿನಗಳ ಹಿಂದಷ್ಟೇ ತಮಿಳಿನ ಸೂರ್ಯ ಮತ್ತು ಮೋಹನ್ ಲಾಲ್ ಅಭಿನಯಿಸಿದ್ದಾರೆ ಎನ್ನುವ ಸುದ್ದಿ ಹಬ್ಬಿದ್ದು ಇದೀಗ ಈ ಪಟ್ಟಿಗೆ ಬಾಲಿವುಡ್ ನಟ ಶಾರುಖ್ ಖಾನ್ ಸಹ ಸೇಹಿದ್ದಾರೆ.
2015ರಲ್ಲಿ ಬಿಡುಗಡೆಯಾಗಿದ್ದ ಬಾಹುಬಲಿ ಚಿತ್ರ ವಿಶ್ವದಾದ್ಯಂತ 600 ಕೋಟಿ ಗಳಿಸಿತ್ತು. ಇದೀಗ ಸುಮಾರು 200 ಕೋಟಿ ಖರ್ಚಿನಲ್ಲಿ ನಿರ್ಮಿಸಲಾಗಿರುವ ಬಾಹುಬಲಿ 2 ಚಿತ್ರ ಬಿಡುಗಡೆಗೂ ಮುನ್ನ ವಿತರಣೆ ಹಕ್ಕು ಮತ್ತು ಸ್ಯಾಟಲೈಟ್ ಹಕ್ಕುಗಳಿಂದ 500 ಕೋಟಿ ಗಳಿಸಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.