ಅಮಿತಾಭ್ ಬಚ್ಚನ್, ಆಮೀರ್ ಖಾನ್ 
ಬಾಲಿವುಡ್

ಐಎಫ್ಎಫ್ಎಂ ಅತ್ಯುತ್ತಮ ನಟ ಪ್ರಶಸ್ತಿಗಾಗಿ ಅಮಿತಾಭ್, ಆಮೀರ್ ಮಧ್ಯ ತೀವ್ರ ಸ್ಪರ್ಧೆ

ಇದೇ ಮೊದಲ ಬಾರಿಗೆ ‘ಥಗ್ಸ್‌ ಆಫ್‌ ಹಿಂದೂಸ್ತಾನ್‌’ಚಿತ್ರದಲ್ಲಿ ಜೊತೆಯಾಗಿ ನಟಿಸುತ್ತಿರುವ ಬಾಲಿವುಡ್ ಸೂಪರ್ ಸ್ಟಾರ್ ಗಳಾದ ....

ನವದೆಹಲಿ: ಇದೇ ಮೊದಲ ಬಾರಿಗೆ ‘ಥಗ್ಸ್‌ ಆಫ್‌ ಹಿಂದೂಸ್ತಾನ್‌’ಚಿತ್ರದಲ್ಲಿ ಜೊತೆಯಾಗಿ ನಟಿಸುತ್ತಿರುವ ಬಾಲಿವುಡ್ ಸೂಪರ್ ಸ್ಟಾರ್ ಗಳಾದ ಅಮಿತಾಭ್ ಬಚ್ಚನ್ ಹಾಗೂ ಆಮೀರ್ ಖಾನ್ ಅವರು 2017ನೇ ಸಾಲಿನ ಮೆಲ್ಬೋರ್ನ್ ಭಾರತೀಯ ಚಲನ ಚಿತ್ರೋತ್ಸವದ(ಐಎಫ್ಎಫ್ಎಂ) ಅತ್ಯುತ್ತಮ ನಟ ಪ್ರಶಸ್ತಿಗೆ ನಾಮ ನಿರ್ದೇಶನಗೊಂಡಿದ್ದಾರೆ.
ಮಂಗಳವಾರ ಪ್ರಕಟಣೆಯ ಮೂಲಕ ಅತ್ಯುತ್ತಮ ನಟ ಪ್ರಶಸ್ತಿಯ ನಾಮಿನಿಗಳನ್ನು ಘೋಷಿಸಲಾಗಿದೆ.
ಪಿಂಕ್ ಚಿತ್ರದಲ್ಲಿನ ಅಭಿನಯಕ್ಕಾಗಿ ಅಮಿತಾಭ್ ಬಚ್ಚನ್ ಹಾಗೂ ಬ್ಲಾಕ್ ಬಸ್ಟರ್ ದಂಗಲ್ ಚಿತ್ರದಲ್ಲಿನ ಅಭಿನಯಕ್ಕಾಗಿ ಆಮೀರ್ ಖಾನ್ ಅವರು ನಾಮಿನೇಟ್ ಆಗಿದ್ದಾರೆ. ಅಲ್ಲದೆ ಟ್ರಾಪಡ್ ಚಿತ್ರದಲ್ಲಿನ ಅಭಿನಯಕ್ಕಾಗಿ ರಾಜಕುಮಾರ್ ರಾವ್, ಎಂಎಸ್ ಧೋನಿ ಚಿತ್ರದಲ್ಲಿನ ಅಭಿನಯಕ್ಕಾಗಿ ಸುಶಾಂತ್ ಸಿಂಗ್ ರಜಪುತ್ ಹಾಗೂ ಮುಕ್ತಿ ಭವನ್ ಚಿತ್ರದ ಅಭಿನಯಕ್ಕಾಗಿ ಲಲಿತ್ ಭೆಲ್ ನಾಮಿನೇಟ್ ಆಗಿದ್ದಾರೆ.
ಇನ್ನು ಅತ್ಯುತ್ತಮ ನಟಿ ಪ್ರಶಸ್ತಿಗಾಗಿ ಡೀಯರ್ ಜಿಂದಗಿ ಚಿತ್ರದಲ್ಲಿನ ಅಭಿನಯಕ್ಕಾಗಿ ಆಲಿಯಾ ಭಟ್, ಕಹಾನಿ 2 ಚಿತ್ರದಲ್ಲಿನ ಅಭಿನಯಕ್ಕಾಗಿ ವಿದ್ಯಾ ಬಾಲನ್, ಡಾ.ರಖ್ಮಾಬಾಯಿ ಚಿತ್ರದ ಅಭಿನಯಕ್ಕಾಗಿ ತನಿಷ್ಠಾ ಚಟರ್ಜಿ, ಲಿಫ್ಟಿಂಕ್ ಅಂಡರ್ ಮೈ ಬುರ್ಖಾ ಚಿತ್ರದಲ್ಲಿನ ಅಭಿನಯಕ್ಕಾಗಿ ಕೊಂಕಣ ಸೇನ್ ಹಾಗೂ ಪಿನ್ನೆಯಮ್ ಚಿತ್ರದಲ್ಲಿನ ಅಭಿನಯಕ್ಕಾಗಿ ಕಾವ್ಯಾ ಮಾಧವನ್ ಅವರು ನಾಮಿನೇಟ್ ಆಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel