ವೇಗವಾಗಿ 300 ಕೋಟಿ ಗಳಿಸಿದ 'ದಂಗಲ್'
ಆಮೀರ್ ಖಾನ್ ಅಭಿನಯದ ದಂಗಲ್ ಚಿತ್ರ ಭಾರತೀಯ ಚಿತ್ರರಂಗದಲ್ಲಿ ಅತಿ ವೇಗವಾಗಿ 300 ಕೋಟಿ ಗಳಿಸಿದ ಚಿತ್ರ ಎಂಬ ದಾಖಲೆಗೆ ಪಾತ್ರವಾಗಿದೆ...
ಮುಂಬೈ: ಆಮೀರ್ ಖಾನ್ ಅಭಿನಯದ ದಂಗಲ್ ಚಿತ್ರ ಭಾರತೀಯ ಚಿತ್ರರಂಗದಲ್ಲಿ ಅತಿ ವೇಗವಾಗಿ 300 ಕೋಟಿ ಗಳಿಸಿದ ಚಿತ್ರ ಎಂಬ ದಾಖಲೆಗೆ ಪಾತ್ರವಾಗಿದೆ.
ದಂಗಲ್ ಚಿತ್ರ ಬಿಡುಗಡೆಯಾಗಿ 13 ದಿನಗಳಲ್ಲಿ 300 ಕೋಟಿಗೂ ಹೆಚ್ಚು ಗಳಿಕೆ ಮಾಡಿದೆ ಎಂದು ಚಿತ್ರದ ವಕ್ತಾರ ತಿಳಿಸಿದ್ದಾರೆ. ಭಾರತದ ಕುಸ್ತಿಪಟು ಮಹಿವೀರ್ ಸಿಂಗ್ ಪೋಗಟ್ ಅವರ ಜೀವನಾಧಾರಿತ ಚಿತ್ರಕಥೆ ಹೊಂದಿದ್ದು ಚಿತ್ರವನ್ನು ನಿತೇಶ್ ತಿವಾರಿ ನಿರ್ದೇಸಿದ್ದರು.
ಕಳೆದ ಡಿಸೆಂಬರ್ 23ರಂದು ತೆರೆಕಂಡಿದ್ದ ಚಿತ್ರ ಮೊದಲ ವಾರದಲ್ಲೇ 106.95 ಕೋಟಿ ಹಣ ಗಳಿಕೆ ಮಾಡಿ ಬಾಕ್ಸ್ ಆಫೀಸ್ ನಲ್ಲಿ ಸದ್ದು ಮಾಡಿತ್ತು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.